ಉಡುಪಿ : ಹೂಡಿಕೆ ಹೆಸರಿನಲ್ಲಿ ವ್ಯಕ್ತಿಯೊಬ್ಬರು ಕೋಟ್ಯಂತರ ರೂ. ಆನ್‌ಲೈನ್ ವಂಚಿಸಿರುವ ಬಗ್ಗೆ ಉಡುಪಿ ಸೆನ್ ಅಪರಾಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹೆನ್ರಿ ಡಿ ಅಲ್ಮೇಡಾ(69) ಎಂಬವರು ಜು.19ರಂದು ಫೇಸ್‌ಬುಕ್‌ನಲ್ಲಿ ಇನ್ವೆಸ್ಟ್ ಮೆಂಟ್ ಟ್ರೇಡಿಂಗ್ ಮಾಡುವುದರ ಬಗ್ಗೆ ಜಾಹಿರಾತನ್ನು ನೋಡಿದ್ದು, ಅದನ್ನು ಕ್ಲಿಕ್ ಮಾಡಿದಾಗ ಲಿಂಕ್ ಓಪನ್ ಆಗಿತ್ತು. ಬಳಿಕ ಹೆನ್ರಿ ಅವರ ವಾಟ್ಸಾಪ್‌ಗೆ ಟ್ರೇಡಿಂಗ್ ಹೂಡಿಕೆ ಮಾಡುವಂತೆ ಸಂದೇಶ ಬಂದಿದ್ದು, ಅಂಕಿತಾ ಘೋಷ್ ಎಂಬಾತ ಕರೆ ಮಾಡಿ ಹೂಡಿಕೆ ಬಗ್ಗೆ ಮಾಹಿತಿ ತಿಳಿಸಿ ವಾಟ್ಸಾಪ್ ಗ್ರೂಪ್‌ಗೆ ಸೇರ್ಪಡೆ ಮಾಡಿದರು.
ಆ ಗ್ರೂಪಿನಲ್ಲಿನ ವಿವಿಧ ನಂಬರ್‌ಗಳಲ್ಲಿ ಹೂಡಿಕೆ ಮಾಡಿದರೆ ಲಾಭಾಂಶ ಗಳಿಸಬಹುದು ಎಂಬ ಸಂದೇಶಗಳಿದ್ದು, ಅದನ್ನು ನಂಬಿದ ಹೆನ್ರಿ, ಜು.22ರಿಂದ ಸೆ.1ರವರೆಗೆ ಹಂತ ಹಂತವಾಗಿ ಒಟ್ಟು 1,32,90,000 ರೂ. ಹಣವನ್ನು ಹೂಡಿಕೆ ಮಾಡಿದರು. ತದನಂತರ ಆರೋಪಿಗಳು ಹೂಡಿಕೆ ಮಾಡಿದ ಹಣವನ್ನಾಗಲಿ ಅಥವಾ ಲಾಭಾಂಶವನ್ನಾಗಲಿ ನೀಡದೇ ನಂಬಿಸಿ ಮೋಸ ಮಾಡಿರುವುದಾಗಿ ದೂರಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…