ಉಡುಪಿ: ಪ್ರಸ್ತುತ ಬೇಸಿಗೆ ಹಿನ್ನಲೆಯಲ್ಲಿ ಸೂರ್ಯನ ಶಾಖದಿಂದ ತಾಪಮಾನ ದಿನದಿಂದ ದಿನಕ್ಕೆ, ಹೆಚ್ಚಾಗುತ್ತಿರುವುದರಿಂದ ಹೀಟ್ ವೇವ್ ಸ್ಟೋಕ್ (ಶಾಖದ ಹೊಡೆತ)ದಿಂದಾಗಿ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆಯಿರುವುದರಿಂದ, ಜಿಲ್ಲಾಡಳಿತ ಮತ್ತು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರವು ಮುಂಜಾಗ್ರತಾ ಕ್ರಮವಾಗಿ ಹೊರಗಡೆ ಕೆಲಸ ನಿರ್ವಹಿಸುವ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ, ಬೀದಿ ಬದಿ ವ್ಯಾಪಾರಸ್ಥರ, ವಾಹನ ಚಾಲಕರ ಮತ್ತು ಇತರೆ ವರ್ಗದ ಎಲ್ಲಾ ಕೆಲಸಗಾರರ ಆರೋಗ್ಯವನ್ನು ಕಾಪಾಡುವ ಮತ್ತು ಸುರಕ್ಷತೆಯನ್ನು ಒದಗಿಸುವ ದೃಷಿಯಿಂದ ಜಿಲ್ಲೆಯ ಎಲ್ಲಾ ಕಟ್ಟಡ ಮತ್ತು ಇತರೆ ನಿರ್ಮಾಣದಾರ ಮತ್ತು ಇತರೆ ಉದ್ದಿಮೆಗಳ ಮಾಲಿಕರಿಗೆ ಮತ್ತು ಕಾರ್ಮಿಕರಿಗೆ ಈ ಕೆಳಕಂಡ ಸಲಹೆ–ಸೂಚನೆಗಳನ್ನು ನೀಡಿ ಮುಂದಿನ ದಿನಗಳಲ್ಲಿ ತಮ್ಮ ಸುರಕ್ಷತೆಯನ್ನು ಕಾವಾಡುವ ಹಿನ್ನಲೆಯಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವಂತೆ ಕೋರಿದೆ.
ಕೆಲಸದ ಸ್ಥಳದಲ್ಲಿ ಕಾರ್ಮಿಕರಿಗೆ ತಂಪಾದ ಕುಡಿಯುವ ನೀರು ಮತ್ತು ಎಲೆಕ್ಟೊçÃಲೈಟ್ ಪೂರಕಗಳ ವ್ಯವಸ್ಥೆಯನ್ನು ಮಾಲೀಕರು ಮಾಡಬೇಕು. ಡಿ–ಹೈಡ್ರೇಟ್ ಆಗದಿರಲು ಕಾರ್ಮಿಕರು ಮತ್ತು ಎಲ್ಲರೂ ಪ್ರತಿ 20 ನಿಮಿಷಗಳಿಗೊಮ್ಮೆ ಅಥವಾ ಹೆಚ್ಚು ಭಾರಿ ನೀರನ್ನು ಕುಡಿಯುವಂತೆ ಹಾಗೂ ಕೆಲಸದ ಮದ್ಯದಲ್ಲಿ ವಿಶ್ರಾಂತಿ ಪಡೆದು ಕೆಲಸ ಮಾಡಲು ಗಮನ ವಹಿಸಬೇಕು. ಶ್ರಮದಾಯಕ ಮತ್ತು ಹೊರಾಂಗಣ ಚಟುವಟಿಕೆಗಳನ್ನು ತಾಪಮಾನ ಕಡಿಮೆ ಇರುವ ಸಮಯದಲ್ಲಿ ಅಂದರೆ ಬೆಳಗಿನ ಅಥವಾ ಸಂಜೆಯ ಸಮಯದಲ್ಲಿ ನಿರ್ವಹಿಸಬೇಕು. ಅದಷ್ಟು ಕಾರ್ಮಿಕರು ಬೆಳಿಗ್ಗೆ 11 ರಿಂದ ಸಂಜೆ 04 ರವರೆಗೆ ನೇರ ಸೂರ್ಯನ ಬಿಸಿಲಿನಲ್ಲಿ ಕೆಲಸ ನಿರ್ವಹಿಸದಂತೆ ಮಾಲೀಕರು ಎಚ್ಚರ ವಹಿ¸ಸಬೇಕು. ಸಾಧ್ಯವಾದಲ್ಲಿ ಬೃಹತ್ ಕಟ್ಟಡ ಮತ್ತು ಇತರೆ ನಿರ್ಮಾಣದಾರರು ಕೆಲಸದ ಪಾಳಿಯನ್ನು ರಾತ್ರಿ ವೇಳೆ ಮಾಡಬಹುದಾಗಿರುತ್ತದೆ.
ಹೆಚ್ಚಿನ ಬಿಸಿಲಿನ ತಾಪಮಾನವಿರುವ ಸಮಯದಲ್ಲಿ ಕಾರ್ಮಿಕರಿಗೆ ಕೆಲಸ ಮಾಡಲು ಅನುಕೂಲವಾಗುವಂತೆ ನೆರಳು ಇರುವ ಪ್ರದೇಶವನ್ನು ಮಾಲೀಕರು ಒದಗಿಸಬೇಕು ಅಥವಾ ನೌಕರರು ಮತ್ತು ಕಾರ್ಮಿಕರಿಗೆ ಕೆಲಸ ಸಮಯವನ್ನು ಕಾರ್ಮಿಕರೊಂದಿಗೆ ಸಮಾಲೋಚಿಸಿ ಮರು–ನಿಗದಿಪಡಿಸಬೇಕು. ಕೆಲಸದ ಸ್ಥಳದ ಬಳಿ ವಿಶ್ರಾಂತಿ ಪಡೆಯಲು ಬೇಕು.
ಕಾರ್ಮಿಕರಿಗಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಹೊರಡಿಸಿದ ಆರೋಗ್ಯ ಸಲಹೆಯನ್ನು ಅನುಸರಿಸಿ, ಕಾರ್ಮಿಕರ ನಿಯಮಿತ ಆರೋಗ್ಯ ತಪಾಸಣೆಯನ್ನು ಖಚಿತಪಡಿಸಕೊಳ್ಳಲು ಆರೋಗ್ಯ ಇಲಾಖೆಗಳೊಂದಿಗೆ ಸಮನ್ವಯ ಸಾಧಿಸಬೇಕು. ಕೆಲಸದ ಸಮಯದಲ್ಲಿ ಕಾರ್ಮಿಕರು ಆದಷ್ಟು ಹತ್ತಿಯ ಮತ್ತು ಶ್ವೇತ ವರ್ಣದ ತುಂಬು ತೋಳಿನ ಅಂಗಿ/ಬಟ್ಟೆ ಮತ್ತು ಟೋಪಿ, ಕೂಲಿಂಗ್ ಗ್ಲಾಸ್ ಧರಿಸಬೇಕು.
ಒಳಾಂಗಣದಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಸಂಬAಧಿಸಿದAತೆ ಕೊಠಡಿಯ ತಾಪಮಾನವನ್ನು ಕಡಿಮೆ ಮಾಡಲು ಸೂಕ್ತ ಕ್ರಮಗಳನ್ನು ಮಾಲೀಕರು ತೆಗೆದುಕೊಳ್ಳಬೇಕು. ಹೀಟ್ ಸ್ಟೊçÃಕ್ ಲಕ್ಷಣಗಳನ್ನು ಹೊಂದಿರುವ ವ್ಯಕ್ತಿಯನ್ನು ತಂಪಾದ ಜಾಗಕ್ಕೆ ಸ್ಥಳಾಂತರಿಸಿ ಶಾಖದ ಹೊಡೆತದಿಂದ ಬಳಲುತ್ತಿರುವ ವ್ಯಕ್ತಿಯು ಕನಿಷ್ಟ ಬಟ್ಟೆಯನ್ನು ಹೊಂದಿರುವAತೆ ನೋಡಿಕೊಂಡು, ವ್ಯಕ್ತಿಗೆ ತಣ್ಣೀರಿನಿಂದ ಸ್ಪಾಂಜ್ ಮಾಡಬೇಕು ಅಥವಾ ಐಸ್ ಪ್ಯಾಕ್ ಗಳನ್ನು ಉಪಯೋಗಿಸಬೇಕು. ಹೀಟ್ ವೇವ್ ಸ್ಟೊçÃಕ್ಗೆ ಒಳಗಾದ ವ್ಯಕ್ತಿಗೆ ಯಾವುದೇ ಸುಧಾರಣೆ ಕಂಡುಬರದಿದ್ದರೆ. ಅವರನ್ನು ತಕ್ಷಣ ಆಸ್ಪತ್ರೆಗೆ ಸ್ಥಳಾಂತರಿಸಲು ಕ್ರಮ ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆದ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…