Featured

ಉಡುಪಿ : ಹಿಮಾಚಲ ಪ್ರದೇಶ ಚುನಾವಣೆ ಕೂಡ ಮುಂದಿನ ಕರ್ನಾಟಕ ಚುನಾವಣೆಗೆ ಯಾಕೆ ದಿಕ್ಸೂಚಿಯಾಗಬಾರದು : ಪ್ರಖ್ಯಾತ್ ಶೆಟ್ಟಿ – Vishwanews24

ಉಡುಪಿ : ಹಿಮಾಚಲ ಪ್ರದೇಶದಂತೆ ಕರ್ನಾಟಕದಲ್ಲಿಯೂ ಕೂಡ ಜನರು ಬಿಜೆಪಿಯನ್ನು ಕಿತ್ತೊಗೆಯಲಿದ್ದಾರೆ

ಉಡುಪಿ: ಗುಜರಾತ್ ಚುನಾವಣಾ ಗೆಲವು ಬಿಜೆಪಿಯವರಿಗೆ ಮುಂದಿನ ಕರ್ನಾಟಕ ಚುನಾವಣೆಗೆ ದಿಕ್ಸೂಚಿಯಾದರೆ ಹಿಮಾಚಲ ಪ್ರದೇಶ ಚುನಾವಣೆ ಕೂಡ ಯಾಕೆ ದಿಕ್ಸೂಚಿಯಾಗಬಾರದು ಎಂದು ಉಡುಪಿ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ ಪ್ರಶ್ನಿಸಿದ್ದಾರೆ.

ಗುಜರಾತ್ ರಾಜ್ಯದಲ್ಲಿ ಈ ಹಿಂದಿನ ಚುನಾವಣೆಗಿಂತ ಗುಜರಾತ್‌ ನಲ್ಲಿ ಬಿಜೆಪಿ ಗೆದ್ದಿರುವುದರಲ್ಲಿ ಆಶ್ಚರ್ಯ ಇಲ್ಲ, ಆಮ್‌ ಆದ್ಮಿ ಪಕ್ಷದವರು ಸ್ಪರ್ಧೆ ಮಾಡಿ, ನಮ್ಮ ಮತಗಳನ್ನು ಪಡೆದುಕೊಂಡಿದ್ದಾರೆ, ಬಹುತೇಕ ಕ್ಷೇತ್ರಗಳಲ್ಲಿ ಆಮ್‌ ಆದ್ಮಿ ಪಕ್ಷ ನಮ್ಮ ಮತಗಳನ್ನೇ ಕಬಳಿಸಿದೆ. ಇದರಿಂದ ಗುಜರಾತ್‌ ನಲ್ಲಿ ಹಿನ್ನಡೆಯಾಗಿದೆ. ಕೇವಲ ಗುಜರಾತ್ ರಾಜ್ಯದ ಚುನಾವಣಾ ಫಲಿತಾಂಶವನ್ನು ಮಾತ್ರ ವಿಶ್ಲೇಷಣೆ ಮಾಡುವ ಬಿಜೆಪಿ ಹಿಮಾಚಲ ಪ್ರದೇಶದಲ್ಲಿ ತನ್ನ ಸರಕಾರ ಇದ್ದು ಕೂಡ ಸೋಲು ಕಂಡಿರುವುದನ್ನು ಯಾಕೆ ಹೇಳುತ್ತಿಲ್ಲ. ಸತತ 15 ವರ್ಷಗಳಿಂದ ದೆಹಲಿ ಮಹಾನಗರ ಪಾಲಿಕೆಯಲ್ಲಿ ಕೂಡ ಬಿಜೆಪಿ ಸೋತಿರುವುದು ಮುಂದಿನ ದಿನಗಳಲ್ಲಿ ಇತರ ರಾಜ್ಯಗಳಲ್ಲಿ ಕೂಡ ಸೋಲಲು ಹಾಕಿರುವ ಬುನಾದಿ ಎನ್ನುವುದು ಮರೆಯಬಾರದು.

ಬಿಜೆಪಿಯ ಜನವಿರೋಧಿ ನೀತಿಗಳಿಂದ ಬೆಸತ್ತಿರುವ ಜನತೆ ಹಿಮಾಚಲ ಪ್ರದೇಶ ಹಾಗೂ ದೆಹಲಿಯ ಮಹಾ ನಗರ ಪಾಲಿಕೆ ಚುನಾವಣೆಯಲ್ಲಿ ಸೂಕ್ತ ಉತ್ತರ ನೀಡಿದೆ. ಗುಜರಾತ್ ನಲ್ಲಿ ಅಲ್ಲಿನ ಸ್ಥಳೀಯ ವಿಚಾರಗಳ ಮೇಲೆ ಫಲಿತಾಂಶ ನಿರ್ಧಾರವಾಗಿದ್ದು ಕರ್ನಾಟಕದಲ್ಲಿ ಸದ್ಯ ಅತೀ ಭ್ರಷ್ಠ ಹಾಗೂ ಜನವಿರೋಧಿ ಸರಕಾರವಿದ್ದು ಮುಂದಿನ ದಿನಗಳಲ್ಲಿ ಹಿಮಾಚಲ ಪ್ರದೇಶದಂತೆ ನಮ್ಮ ರಾಜ್ಯದಲ್ಲಿಯೂ ಕೂಡ ಜನರು ಬಿಜೆಪಿಯನ್ನು ಕಿತ್ತೊಗೆಯಲಿದ್ದಾರೆ ಮತ್ತು ಕಾಂಗ್ರೆಸ್ ಗೆ ಮತ್ತೆ ಅವಕಾಶ ನೀಡಲಿದ್ದಾರೆ ಎಂದು ಅವರು ಹೇಳಿದ್ದಾರೆ

Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

2 days ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

2 days ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

2 days ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

2 days ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

2 days ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

2 days ago