ಉಡುಪಿ: ಹಿಜಾಬ್ ಪ್ರಕರಣದ ಕುರಿತು ಮಂಗಳವಾರ ಹೈಕೋರ್ಟ್ ತೀರ್ಪು ನೀಡಿದ್ದು, ಇಂದಿನಿಂದ ಎಂದಿನಂತೆ ಶಾಲಾ- ಕಾಲೇಜು ಆರಂಭವಾಗಿದೆ. ಈ ಹಿನ್ನಲೆಯಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ ಕೂರ್ಮಾ ರಾವ್ ಅವರು ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿಗೆ ಬೇಟಿ ನೀಡಿ ಪರಿಶೀಲನೆ ನಡೆಸಿದರು.
ಆ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಜಿಲ್ಲಾಧಿಕಾರಿ, ” ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮಂಗಳವಾರ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿತ್ತು. ಇಂದು ಎಲ್ಲಾ ತರಗತಿಗಳು ಯಾವುದೇ ಗೊಂದಲಗಳಿಲ್ಲ ಎಂದಿನಂತೆ ಆರಂಭವಾಗಿದೆ. ಹೈಕೋರ್ಟ್ ಆದೇಶವನ್ನು ಎಲ್ಲರೂ ಗೌರವಿಸಬೇಕು. ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ರೀತಿಯ ಕಾನೂನು ಕ್ರಮ ತೆಗೆದುಕೊಂಡಿದೆ. ಜಿಲ್ಲೆಯ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಮತ್ತು ಜನರು ಶಾಂತಿ ಮತ್ತು ಸೌಹಾರ್ದತೆಯನ್ನು ಕಾಪಾಡಲು ನಾವು ವಿನಂತಿಸುತ್ತೇವೆ.
“ಸದ್ಯ ಶೇಕಡಾವಾರು ಹಾಜರಾತಿ ಶೇ.91 ಇದ್ದು, ಪರೀಕ್ಷೆಗೆ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಬಗ್ಗೆ ಗಮನಹರಿಸುತ್ತೇವೆ” ಎಂದು ಹೇಳಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಮಾ.21ರ ಸಂಜೆ 6 ಗಂಟೆಯವರೆಗೆ ದಂಡ ಪ್ರಕ್ರಿಯಾ ಸಂಹಿತೆ 1973 ರ ಕಲಂ 144 ಅನ್ವಯ ನಿಷೇದಾಜ್ಞೆ ಜಾರಿಯಲ್ಲಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…