ಉಡುಪಿ : ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಕೆಲ ಬಾಲಕಿಯರು ಹಾಗೂ ಕಾಲೇಜು ಆಡಳಿತ ಮಂಡಳಿ ನಡುವೆ ವಾಗ್ವಾದ ನಡೆದಿದ್ದು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ಜಿಲ್ಲಾಡಳಿತಕ್ಕೆ ನೋಟಿಸ್ ನೀಡಿ ನಾಲ್ಕು ವಾರಗಳಲ್ಲಿ ಈ ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸುವಂತೆ ಸೂಚಿಸಿದೆ.
ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್, ಕುಂದಾಪುರ ಉಪವಿಭಾಗಾಧಿಕಾರಿ ಕೆ ರಾಜು ನೇತೃತ್ವದಲ್ಲಿ ಹಾಗೂ ಉಡುಪಿ ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದಲ್ಲಿ ಸಮಿತಿಯೊಂದನ್ನು ರಚಿಸಿದ್ದು, ಪಿಯು ಶಿಕ್ಷಣ ಇಲಾಖೆಯ ಉಪನಿರ್ದೇಶಕರ ನೇತೃತ್ವದ ಸಮಿತಿಯ ಸದಸ್ಯರು ಫೆ.2ರಂದು ಬುಧವಾರ ಕಾಲೇಜಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕುರಿತು ಮಾತನಾಡಿದ ಜಿಲ್ಲಾಧಿಕಾರಿ, ನಾಲ್ಕು ವಾರಗಳಲ್ಲಿ ವರದಿ ನೀಡುವಂತೆ ಮಾನವ ಹಕ್ಕುಗಳ ಆಯೋಗದಿಂದ ಜಿಲ್ಲಾಡಳಿತಕ್ಕೆ ನೋಟಿಸ್ ಬಂದಿದೆ. ಹಾಗಾಗಿ ಹೊಸ ಸಮಿತಿಯನ್ನು ನೇಮಿಸಲಾಗಿದ್ದು, ವರದಿ ಬಂದ ತಕ್ಷಣ ಆಯೋಗಕ್ಕೆ ಸಲ್ಲಿಸಲಾಗುವುದು ಎಂದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…