ಉಡುಪಿ: ಹೊಸ ವರ್ಷ ಮತ್ತು ವರ್ಷಾಂತ್ಯದ ರಜೆಗಳ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ದಟ್ಟಣೆ ವಿಪರೀತವಾಗಿದ್ದು, ಸಂಚಾರ ದಟ್ಟಣೆ ತಗ್ಗಿಸುವ ನಿಟ್ಟಿನಲ್ಲಿ ಈ ಕೆಳಕಂಡ ಮಾರ್ಗಗಳಲ್ಲಿ ಮಾರ್ಪಾಡು ಮಾಡಲಾಗಿದೆ.
ಮಣಿಪಾಲ ಕಡೆಯಿಂದ ಬರುವ ಸರಕು ಲಘು ವಾಹನ, ಮಂಗಳೂರು, ಕಾಪು ಕಡೆ ಹೋಗುವವರು ಶಾರದಾ ಕಲ್ಯಾಣ ಮಂಟಪದ ಕಡೆಯಿಂದ ಚಲಿಸುವುದು.
ಕಲ್ಸಂಕ ವೃತ್ತ:
1).ಗುಂಡಿಬೈಲ ಕಡೆಯಿಂದ ಬರುವ ವಾಹನಗಳು ಕಡಿಯಾಳಿ ಎದುರು ತಿರುಗಿಸಿಕೊಂಡು ಕೃಷ್ಣಮಠ ಮತ್ತು ಉಡುಪಿ ಕಡೆ ಬರುವುದು.
2).ಮಣಿಪಾಲ ಕಡೆಯಿಂದ ಬಂದು ಗುಂಡಿಬೈಲ ಕಡೆ ಹೋಗುವವರು ಸಿಟಿ ಬಸ್ಸ ನಿಲ್ದಾಣದ ಹತ್ತಿರ ತಿರುಗಿಸಿಕೊಂಡು ಬರುವುದು.
ಕರಾವಳಿ ಜಂಕ್ಷನ್ :
1) ಮಲ್ಪೆಯಿಂದ ಬರುವವರು ಕರಾವಳಿಗೆ ಬಂದು ಎಡಕ್ಕೆ ತಿರುಗಿ ಸರ್ವಿಸ್ ರಸ್ತೆಯಲ್ಲಿ ಚಲಿಸಿ ನಿಟ್ಟೂರ(ಆಭರಣ ಮೋಟರ್ಸ ಎದುರಿಗೆ U Turn ಮಾಡಿಕೊಂಡು ನಗರದ ಕಡೆ ಬರುವುದು.
2). ಮಂಗಳೂರು ಕಡೆಯಿಂದ ಬರುವವರು ಮಲ್ಪೆ ಹೋಗುವವರನ್ನು ಹೊರತುಪಡಿಸಿ ಉಳಿದವರೆಲ್ಲರೂ ನಿಟ್ಟೂರ (ಆಭರಣ ಮೋಟರ್ಸ) ಎದುರು ತಿರುಗಿಸಿ ಉಡುಪಿಗೆ ಬರುವುದು.
ಮಲ್ಪೆ :
ಮಲ್ಪೆ ಬೀಚ ಕಡೆಯಿಂದ ಬರುವವರು ಬಲರಾಮ ಸರ್ಕಲನಿಂದ ಹೊರಟು ಹೂಡೆ, ನೇಜಾರು ಮಾರ್ಗ ಬಳಸಿ ಸಂತೆಕಟ್ಟೆಯಿಂದ ರಾಷ್ಟ್ರೀಯ ಹೆದ್ದಾರಿ ಸೇರುವುದು.
ಸಾರ್ವಜನಿಕರು ನಾಳೆ ಇಂದಿನಿಂದ (28.12.2024 ) ದಿನಾಂಕ 01.01.2025 ರ ಸಂಜೆ 4.00 ಗಂಟೆಯಿಂದ ರಾತ್ರಿ 9.00 ಗಂಟೆಯ ವರೆಗೆ ಈ ನಿಯಮ ಜಾರಿಯಲ್ಲಿರುತ್ತದೆ. ಸೂಚಿಸಿದ ಮಾರ್ಗಗಳಲ್ಲಿ ಚಲಿಸಿ ಪೊಲೀಸರೊಂದಿಗೆ ಸಹಕರಿಸಲು ಕೋರಿದೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…