Featured

ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಕೋಟ್ಯಂತರ ರೂ. ಆನ್‌ಲೈನ್ ವಂಚನೆ – vishwanews24

ಉಡುಪಿ : ಆನ್‌ಲೈನ್ ಹೂಡಿಕೆ ಹೆಸರಿನಲ್ಲಿ ವ್ಯಕ್ತಿಗೆ ಕೋಟ್ಯಂತರ ರೂ. ವಂಚನೆ

ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ ಆಗಿತ್ತು. ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ ಮಾಹಿತಿ ತಿಳಿಸಿ ವಾಟ್ಸಾಪ್ ಗ್ರೂಪ್‌ಗೆ ಸೇರ್ಪಡೆ ಮಾಡಿದರು.

ಆ ಗ್ರೂಪಿನಲ್ಲಿನ ವಿವಿಧ ನಂಬರ್‌ಗಳಲ್ಲಿ ಹೂಡಿಕೆ ಮಾಡಿದರೆ ಲಾಭಾಂಶ ಗಳಿಸಬಹುದು ಎಂಬ ಸಂದೇಶಗಳಿದ್ದು, ಅದನ್ನು ನಂಬಿದ ಹೆನ್ರಿ, ಜು.22ರಿಂದ ಸೆ.1ರವರೆಗೆ ಹಂತ ಹಂತವಾಗಿ ಒಟ್ಟು 1,32,90,000 ರೂ. ಹಣವನ್ನು ಹೂಡಿಕೆ ಮಾಡಿದರು. ತದನಂತರ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನಾಗಲಿ ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಲಾಗಿದೆ.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

12 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago