ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅನೇಕ ಚರ್ಚೆಗಳು ನಡೆಯುತ್ತಿದ್ದು, ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ ಎಂದು ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೇಳಿದ್ದಾರೆ.
ಈ ಕುರಿತು ಟ್ವೀಟ್ ಮಾಡಿರುವ ವಿದ್ಯಾರ್ಥಿನಿ ಆಲಿಯಾ, “ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು. ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ. ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದಿದ್ದಾರೆ.
ಇದನ್ನೂ ಓದಿ :
ಮತ್ತೊರ್ವ ವಿದ್ಯಾರ್ಥಿ ಮಸೂದ್ ಟ್ವೀಟ್ ಮಾಡಿ, ಹಿಜಾಬ್ ಧರಿಸುವುದಕ್ಕೆ ಹಿಂದಿನಿಂದಲೂ ಯಾರೂ ನಿರ್ಬಂಧಿಸುವುದಿಲ್ಲ, ಹಿಜಾಬ್ ವಿರುದ್ಧ ತಿರುಗುವ ಯಾವುದೇ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.
ಇನ್ನು ಕರ್ನಾಟಕ ಸರ್ಕಾರದ ಆದೇಶವನ್ನು ಧಿಕ್ಕರಿಸಿ ‘ಹಿಜಾಬ್’ ಧರಿಸಿ ತರಗತಿಗೆ ಹಾಜರಾದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮಂಗಳವಾರ ಆಯಾ ತರಗತಿಯಿಂದ ಹೊರಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.
ಕಾಲೇಜಿನ ಆವರಣದಲ್ಲಿ ಮಾಧ್ಯಮದವರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…