Featured

ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ – vishwanews24

ಉಡುಪಿ : ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್ ಮಾಲಕರ ಸಭೆ

ಉಡುಪಿ : ಉಡುಪಿಯಲ್ಲಿ 2026ರ ಹೊಸ ವರ್ಷ ಆಚರಣೆಯ ಸಂದರ್ಭದಲ್ಲಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಗಳು ತೆಗೆದುಕೊಳ್ಳಬೇಕಾದ ಮುಂಜಾಗೃತೆ, ಎಚ್ಚರಿಕೆ ಕುರಿತಂತೆ ಇವುಗಳ ಮಾಲಕರ ಸಭೆಯನ್ನು ಪೊಲೀಸ್ ಇಲಾಖೆ ಇಂದು ಅಜ್ಜರಕಾಡಿನ ಪುರಭವನದಲ್ಲಿ ನಡೆಸಿತು.

ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಇವರ ಮಾರ್ಗದರ್ಶನ ದಲ್ಲಿ ಸಹಾಯಕ ಪೊಲೀಸ್ ಅಧೀಕ್ಷಕರಾದ ಡಾ.ಹರ್ಷ ಪ್ರಿಯಂವದ ಅವರು 2026 ಹೊಸ ವರ್ಷ ಅಚರಣೆಯ ಸಮಯ ವಹಿಸಬೇಕಾದ ಮುಂಜಾಗ್ರತ ಕ್ರಮ ಹಾಗೂ ಪಾಲಿಸಬೇಕಾದ ಕಾನೂನು ನಿಯಮಗಳ ಬಗ್ಗೆ ಮಾಹಿತಿ ನೀಡಿದರು.

ಮಣಿಪಾಲ ಪೊಲೀಸ್ ನಿರೀಕ್ಷಕರಾದ ಮಹೇಶ್ ಪ್ರಸಾದ್, ಸೆನ್ ಪೊಲೀಸ್ ಠಾಣೆಯ ಪಿಎಸ್‌ಐ ಹರೀಶ್ ಅವರು ಸಹ ವಿವಿಧ ವಿಷಯಗಳಲ್ಲಿ ಮಾಹಿತಿಗಳನ್ನು ನೀಡಿದರು. ಸಭೆಯಲ್ಲಿ ಪೊಲೀಸ್ ಅಧಿಕಾರಿಗಳು ನೀಡಿದ ಸೂಚನೆಗಳಿವು.

*ಉಡುಪಿ ಜಿಲ್ಲೆಯ ಎಲ್ಲಾ ಹೊಟೇಲ್, ಲಾಡ್ಜ್, ಹೋಂಸ್ಟೇ, ರೆಸಾರ್ಟ್ ಮಾಲಕರು ಹೊಸ ವರ್ಷಾಚರಣೆಯ ವೇಳೆ ಸುಪ್ರೀಂಕೋರ್ಟ್ ಆದೇಶದಂತೆ ರಾತ್ರಿ 10:00 ಗಂಟೆಯೊಳಗೆ ಧ್ವನಿವರ್ಧಕ ಬಳಕೆಯನ್ನು ಕಡ್ಡಾಯವಾಗಿ ನಿಲ್ಲಿಸುವಂತೆ ಹಾಗೂ ನಿಗದಿತ ಸಮಯದೊಳಗೆ ಎಲ್ಲಾ ಕಾರ್ಯಕ್ರಮಗಳನ್ನು ಮುಕ್ತಾಯಗೊಳಿಸುವಂತೆ ಸೂಚಿಸಲಾಯಿತು.

*ಫೈರ್ ಕ್ಯಾಂಪ್‌ಗಳಿಂದ/ಅಬ್ಬರದ ಸಂಗೀತಗಳಿಂದ ನೆರೆಹೊರೆಯವರ ಶಾಂತಿ ಭಂಗವುಂಟು ಮಾಡುವಂತಿಲ್ಲ. ಹೋಮ್‌ಸ್ಟೇಗಳು ವಿದೇಶಿ ಪ್ರವಾಸಿಗರು ಒಳಗೊಂಡಂತೆ ಎಲ್ಲಾ ಪ್ರವಾಸಿಗರ ಭದ್ರತೆ ಹಾಗೂ ಸುರಕ್ಷತೆಗಾಗಿ ಅಗತ್ಯ ಸುರಕ್ಷಾ ಕ್ರಮಗಳನ್ನು ಕಡ್ಡಾಯವಾಗಿ ತೆಗೆದುಕೊಳ್ಳತಕ್ಕದ್ದು.

*ಹೋಂಸ್ಟೇ/ರೆಸಾರ್ಟ್‌ಗಳು ಹೊರವಲಯಗಳಲ್ಲಿ ಅಥವಾ ನಿರ್ಜನ ಪ್ರದೇಶಗಳಿಗೆ ಪ್ರವಾಸಿಗರನ್ನು ಕರೆದೊಯ್ಯುವ ಮುಂಚಿತವಾಗಿ ಸಂಬಂಧಿಸಿದ ಅಧಿಕಾರ ವ್ಯಾಪ್ತಿಯುಳ್ಳ ಪೊಲೀಸ್ ಠಾಣೆಯಲ್ಲಿ ಮಾಹಿತಿಯನ್ನು ನೀಡಿ, ಅನುಮತಿ ಪಡೆಯತಕ್ಕದ್ದು.

*ಪೊಲೀಸರಿಂದ/ಅರಣ್ಯ ಇಲಾಖೆ ಸಿಬ್ಬಂದಿಯಿಂದ ಪೂರ್ವಾನುಮತಿ ಪಡೆಯದೇ ನಿರ್ಜನ ಪ್ರದೇಶ/ಹೊರವಲಯ ಅಥವಾ ಅರಣ್ಯ ಪ್ರದೇಶ ಗಳಲ್ಲಿ ಪ್ರವಾಸಿಗರನ್ನು ಕರೆದೊಯ್ದಲ್ಲಿ ದುಷ್ಕರ್ಮಿಗಳಿಂದ ಅಥವಾ ಕಾಡು ಪ್ರಾಣಿಗಳಿಂದ ಸಂಭವಿಸುವ ದುರ್ಘಟನೆಗಳಿಗೆ ಆಯಾ ಹೋಮ್ ಸ್ಟೇ ಮಾಲಕರೇ ಜವಾಬ್ದಾರರಾಗುತ್ತಾರೆ ಹಾಗೂ ಕಾನೂನಿನ ಅನ್ವಯ ಶಿಕ್ಷಾರ್ಹ ಅಪರಾಧಕ್ಕೆ ಒಳಪಡುತ್ತಾರೆ.

*ಹೋಮ್ ಸ್ಟೇಗಳಲ್ಲಿ ಅತಿಥಿಗಳ ವಾಹನಗಳನ್ನು ಕಡ್ಡಾಯವಾಗಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ಹೋಂಸ್ಟೇ ನಿರ್ವಹಿಸಿರುವ ಜಾಗದೊಳಗೆ ಪಾರ್ಕಿಂಗ್ ಮಾಡಿಸತಕ್ಕದ್ದು. ಹೋಮ್‌ಸ್ಟೇಯಲ್ಲಿ ಕಾನೂನು ಬಾಹಿರ ಅನೈತಿಕ ಚಟುವಟಿಕೆಗಳನ್ನು ನಡೆಸುವಂತಿಲ್ಲ.

*ಹೋಂ-ಸ್ಟೇಯಲ್ಲಿನ ಎಲ್ಲಾ ಹೊರ ಆವರಣದಲ್ಲಿ ಸಿಸಿ ಕ್ಯಾಮರವನ್ನು ಅಳವಡಿಸಿ ಸದರಿ ಕ್ಯಾಮೆರಾದ ದೃಶಗಳನ್ನು ಕನಿಷ್ಠ ಮೂರು ತಿಂಗಳಾದರೂ ಬ್ಯಾಕ್ ಅಪ್ ಇರುವಂತೆ ಅಳವಡಿಸಬೇಕು.

*ವಿದೇಶಿಯರು ಹೋಂ-ಸ್ಟೇಗೆ ಬಂದಾಗ ಅವರ ಸಿ ಫಾರಂ ವಿವರವನ್ನು ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿರುವ ವಿದೇಶಿ ವಿಭಾಗಕ್ಕೆ ಸಲ್ಲಿಸಿ ಕಡ್ಡಾಯವಾಗಿ ನಮೂದು ಮಾಡಿ ಸರಹದ್ದಿನ ಠಾಣೆಗೆ ಮಾಹಿತಿ ನೀಡಬೇಕು.

*ಹೋಂ-ಸ್ಟೇಗೆ ಬರುವ ಅತಿಥಿಗಳ ಹೆಸರು, ವಿಳಾಸ, ಮೊಬೈಲ್ ಸಂಖ್ಯೆ, ವಾಹನ ನೊಂದಾಣಿ ಸಂಖ್ಯೆ, ಆಧಾರ್ ಕಾರ್ಡ್ ಗುರುತು ಪತ್ರವನ್ನು ಕಡ್ಡಾಯವಾಗಿ ಪಡೆದುಕೊಂಡು ನೊಂದಾವಣಿಯನ್ನು ತೆರೆಯಬೇಕು.

* ಹೊಸ ವರ್ಷ ಆಚರಣೆ ಬಗ್ಗೆ ಧ್ವನಿವರ್ಧಕ ಬಳಸುವ ಬಗ್ಗೆ ಕಡ್ಡಾಯವಾಗಿ ಅನುಮತಿ ಪಡೆದುಕೊಳ್ಳಬೇಕು. ಹೋಂ ಸ್ಟೇ/ರೆಸಾರ್ಟ್‌ಗಳಲ್ಲಿ ಯಾವುದೇ ಜಾತಿ ಧರ್ಮಗಳ ಅವಹೇಳನ ಮಾಡುವಂತ ಕಾರ್ಯಕ್ರಮ ನಡೆಸಬಾರದು.

*ಹೋಂ ಸ್ಟೇಯಲ್ಲಿ ಬರುವ ಅತಿಥಿಗಳು ಮದ್ಯಪಾನ ಮಾಡಿ ಇತರರಿಗೆ ತೊಂದರೆ ನೀಡಿ ಅನವಶ್ಯಕ ಘಟನೆಗಳು ನಡೆಯದಂತೆ ಸೂಕ್ತ ಮುನ್ನಚ್ಚರಿಕೆ ವಹಿಸಬೇಕು. ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ನಿಗದಿ ಪಡಿಸಿದ ಸಮಯದೊಳಗೆ ಕಾರ್ಯಕ್ರಮವನ್ನು ಮುಗಿಸಿ ಶಾಂತಿ ಭಂಗವುಂಟಾಗದಂತೆ ಇಲಾಖೆಯೊಂದಿಗೆ ಸಹಕರಿಸಬೇಕು.

*ವಿದೇಶಿಗರು ಕೆಲಸ ಅಥವಾ ಇನ್ನಿತರ ಯಾವುದೇ ಕಾರಣಗಳಿಂದ ಬಂದಲ್ಲಿ ಕೂಡಲೇ ಮಾಹಿತಿ ನೀಡಬೇಕು. ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ಮದ್ಯಪಾನ ವಿತರಿಸಲು ಅಬಕಾರಿ ಇಲಾಖೆಯ ಅನುಮತಿಯನ್ನು ಕಡ್ಡಾಯವಾಗಿ ಪಡೆಯಬೇಕು.

*ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ಯಾವುದೇ ರೀತಿ ಗಾಂಜ/ಅಫೀಮು ಇನ್ನಿತರ ಮಾದಕ ವಸ್ತುಗಳ ಸೇವನೆಗೆ ಅವಕಾಶ ನೀಡಬಾರದು.

*ಹೋಂಸ್ಟೇ/ರೆಸಾರ್ಟ್‌ಗಳಲ್ಲಿ ಇನ್ನಿತರ ಕಡೆಗಳಲ್ಲಿ ಆಯೋಜಿಸುವ ಕಾರ್ಯಕ್ರಮಗಳಲ್ಲಿ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಪಟ್ಟವರೇ ಜವಾಬ್ದಾರರಾಗಿರುತ್ತಾರೆ. ಆದುದರಿಂದ ಯಾವುದೇ ರೀತಿ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಪೊಲೀಸ್ ಇಲಾಖೆ ಸೂಚನೆ ನೀಡಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago