Featured

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ – vishwanews24

ಉಡುಪಿ: ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ಖಾದರ್‌, ಸೊರಕೆ ಭೇಟಿ

ಕೋಟೇಶ್ವರ: ಸ್ಪೀಕರ್‌ ಯು.ಟಿ.ಖಾದರ್‌ ಹಾಗೂ ಮಾಜಿ ಸಚಿವ ವಿನಯಕುಮಾರ್‌ ಸೊರಕೆ ಅವರು ಡಿ.27ರಂದು ರಾತ್ರಿ ಬೀಜಾಡಿಯಲ್ಲಿರುವ ಹುತಾತ್ಮ ಯೋಧ ಅನೂಪ್‌ ಪೂಜಾರಿ ಮನೆಗೆ ತೆರಳಿ ಮೃತರ ತಾಯಿ ಚಂದು ಪೂಜಾರಿ, ಪತ್ನಿ ಮಂಜುಶ್ರೀ ಹಾಗೂ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು.

ಈ ಸಂದರ್ಭ ಮಾತನಾಡಿದ ಖಾದರ್‌, ಅನೂಪ್‌ ಪೂಜಾರಿ ಬಗ್ಗೆ ಮುಖ್ಯಮಂತ್ರಿಗಳ ಜತೆಗೆ ಮಾತನಾಡಿದ್ದು, ಸರಕಾರದಿಂದ ಒದಗಿಸಬಹುದಾದ ಸವಲತ್ತು ಹಾಗೂ ಪರಿಹಾರ ನೀಡು ವುದಾಗಿ ಹೇಳಿದರು. ಮೃತರ ಪತ್ನಿ ಪದವೀಧರೆಯಾಗಿದ್ದು, ಅವರಿಗೆ ಸರಕಾರ ಕೆಲಸ ಕೊಡಿಸಬೇಕು ಎಂದು ಕುಂದಾಪುರ ಬಿಲ್ಲವ ಸಮಾಜದ ಅಧ್ಯಕ್ಷ ಅಶೋಕ ಪೂಜಾರಿ ಮನವಿ ಮಾಡಿದರು. ಈ ನಿಟ್ಟಿನಲ್ಲಿ ಶ್ರಮಿಸಲಾಗುವುದು ಎಂದು ಖಾದರ್‌  ಹೇಳಿದರು.

ಮಾಜಿ ಸಚಿವ ವಿನಯಕುಮಾರ ಸೊರಕೆ, ದಿನೇಶ್ ಹೆಗ್ಡೆ ಮೊಳಹಳ್ಳಿ ಹಾಗೂ ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಒಟ್ಟಾಗಿ ಪ್ರಯತ್ನ ನಡೆಸುವುದಾಗಿ ತಿಳಿಸಿದ ಅವರು, ಹುತಾತ್ಮ ಯೋಧನ ಹೆಸನಲ್ಲಿ ಸ್ಮಾರಕ ನಿರ್ಮಾಣವೂ ಸೇರಿದಂತೆ ಯಾವುದೇ ಕಾರ್ಯಕ್ರಮಗಳನ್ನು ರೂಪಿಸುವುದಿದ್ದರೂ, ಸ್ಥಳೀಯ ಆಡಳಿತ ತೀರ್ಮಾನ ಕೈಗೊಳ್ಳಲಿ ಆ ಬಳಿಕ ಸರ್ಕಾರದಿಂದ ಬೇಕಾದ ಸಹಕಾರ ನೀಡಲು ಬದ್ಧರಿರುವುದಾಗಿ ತಿಳಿಸಿದರು.

ದಿನೇಶ ಶೆಟ್ಟಿ ಮೊಳಹಳ್ಳಿ, ಮಲ್ಯಾಡಿ ಶಿವರಾಮ ಶೆಟ್ಟಿ, ಹರಿಪ್ರಸಾದ್‌ ಶೆಟ್ಟಿ ಸಹಿತ ಹಲವು ಗಣ್ಯರು ಉಪಸ್ಥಿತರಿದ್ದರು.

ಸ್ಮಾರಕ ರಚನೆಗೆ ಸಹಕಾರ: ಬೀಜಾಡಿ ಕಡಲ ತೀರದಲ್ಲಿ ಅನೂಪ್‌ ಪೂಜಾರಿ ಅವರ ಸ್ಮಾರಕ ನಿರ್ಮಿಸಲು ಸಹಕಾರ ನೀಡುವುದಾಗಿ ಖಾದರ್‌ ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago