Featured

ಉಡುಪಿ : ಹುತಾತ್ಮ ಯೋಧ ಅನೂಪ್ ಪೂಜಾರಿ ಮನೆಗೆ ಭೇಟಿ ನೀಡಿ ವೈಯಕ್ತಿಕ 1 ಲಕ್ಷ ರೂ. ಸಹಾಯ ನೀಡಿದ ಯಶ್ಪಾಲ್ ಸುವರ್ಣ – vishwanews24

ಉಡುಪಿ : ಅನೂಪ್‌ ಕನಸು ನನಸಾಗಿಸಲು ಒಟ್ಟಾಗಿ ಪ್ರಯತ್ನ ಮಾಡುತ್ತೇವೆ: ಯಶ್ಪಾಲ್ ಸುವರ್ಣ

 ಉಡುಪಿ : ಯು.ಟಿ ಖಾದರ್ ಭೇಟಿಯ ಬಳಿಕ ಹುತಾತ್ಮ ಯೋಧ ಅನೂಪ್ ಪೂಜಾರಿ ಅವರ ಪತ್ನಿ ಹಾಗೂ ಕುಟುಂಬಿಕರನ್ನು ಭೇಟಿ ಮಾಡಿ ಸಾಂತ್ವಾನ‌ ತಿಳಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ತಮ್ಮ ವಯಕ್ತಿಕ 1 ಲಕ್ಷ ರೂ. ಚೆಕ್ ನೀಡಿ ಅನೂಪ್ ಅವರ ಪುತ್ರಿ ಇಶಾನಿ ಅವರ ಹೆಸರಿನಲ್ಲಿ ನಿಖರ ಠೇವಣೆ ಇಡುವಂತೆ ಹೇಳಿದರು.

ಬಳಿಕ ಸುದ್ದಿಗಾರರೊದಿಗೆ ಮಾತನಾಡಿದ ಅವರು, ಅನೂಪ್ ಅವರ ನಿಧನ ಕರಾವಳಿಯ ಜನರಿಗೆ ಅತೀವ ದುಃಖವನ್ನು ತಂದಿದೆ. ಸೈನ್ಯಕ್ಕೆ ಸೇರುವ ಯುವಕರಿಗೆ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಅಕಾಡೆಮಿಯೊಂದನ್ನು ಹುಟ್ಟುಹಾಕಬೇಕು ಎನ್ನುವ ಕನಸುಗಳು ಅನೂಪ್ ಪೂಜಾರಿ ಅವರಿಗಿತ್ತು ಎನ್ನುವುದನ್ನು ಸ್ಥಳೀಯರು ತಿಳಿಸಿದ್ದಾರೆ. ಅವರ ಕನಸನ್ನು ನನಸು ಮಾಡಲು ಯಾವುದೇ ಸಲಹೆ ಹಾಗೂ ಸಹಕಾರಕ್ಕೆ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಪ್ರಮುಖರು ಒಟ್ಟಾಗಿ ಪ್ರಯತ್ನ ಮಾಡುವುದಾಗಿ ತಿಳಿಸಿದರು.

ಸ್ಥಳಿಯ ಪ್ರಮುಖರಾದ ದಿನೇಶ್ ಹೆಗ್ಡೆ ಮೊಳಹಳ್ಳಿ, ಬಿ.ಹಿರಿಯಣ್ಣ ಚಾತ್ರಬೆಟ್ಟು, ಮಲ್ಯಾಡಿ ಶಿವರಾಮ್ ಶೆಟ್ಟಿ, ಅಶೋಕ ಪೂಜಾರಿ ಬೀಜಾಡಿ, ಪ್ರಕಾಶ್ ಪೂಜಾರಿ ಬೀಜಾಡಿ, ಅವಿನಾಶ್ ಉಳ್ತೂರು, ಶೇಖರ ಚಾತ್ರಬೆಟ್ಟು, ಸದಾನಂದ ಶೆಟ್ಟಿ ಕೆದೂರು, ಹರಿಪ್ರಸಾದ್ ಶೆಟ್ಟಿ ಕಾನ್ಮಕ್ಕಿ, ಸುರೇಂದ್ರ ಶೆಟ್ಟಿ ಸಹನಾ, ಯಾಸಿನ್ ಹೆಮ್ಮಾಡಿ, ಅನಿಲ್ ಚಾತ್ರಬೆಟ್ಟು, ಜಸಿಂತಾ ಡಿಮೆಲ್ಲೋ, ಎನ್ಎಸ್ಯುಐ ಮುಖಂಡ ಸಯ್ಯದ್ ಫುರ್ಖಾನ್ ಮುಂತಾದವರಿದ್ದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago