ಉಡುಪಿ : ರಾಜ್ಯದಲ್ಲಿ ಒಂದು ವರ್ಷಕ್ಕಿಂತ ಅಧಿಕ ದಿನಗಳಿಂದ ತೆರಿಗೆ ಪಾವತಿಸದೇ ಹೊರರಾಜ್ಯದ ವಾಹನಗಳು ಓಡಾಡುತ್ತಿರುವುದು ಕಂಡುಬ0ದಿದ್ದು, ಹೊರ ರಾಜ್ಯದ ಮೋಟಾರು ವಾಹನ ಮಾಲೀಕರು ಈ ಪ್ರಕಟಣೆಯ ಒಂದು ವಾರದ ಒಳಗೆ ತಮ್ಮ ವಾಹನಗಳಿಗೆ ರಾಜ್ಯದ ತೆರಿಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಪಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ ಸೂಚನೆ ನೀಡಿದ್ದಾರೆ.
ಮುಂದಿನ ದಿನಗಳಲ್ಲಿ ಹೊರರಾಜ್ಯದ ವಾಹನಗಳು ತೆರಿಗೆ ಪಾವತಿಸದೇ ಜಿಲ್ಲೆಯಲ್ಲಿ ಸಂಚರಿಸುತ್ತಿರುವುದು ಕಂಡುಬ0ದಲ್ಲಿ ತಪಾಸಣೆ ವೇಳೆ ವಾಹನವನ್ನು ಮುಟ್ಟುಗೋಲು ಹಾಕಲಾಗುವುದು. ಹೊರರಾಜ್ಯದ ವಾಹನಗಳಿಗೆ ಬಿ.ಹೆಚ್ ಸೀರಿಸ್ ಸಂಖ್ಯೆಯನ್ನು ಪಡೆಯಲು ಇಚ್ಛಿಸುವ ಕೇಂದ್ರ ಸರ್ಕಾರಿ ನೌಕರರು, ತಮ್ಮ ಹೊಸ ವಾಹನದ ನೋಂದಣಿಯ ಸಮಯದಲ್ಲಿ ವಿಳಾಸ ಪುರಾವೆ, ತತ್ಸಂಬ0ಧ ಉದ್ಯೋಗ ಖಾತರಿ ಪತ್ರದ ಪ್ರತಿ, ಸಂಬ0ಧಪಟ್ಟ ಇಲಾಖೆಯ ಸೇವಾ ಗುರುತಿನ ಚೀಟಿ, ಮೇಲಾಧಿಕಾರಿಗಳ ಪ್ರಮಾಣ ಪತ್ರ ಹಾಗೂ ರಹವಾಸಿ ಪ್ರಮಾಣ ಪತ್ರ ಹಾಜರುಪಡಿಸಿ, ಏಕರೂಪದ ತೆರಿಗೆಯನ್ನು ಪಾವತಿಸಲು
ಅವಕಾಶವಿರುತ್ತದೆ.
ಹೊರರಾಜ್ಯದ ವಾಹನಗಳು ರಾಜ್ಯಕ್ಕೆ ವಲಸೆ ಬಂದಾಗ ಇನ್‌ವಾಯ್ಸ್ ಅಥವಾ ವಾಹನ ಖರೀದಿ ಪುರಾವೆ, ನಮೂನೆ 27-2 ಅರ್ಜಿ, ಆಕ್ಷೇಪಣಾ ರಹಿತ ಪತ್ರ, ಸ್ಮಾರ್ಟ್ ಕಾರ್ಡ್ ಅಥವಾ ನೋಂದಣಿ ಪತ್ರ, ವಿಮಾ ಪತ್ರ, ವಾಯುಮಾಲಿನ್ಯ ತಪಾಸಣಾ ಪತ್ರ, ಆಧಾರ/ ವಿಳಾಸ ಪುರಾವೆ ಹಾಗೂ ಭಾವಚಿತ್ರವನ್ನು ಕಡ್ಡಾಯವಾಗಿ ಹಾಜರುಪಡಿಸಬೇಕು.
ಹೊರರಾಜ್ಯದ ವಾಹನ ಮಾಲೀಕರು ರಾಜ್ಯಕ್ಕೆ ವಲಸೆ ಬಂದಲ್ಲಿ ಕೂಡಲೇ ರಾಜ್ಯದ ತೆರಿಗೆಯನ್ನು ಪಾವತಿಸಬೇಕು. ಇಲ್ಲವಾದಲ್ಲಿ ವಾಹನ ಮುಟ್ಟುಗೋಲು ಹಾಕಿ ತೆರಿಗೆ ಹಾಗೂ ದಂಡ ವಿಧಿಸಲಾಗುವುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಪ್ರಕಟಣೆ ತಿಳಿಸಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…