ಉಡುಪಿ: ಉಡುಪಿ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಆರು ಮಂದಿ ವಿದ್ಯಾರ್ಥಿನಿಯರಿಗೆ ಹಾಗೂ ಅವರ ಪೋಷಕರಿಗೆ ಹಿಜಾಬ್ ಹಾಕದೆ ಬಂದು ವಿದ್ಯಾರ್ಥಿನಿಯರು ತರಗತಿಗೆ ಬರುವಂತೆ ವಿನಂತಿ ಮಾಡಲಾಗುವುದು. ಒಂದು ವೇಳೆ ಇದಕ್ಕೆ ಒಪ್ಪದಿದ್ದರೆ ಅವರಿಗೆ ಆನ್‌ಲೈನ್ ತರಗತಿ ಮಾಡಿ ಪರೀಕ್ಷೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಉಡುಪಿ ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್ ತಿಳಿಸಿದ್ದಾರೆ.
ಉಡುಪಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸ್ಕಾರ್ಫ್ ವಿಚಾರವಾಗಿ ಸರಕಾರ ಯಥಾಸ್ಥಿತಿ ಕಾಪಾಡುವಂತೆ ಹೊರಡಿಸಿದ ಆದೇಶ ಸಂಬಂಧ ಮಂಗಳವಾರ ಕಾಲೇಜು ಅಭಿವೃದ್ಧಿ ಸಮಿತಿ ನಡೆಸಿದ ಸಭೆಯ ಬಳಿಕ ನಿವೃತ್ತ ಪೊಲೀಸ್ ಅಧಿಕಾರಿ ಜಿ.ಎ. ಬಾವ ನೇತೃತ್ವದಲ್ಲಿ ಮುಸ್ಲಿಮ್ ಮುಖಂಡರು ಭೇಟಿ ಮಾಡಿ ಚರ್ಚಿಸಿದ್ದರು. ಆ ಬಳಿಕ ಕಾಲೇಜು ಅಭಿವೃದ್ಧಿ ಸಮಿತಿ ಈ ನಿರ್ಧಾರವನ್ನು ತೆಗೆದುಕೊಂಡಿದೆ ಎಂದರು. ಯಾರದ್ದೋ ಕುಮ್ಮಕ್ಕಿನಿಂದ ಪೋಷಕರು ಮಕ್ಕಳ ಭವಿಷ್ಯ ಹಾಳು ಮಾಡುವುದು ಸರಿಯಲ್ಲ. ಕಾಲೇಜಿನಲ್ಲಿ ಶಿಸ್ತು ಎಂಬುದು ಅತಿ ಅಗತ್ಯ. ಹಾಗಾಗಿ ಕಾಲೇಜು ಮತ್ತು ಮಕ್ಕಳ ಭವಿಷ್ಯದ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳಿಗೆ ತಿಳಿಹೇಳಿ ಹಿಂದೆ ಇದ್ದ ಪದ್ಧತಿ ಮುಂದುವರೆಸಲು ಅವಕಾಶ ಕಲ್ಪಿಸಬೇಕು. ನಾವು ಯಾವುದೇ ಕಾರಣಕ್ಕೂ ಆ ಪದ್ಧತಿಯನ್ನು ಬದಲಾಯಿಸುವುದಿಲ್ಲ ಎಂದು ರಘುಪತಿ ಭಟ್ ಹೇಳಿದರು.
ಇದನ್ನೂ ಓದಿ :
ಸ್ಕಾರ್ಫ್ ಹಾಕಲು ಒಂದು ಕಾಲೇಜಿನಲ್ಲಿ ಅವಕಾಶ ನೀಡಿದರೆ ಮುಂದೆ ಎಲ್ಲ ಕಾಲೇಜಿನಲ್ಲಿ ಇದು ಆರಂಭವಾಗುತ್ತದೆ. ಬಳಿಕ ಇದಕ್ಕೆ ಪ್ರತಿರೋಧವಾಗಿ ಕೇಸರಿ ಶಾಲು, ಕೇಸರಿ ಪೇಟ ಧರಿಸಿಕೊಂಡು ಬರುವ ವಿವಾದವೂ ಎದುರಾಗುತ್ತದೆ. ಜಿಲ್ಲೆಯ ಕೋಮು ಸೌಹಾರ್ದತೆಕ್ಕೆ ಈ ಸಣ್ಣ ವಿಚಾರದಿಂದ ಧಕ್ಕೆಯಾಗದಂತೆ ಮುಖಂಡರಿಗೆ ಮನವಿ ಮಾಡಿದ್ದೇವೆ. ಅವರು ಪೋಷಕರೊಂದಿಗೆ ಮಾತನಾಡಿ ಎರಡು ದಿನಗಳಲ್ಲಿ ಮತ್ತೆ ನಮ್ಮನ್ನು ಭೇಟಿಯಾಗುವುದಾಗಿ ಹೇಳಿದ್ದಾರೆ ಎಂದು ರಘುಪತಿ ಭಟ್ ತಿಳಿಸಿದರು.
ಈ ಆರು ಮಕ್ಕಳ ಪೋಷಕರನ್ನು ಪ್ರಾಂಶುಪಾಲರು ಕರೆದು, ಹಿಜಾಬ್ ಧರಿಸದೆ ತರಗತಿ ಬರುವಂತೆ ಮನವಿ ಮಾಡಲಿದ್ದಾರೆ. ಈಗಾಗಲೇ ಒಂದೂವರೆ ವರ್ಷ ಹಿಜಾಬ್ ಇಲ್ಲದೆ ಇವರು ತರಗತಿಗೆ ಬಂದಿದ್ದಾರೆ. ಇನ್ನೂ ಕೇವಲ ಒಂದು ತಿಂಗಳು ಮಾತ್ರ ತರಗತಿ ಇರುತ್ತದೆ. ಆ ನಂತರ ಪರೀಕ್ಷೆ ನಡೆಯುತ್ತದೆ. ಒಂದು ವೇಳೆ ವಿದ್ಯಾರ್ಥಿನಿಯರು ಹಾಗೂ ಪೋಷಕರು ಹಿಜಾಬ್ ಇಲ್ಲದೆ ಬರಲು ಒಪ್ಪದಿದ್ದರೆ ನಾವು ತರಗತಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಅವರಿಗೆ ಬೇಕಾದರೆ ಆನ್‌ಲೈನ್ ತರಗತಿ ಮಾಡಿ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು. ಮುಂದಿನ ವರ್ಷ ಯಾವ ಕಾಲೇಜಿಗೆ ಬೇಕಾದರೂ ಅವರು ಸೇರಿಕೊಳ್ಳಬಹುದು ಎಂದು ತಿಳಿಸಿದರು.
ಇದನ್ನೂ ಓದಿ :
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…