ಉಡುಪಿ : ಹಿರಿಯ ಬಿಜೆಪಿ ಮುಖಂಡ, ಹೊಟೇಲ್ ಉದ್ಯಮಿ ಬಿ. ಸುಧಾಕರ್ ಶೆಟ್ಟಿ (72) ಇಂದು ಮುಂಜಾನೆ ಹೃದಯಾಘಾತದಿಂದ ಉಡುಪಿಯ ಗಾಂಧಿ ಆಸ್ಪತ್ರೆಯಲ್ಲಿ ನಿಧನರಾದರು.
ಸುಧಾಕರ್ ಶೆಟ್ಟಿ ಅವರಿಗೆ ಇಂದು ಬೆಳಿಗ್ಗೆ ತೀವ್ರವಾಗಿ ಎದೆ ನೋವು ಕಾಣಿಸಿಕೊಂಡಿದ್ದು, ತಕ್ಷಣ ಮನೆಯವರು ಉಡುಪಿಯ ಗಾಂಧಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ಸರಳ ಸಜ್ಜನಿಕೆ ಸುಧಾಕರ ಶೆಟ್ಟಿಯವರು ಕರಾವಳಿ ಬೈಪಾಸ್ ನಲ್ಲಿರುವ ಶಾರದಾ ಹೊಟೇಲ್ ನ ಮಾಲಕರಾಗಿದ್ದ ಇವರು, ಹಲವು ವರ್ಷಗಳಿಂದ ಹೊಟೇಲ್ ಉದ್ಯಮ ನಡೆಸುತ್ತಿದ್ದರು.
2009ರಿಂದ 2012ರವರೆಗೆ ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದ ಅವರು, ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯಲ್ಲಿ 1999ರಲ್ಲಿ ಯು.ಆರ್.ಸಭಾಪತಿ ವಿರುದ್ಧ ಅಲ್ಪ ಮತದಿಂದ ಸೋಲು ಕಂಡಿದ್ದರು.
2004ರ ಚುನಾವಣೆಯಲ್ಲಿ ಟಿಕೆಟ್ ಬಿಜೆಪಿಯಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಬಿಜೆಪಿ ಪಕ್ಷದಲ್ಲಿ ವಿವಿಧ ಹುದ್ದೆಗಳನ್ನು ಅವರು ಅಲಂಕರಿಸಿದ್ದರು.
ಉಡುಪಿ ನಗರ ಸಭೆಯ ಉಪಾಧ್ಯಕ್ಷರಾಗಿಯೂ ಆಯ್ಕೆಯಾಗಿದ್ದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…