Featured

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ – Vishwanews24

ಉಡುಪಿ: ಹೊಸ ವರ್ಷಾಚರಣೆ – ಪೊಲೀಸ್ ಇಲಾಖೆಯಿಂದ ಮಾರ್ಗಸೂಚಿ

ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ಜಿಲ್ಲಾ ಪೊಲೀಸರು ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮಾರ್ಗಸೂಚಿಗಳನ್ನು ಹೊರಡಿಸಿದೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ಹಾಕೆ ಮಚ್ಚಿಂದ್ರ 31-12-2022 – 1-1-2023 ರ 1 ಗಂಟೆಯ ವರೆಗೆ ಉಡುಪಿ ಜಿಲ್ಲೆಯಾದ್ಯಂತ ಹೊಸ ವರ್ಷದ ಆಚರಣೆ ನಡೆಸುವ ಸಮಯ, ಕಾರ್ಯಕ್ರಮಮಗಳ ಸಂಘಟಕರು ಮತ್ತು ಸಾರ್ವಜನಿಕರು ಈ ಕೆಳಕಂಡ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸೂಚಿಸಲಾಗಿದೆ.

ಕೋವಿಡ್ 19ಗೆ ಸಂಬಂಧಪಟ್ಟಂತೆ ನೀಡಲಾದ ಸೂಚನೆಗಳನ್ನು ಹೊಸ ವರ್ಷಾಚರಣೆ ಸಂಬಂಧ ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ತಪ್ಪದೇ ಪಾಲಿಸಬೇಕು

ಎಲ್ಲಾ ರೀತಿಯ ಆಚರಣೆಗಳು ದಿನಾಂಕ: 01-01-2023 ರ 1 ಗಂಟೆಯ ಒಳಗಾಗಿ ಮುಕ್ತಾಯಗೊಳ್ಳತಕ್ಕದ್ದು,

Indoor functions, Pubs/Restaurants/Clubs/Resorts ಮುಂದಾತದ ಕಡೆಗಳಲ್ಲಿ ಅದರ Capacity ಮೀರದಂತೆ ಜನರು ಇರುವಂತೆ ನೋಡಿಕೊಳ್ಳಬೇಕು ಹಾಗೂ ಅಲ್ಲಿ ವಿದ್ಯುತ್ ಅಥವಾ ಅಗ್ನಿ ಅವಘಡಗಳು ಆಗದಂತೆ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು.

ಹೋಟೆಲ್ ಪಬ್ ರೆಸ್ಟಾರೆಂಟ್ ಹೋಮ್ ಸ್ಟೇ ಪಿಜಿಗಳಲ್ಲಿ ಸಾರ್ವಜರಿಗೆ ಈವೆಂಟ್‌ಗಳನ್ನು ಆಯೋಜಿಸುವಾಗ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಠಾಣೆಗಳಿಗೆ ಕಡ್ಡಾಯವಾಗಿ ಮಾಹಿತಿ ನೀಡತಕ್ಕದ್ದು, ಕಾರ್ಯಕ್ರಮಗಳ ಆಯೋಜಕರು ಭದ್ರ ಮತ್ತು ಸುವ್ಯವಸ್ಥೆಯ ದೃಷ್ಟಿಯಿಂದ ಸ್ವಯಂಸೇವಕರು, ಪುರುಷ ಮತ್ತು ಮಹಿಳಾ ಭದ್ರತಾ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವುದು.

ವಾಹನ ಪಾರ್ಕಿ೦ಗ್‌ಗೆ ಪ್ರತ್ಯೇಕ ವ್ಯವಸ್ಥೆ ಮಾಡಿಕೊಳ್ಳುವುದು, ಇತರೇ ವಾಹನಗಳ ಸಂಚಾರಕ್ಕೆ ಯಾವುದೇ ರೀತಿಯ ಅಡತಡೆಯಾಗದೇ ಸುಗಮ ಸಂಚಾರಕ್ಕೆ ಮುಂಗಡವಾಗಿ ಸೂಕ್ತ ವ್ಯವಸ್ಥೆ ಮಾಡಿಕೊಳ್ಳುವುದು. ಯಾವುದೇ ರೀತಿಯ ವಾಹನ ಅಪಘಾತಗಳಗದಂತೆ ಮುಂಜಾಗ್ರತ ಕ್ರಮ ವಹಿಸುವುದು,

ಬಸ್ ಸ್ಟ್ಯಾಂಡ್ ಬೀಚ್, ರಸ್ತೆ, ಫುಟ್ ಪಾತ್, ಉದ್ಯಾನವನದಲ್ಲಿ ಮತ್ತು ಇತರೇ ಸಾರ್ವಜನಿಕ ಸ್ಥಳದಲ್ಲಿ ಹೊಸ ವರ್ಷಾಚರಣೆಯ ಯಾವುದೇ ಕಾರ್ಯಕ್ರಮಗಳನ್ನು ನಡೆಸಬಾರದು.

ಸಾರ್ವಜನಿಕ ಸ್ಥಳಗಳಲ್ಲಿ ಯಾವುದೇ ಅಮಲು ಅಥವಾ ಮದ್ಯದ ನಷೆಯಲ್ಲಿ ಆಚರಣೆ ಮಾಡುವವರ ವಿರುದ್ದ ಕಠಿಣ ಕ್ರಮ ಜರುಗಿಸಲಾಗುವುದು.

ಹೊಸ ವರ್ಷಾಚರಣೆಯ ನೆಪದಲ್ಲಿ ಜನರೊಂದಿಗೆ ಮಹಿಳೆಯರೊಂದಿಗೆ ಅನುಚಿತ ವರ್ತನೆ ಮಾಡುವವರ ವಿರುದ್ಧ ನಿರ್ದಾಕ್ಷಿಣ್ಯ ಕಾನೂನು ಕ್ರಮ ಜರಗಿಸಲಾಗುವುದು,

ಲೌಡ್ ಸ್ಪೀಕರ್ ಗಳನ್ನು ಸರ್ವೋಚ್ಚ ನ್ಯಾಯಾಲಯ ಮತ್ತು ಸರ್ಕಾರದ ಆದೇಶಗಳನ್ನು ಉಲ್ಲಂಘನೆಯಾಗದಂತೆ ಮತ್ತು ಶಬ್ದ ಮಾಲಿನ್ಯ ಆಗದಂತ ಧ್ವನಿವರ್ಧಕದ ಡೆಸಿಬಲ್‌ ಮಿತಿಯಲ್ಲಿ ಇಟ್ಟು ಆಚರಣೆ ನಡೆಸಬೇಕು.

ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗದಂತೆ ವಿಶೇಷವಾಗಿ ಆಸ್ಪತ್ರೆ ಅಪಾರ್ಟ್ ಮೆಂಟ್‌ಗಳಲ್ಲಿ ವಾಸಿಸುವ ಹಿರಿಯ ಜನರಿಗೆ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು ಎಂದು ಅವರು ತಿಳಿಸಿದ್ದಾರೆ.

ರಾತ್ರಿ ಹೊತ್ತು ಕುಡಿದು ವಾಹನ ಚಾಲನೆ ಅತೀ ವೇಗ/ ನಿರ್ಲಕ್ಷ್ಯತನದ ವಾಹನ ಚಾಲನೆ ನಡೆಸುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು.

Vishwa News 24

Recent Posts

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

6 hours ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

6 hours ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

6 hours ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

9 hours ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

9 hours ago

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ – vishwanews24

ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್‌ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…

9 hours ago