Featured

ಉಡುಪಿ : ಹೀಟ್ ವೇವ್ ಸ್ಟ್ರೋಕ್‌ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು – vishwanews24

ಉಡುಪಿ : ಹೀಟ್ ವೇವ್ ಸ್ಟ್ರೋಕ್‌ ನಿಂದ ಕಾರ್ಮಿಕರ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಜಿಲ್ಲಾಡಳಿತದಿಂದ ಸಲಹೆ ಸೂಚನೆಗಳು

 ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ, ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷಿಯಿಂದ ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಿಕರಿಗೆ ಮತ್ತು ಕಾರ್ಮಿಕರಿಗೆ ಈ ಕೆಳಕಂಡ ಸಲಹೆ–ಸೂಚನೆಗಳನ್ನು ನೀಡಿ ಮುಂದಿನ ದಿನಗಳಲ್ಲಿ ತಮ್ಮ ಸುರಕ್ಷತೆಯನ್ನು ಕಾವಾಡುವ ಹಿನ್ನಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಿದೆ.

 ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ತಂಪಾದ ಕುಡಿಯುವ ನೀರು ಮತ್ತು ಎಲೆಕ್ಟೊçÃಲೈಟ್ ಪೂರಕಗಳ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು. ಡಿ–ಹೈಡ್ರೇಟ್ ಆಗದಿರಲು ಕಾರ್ಮಿಕರು ಮತ್ತು ಎಲ್ಲರೂ ಪ್ರತಿ 20 ನಿಮಿಷಗಳಿಗೊಮ್ಮೆ ಅಥವಾ ಹೆಚ್ಚು ಭಾರಿ ನೀರನ್ನು ಕುಡಿಯುವಂತೆ ಹಾಗೂ ಕೆಲಸದ ಮದ್ಯದಲ್ಲಿ ವಿಶ್ರಾಂತಿ ಪಡೆದು ಕೆಲಸ ಮಾಡಲು ಗಮನ ವಹಿಸಬೇಕು. ಶ್ರಮದಾಯಕ ಮತ್ತು ಹೊರಾಂಗಣ ಚಟುವಟಿಕೆಗಳನ್ನು ತಾಪಮಾನ ಕಡಿಮೆ ಇರುವ ಸಮಯದಲ್ಲಿ ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸಬೇಕು. ಅದಷ್ಟು ಕಾರ್ಮಿಕರು ಬೆಳಿಗ್ಗೆ 11 ರಿಂದ ಸಂಜೆ 04 ರವರೆಗೆ ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಮಾಲೀಕರು ಎಚ್ಚರ ವಹಿ¸ಸಬೇಕು. ಸಾಧ್ಯವಾದಲ್ಲಿ ಬೃಹತ್ ಕಟ್ಟಡ ಮತ್ತು ಇತರೆ ನಿರ್ಮಾಣದಾರರು ಕೆಲಸದ ಪಾಳಿಯನ್ನು ರಾತ್ರಿ ವೇಳೆ ಮಾಡಬಹುದಾಗಿರುತ್ತದೆ.

 ಹೆಚ್ಚಿನ ಬಿಸಿಲಿನ ತಾಪಮಾನವಿರುವ ಸಮಯದಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲವಾಗುವಂತೆ ನೆರಳು ಇರುವ ಪ್ರದೇಶವನ್ನು ಮಾಲೀಕರು ಒದಗಿಸಬೇಕು ಅಥವಾ ನೌಕರರು ಮತ್ತು ಕಾರ್ಮಿಕರಿಗೆ ಕೆಲಸ ಸಮಯವನ್ನು ಕಾರ್ಮಿಕರೊಂದಿಗೆ ಸಮಾಲೋಚಿಸಿ ಮರು–ನಿಗದಿಪಡಿಸಬೇಕು. ಕೆಲಸದ ಸ್ಥಳದ ಬಳಿ ವಿಶ್ರಾಂತಿ ಪಡೆಯಲು ಬೇಕು. 

  ಕಾರ್ಮಿಕರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಿದ ಆರೋಗ್ಯ ಸಲಹೆಯನ್ನು ಅನುಸರಿಸಿ, ಕಾರ್ಮಿಕರ ನಿಯಮಿತ ಆರೋಗ್ಯ ತಪಾಸಣೆಯನ್ನು ಖಚಿತಪಡಿಸಕೊಳ್ಳಲು ಆರೋಗ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಕೆಲಸದ ಸಮಯದಲ್ಲಿ ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ/ಬಟ್ಟೆ ಮತ್ತು ಟೋಪಿ, ಕೂಲಿಂಗ್ ಗ್ಲಾಸ್ ಧರಿಸಬೇಕು. 

ಒಳಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಬAಧಿಸಿದAತೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಮಾಲೀಕರು ತೆಗೆದುಕೊಳ್ಳಬೇಕು. ಹೀಟ್ ಸ್ಟೊçÃಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವAತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬೇಕು. ಹೀಟ್ ವೇವ್ ಸ್ಟೊçÃಕ್‌ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

1 day ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

1 day ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

1 day ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago