ಉಡುಪಿ: ಗುಜರಾತ್ ಚುನಾವಣಾ ಗೆಲವು ಬಿಜೆಪಿಯವರಿಗೆ ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಚುನಾವಣೆ ಕೂಡ ಯಾಕೆ ದಿಕ್ಸೂಚಿಯಾಗಬಾರದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಪ್ರಶ್ನಿಸಿದ್ದಾರೆ.
ಗುಜರಾತ್ ರಾಜ್ಯದಲ್ಲಿ ಈ ಹಿಂದಿನ ಚುನಾವಣೆಗಿಂತ ಗುಜರಾತ್ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್ ನಲ್ಲಿ ಹಿನ್ನಡೆಯಾಗಿದೆ. ಕೇವಲ ಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶವನ್ನು ಮಾತ್ರ ವಿಶ್ಲೇಷಣೆ ಮಾಡುವ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ತನ್ನ ಸರಕಾರ ಇದ್ದು ಕೂಡ ಸೋಲು ಕಂಡಿರುವುದನ್ನು ಯಾಕೆ ಹೇಳುತ್ತಿಲ್ಲ. ಸತತ 15 ವರ್ಷಗಳಿಂದ ದೆಹಲಿ ಮಹಾನಗರ ಪಾಲಿಕೆಯಲ್ಲಿ ಕೂಡ ಬಿಜೆಪಿ ಸೋತಿರುವುದು ಮುಂದಿನ ದಿನಗಳಲ್ಲಿ ಇತರ ರಾಜ್ಯಗಳಲ್ಲಿ ಕೂಡ ಸೋಲಲು ಹಾಕಿರುವ ಬುನಾದಿ ಎನ್ನುವುದು ಮರೆಯಬಾರದು.
ಬಿಜೆಪಿಯ ಜನವಿರೋಧಿ ನೀತಿಗಳಿಂದ ಬೆಸತ್ತಿರುವ ಜನತೆ ಹಿಮಾಚಲ ಪ್ರದೇಶ ಹಾಗೂ ದೆಹಲಿಯ ಮಹಾ ನಗರ ಪಾಲಿಕೆ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಿದೆ. ಗುಜರಾತ್ ನಲ್ಲಿ ಅಲ್ಲಿನ ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗಿದ್ದು ಕರ್ನಾಟಕದಲ್ಲಿ ಸದ್ಯ ಅತೀ ಭ್ರಷ್ಠ ಹಾಗೂ ಜನವಿರೋಧಿ ಸರಕಾರವಿದ್ದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶದಂತೆ ನಮ್ಮ ರಾಜ್ಯದಲ್ಲಿಯೂ ಕೂಡ ಜನರು ಬಿಜೆಪಿಯನ್ನು ಕಿತ್ತೊಗೆಯಲಿದ್ದಾರೆ ಮತ್ತು ಕಾಂಗ್ರೆಸ್ ಗೆ ಮತ್ತೆ ಅವಕಾಶ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…