ಉಡುಪಿ: ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ ಮಲ್ಪೆ ಶಾಖೆಯ ಅವ್ಯವಹಾರ ಆರೋಪಕ್ಕೆ ಸಂಬಂಧಿಸಿ ಸಾಲ ಪತ್ರದಲ್ಲಿರುವುದು ನಮ್ಮ ಸಹಿ ಎಲ್ಲ ಎಂಬುದಾಗಿ ಸಂತ್ರಸ್ತರು ದಾಖಲಿಸಿರುವ ಎಫ್‌ಐಆರ್‌ಗೆ ಮಹಾ ಲಕ್ಷ್ಮೀ ಬ್ಯಾಂಕ್ ಅಧ್ಯಕ್ಷರಾಗಿರುವ ಶಾಸಕ ಯಶ್‌ಪಾಲ್ ಸುವರ್ಣ ಹೈಕೋರ್ಟ್ ನಲ್ಲಿ ವಿಧಿಸಿರುವ ತಡೆಯಾಜ್ಞೆಯನ್ನು ಸ್ವಯಂ ಹಿಂಪಡೆದು ತನಿಖೆಯನ್ನು ಎದುರಿಸಲಿ ಎಂದು ಮಾಜಿ ಶಾಸಕ ಕೆ.ರಘುಪತಿ ಭಟ್ ಸವಾಲು ಹಾಕಿದ್ದಾರೆ.
ಈ ಕುರಿತು ರಘುಪತಿ ಭಟ್, ಬ್ಯಾಂಕ್ ಅಧ್ಯಕ್ಷ ಯಶ್‌ಪಾಲ್ ಸುವರ್ಣ ಅವರಿಗೆ ಪತ್ರ ಬರೆದಿದ್ದು, ಯಶ್‌ಪಾಲ್ ಸುವರ್ಣ ಸಿ.ಬಿ.ಐ., ಇ.ಡಿ. ಇನ್ನಿತರ ಯಾವುದೇ ತನಿಖೆ ಎದುರಿಸಲು ಸಿದ್ಧರಿದ್ದೇವೆ ಎಂದು ಹೇಳಿರುವುದು ಪ್ರಶಂಸಾರ್ಹವಾಗಿದೆ. ಆದರೆ ಈ ತನಿಖೆಗಳನ್ನು ನಡೆಸುವ ಮುಂಚಿತವಾಗಿ ತಮ್ಮದೇ ವ್ಯಾಪ್ತಿಯಲ್ಲಿ ಉಡುಪಿ ಹಾಗೂ ಇನ್ನಿತರ ಪೊಲೀಸ್ ಠಾಣೆಗಳಲ್ಲಿ ಸಂತ್ರಸ್ತರು ಈಗಾಗಲೇ ನೀಡಿರುವ ದೂರಿಗೆ ಆಗಿರುವ ಎಫ್‌ಐಆರ್ ಮೇಲೆ ತಾವು ಹೈಕೋರ್ಟ್‌ನಿಂದ ತಡೆಯಾಜ್ಞೆ ತಂದಿದ್ದು, ಈ ತಡೆಯಾಜ್ಞೆಯನ್ನು ತೆರವುಗೊಳಿಸಿ, ತನಿಖೆಗೆ ಸ್ಪಂದಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಸಂತ್ರಸ್ತರ ಸಾಲದ ಅರ್ಜಿಗಳಲ್ಲಿ ಹಾಗೂ ಸಾಲದ ದಾಖಲಾತಿಗಳಲ್ಲಿ ಸಂತ್ರಸ್ತರು ತಮ್ಮ ಸಹಿ ಅಲ್ಲ ಎಂದು ಹೇಳುತ್ತಿರುವ ಕಾರಣ ಈ ಸಹಿಗಳ ಸತ್ಯಸತ್ಯಾತೆಯನ್ನು ತಿಳಿಯಲು ಪೊಲೀಸ್ ಇಲಾಖೆಯ ಮೂಲಕ ಎಫ್‌ಎಸ್‌ಎಲ್(ವಿಧಿ ವಿಜ್ಞಾನ ಪ್ರಯೋಗಾಲಯ) ಪರೀಕ್ಷೆಗೆ ಕಳುಹಿಸಲು ಅನುವು ಮಾಡಿಕೊಡಬೇಕು. ಆದುದರಿಂದ ಹೈಕೋರ್ಟ್‌ನಿಂದ ತಡೆಯಾಜ್ಞೆ ಯನ್ನು ಹಿಂಪಡೆದು ನ್ಯಾಯಯುತವಾದ ತನಿಖೆ ನಡೆದು ಸತ್ಯಸತ್ಯಾತೆಯು ಹೊರಬರಬೇಕು ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನನ್ನ ಈ ಹೋರಾಟ, ಅನ್ಯಾಯವಾಗಿದೆಯೆಂದು ತಮ್ಮ ಅಳಲು ತೋಡಿಕೊಂಡು ಸಹಾಯ ನಿರೀಕ್ಷಿಸಿದ ಸಂತ್ರಸ್ತರ ಹಿತ ಕಾಪಾಡುವುದೇ ಹೊರತು, ತಮ್ಮ ಅಥವಾ ಬ್ಯಾಂಕಿನ ವಿರುದ್ಧ ಆಗಿರುವುದಿಲ್ಲ. ಇದರಲ್ಲಿ ನನ್ನ ಯಾವುದೇ ವೈಯಕ್ತಿಕ ಹಿತಾಸಕ್ತಿಯಿರುವುದಿಲ್ಲ. ಅನ್ಯಾಯವಾಗಿದೆ ಎಂದು ನನ್ನ ಬಳಿ ಬಂದಿರುವ ಸಾಲಗಾರ ಸಂತ್ರಸ್ತರ ಪರ ಕಾನೂನು ಹೋರಾಟ ಮಾಡಲು ನಾನು ಇನ್ನು ಮುಂದೆಯೂ ಬದ್ಧನಾಗಿದ್ದೇನೆ ಎಂದು ಅವರು ಪ್ರಕಟಣೆಯಲ್ಲಿ ಸ್ಪಷ್ಟಪಡಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…