Featured

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ – vishwanews24

ಉಡುಪಿ: ಹೊಸ ವರ್ಷ ಸಂಭ್ರಮಾಚರಣೆ ; ಅಹಿತಕರ ಘಟನೆ ತಡೆಗೆ ಸಾರ್ವಜನಿಕರಿಗೆ ಉಡುಪಿ ಎಸ್‌ಪಿ ವಿಶೇಷ ಸೂಚನೆ

ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ| ಅರುಣ್‌ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.

ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.

ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್‌ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆ ದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್‌, ರೇವ್‌ಪಾರ್ಟಿ, ಅಪಾರ್ಟ್‌ಮೆಂಟ್‌, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆ ಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

23 hours ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

1 day ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

1 day ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

1 day ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

1 day ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

1 day ago