Featured

ಉಡುಪಿ ಹಿಜಾಬ್ ವಿವಾದ  : ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ : ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ – Vishwanews24

ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ..

ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು..

ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ.

ಹಿಜಾಬ್ ವಿರುದ್ಧ ತಿರುಗುವ ಯಾವುದೇ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ..

ಉಡುಪಿ: ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಹಿಜಾಬ್ ವಿವಾದಕ್ಕೆ ಸಂಬಂಧಿಸಿದಂತೆ ಅನೇಕ ಚರ್ಚೆಗಳು ನಡೆಯುತ್ತಿದ್ದು, ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ ಎಂದು ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೇಳಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ವಿದ್ಯಾರ್ಥಿನಿ ಆಲಿಯಾ, “ಧಾರ್ಮಿಕ, ಸಾಂವಿಧಾನಿಕ ಹಕ್ಕಾದ ಹಿಜಾಬ್ ಧರಿಸಿಯೇ ಕಾಲೇಜಿಗೆ ಬರುತ್ತೇವೆ. ಅದು ನಾವು ತೆರಿಗೆ ಪಾವತಿಸುವ ಸರ್ಕಾರಿ ಕಾಲೇಜು. ಯಾರು ಕೂಡ ಹಸ್ತಕ್ಷೇಪ ಮಾಡುವ ಅವಶ್ಯಕತೆಯಿಲ್ಲ. ಬೆದರಿಕೆಗಳಿಂದ ನಮ್ಮ ನ್ಯಾಯಪರ ಹೋರಾಟವನ್ನು ಹತ್ತಿಕ್ಕಲು ಸಾಧ್ಯವಿಲ್ಲ” ಎಂದಿದ್ದಾರೆ.

ಇದನ್ನೂ ಓದಿ :

ಮತ್ತೊರ್ವ ವಿದ್ಯಾರ್ಥಿ ಮಸೂದ್ ಟ್ವೀಟ್ ಮಾಡಿ, ಹಿಜಾಬ್ ಧರಿಸುವುದಕ್ಕೆ ಹಿಂದಿನಿಂದಲೂ ಯಾರೂ ನಿರ್ಬಂಧಿಸುವುದಿಲ್ಲ, ಹಿಜಾಬ್ ವಿರುದ್ಧ ತಿರುಗುವ ಯಾವುದೇ ಪಿತೂರಿಗಳು ಯಶಸ್ವಿಯಾಗಲು ನಾವು ಬಿಡುವುದಿಲ್ಲ ಎಂದು ಹೇಳಿದ್ದಾರೆ.

ಇನ್ನು ಕರ್ನಾಟಕ ಸರ್ಕಾರದ ಆದೇಶವನ್ನು ಧಿಕ್ಕರಿಸಿ ‘ಹಿಜಾಬ್’ ಧರಿಸಿ ತರಗತಿಗೆ ಹಾಜರಾದ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರತಿಭಟನಾ ನಿರತ ವಿದ್ಯಾರ್ಥಿನಿಯರನ್ನು ಮಂಗಳವಾರ ಆಯಾ ತರಗತಿಯಿಂದ ಹೊರಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಕಾಲೇಜಿನ ಆವರಣದಲ್ಲಿ ಮಾಧ್ಯಮದವರ ಪ್ರವೇಶವನ್ನು ನಿಷೇಧಿಸಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ.

ಇದನ್ನೂ ಓದಿ :

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago