ಉಡುಪಿ: ಜಿಲ್ಲೆಯಲ್ಲಿ ಹೊಸ ವರ್ಷಾಚರಣೆ ಸಂದರ್ಭ ಅಹಿತಕರ ಘಟನೆ ತಡೆಯುವ ಉದ್ದೇಶದಿಂದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ| ಅರುಣ್ ಕೆ. ಅವರು ಸಾರ್ವಜನಿಕರಿಗೆ ವಿಶೇಷ ಸೂಚನೆ ನೀಡಿದ್ದಾರೆ.
ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 12.30ರ ವರೆಗೆ ಸಮಯ ನಿಗದಿ ಮಾಡಲಾಗಿದೆ. ಶಬ್ದ ಮಾಲಿನ್ಯವಾಗದಂತೆ ಧ್ವನಿವರ್ಧಕಗಳನ್ನು ರಾತ್ರಿ 10 ಗಂಟೆ ವರೆಗೆ ಮಾತ್ರ ಬಳಸಬಹುದು. ನೈತಿಕ ಪೊಲೀಸ್‌ಗಿರಿ, ಅನುಚಿತ ವರ್ತನೆ ನಡೆಸುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಜರಗಿಸಲಾಗುವುದು. ನೈತಿಕ ಪೊಲೀಸ್‌ಗಿರಿ ತಡೆಯಲು ಪೊಲೀಸರ ಪ್ರತ್ಯೇಕ ತಂಡ ರಚಿಸಲಾಗಿದೆ ಎಂದಿದ್ದಾರೆ.
ಹೊಸ ವರ್ಷಾಚರಣೆ ಸಂದರ್ಭ ಸಾರ್ವಜನಿಕರಿಗೆ ತೊಂದರೆ ಆಗದಂತೆ ವಾಹನ ಪಾರ್ಕಿಂಗ್ ವ್ಯವಸ್ಥೆಗಳನ್ನು ಮಾಡಿಕೊಳ್ಳಬೇಕಿದೆ. ಹೊಸ ವರ್ಷಾಚರಣೆ ಸಮಯ ಅಕ್ಕಪಕ್ಕದ ಜನರಿಗೆ ತೊಂದರೆಯಾಗಬಾರದು. ವಿಶೇಷವಾಗಿ ಆಸ್ಪತ್ರೆ, ಅಪಾರ್ಟ್‌ಮೆಂಟ್‌ಗಳಲ್ಲಿ ವಾಸವಾಗಿರುವ ಹಿರಿಯರಿಗೆ, ವಿದ್ಯಾರ್ಥಿಗಳಿಗೆ ತೊಂದರೆ ಆಗದಂತೆ ಸೂಕ್ತ ಎಚ್ಚರಿಕೆ ವಹಿಸಬೇಕು. ಅಹಿತಕರ ಘಟನೆಗಳು ನಡೆ ದರೆ ಸಾರ್ವಜನಿಕರು 112ಕ್ಕೆ ಕರೆ ಮಾಡಿ ಪೊಲೀಸರ ಗಮನಕ್ಕೆ ತರಬಹುದು. ಕಾನೂನು ಕೈಗೆತ್ತಿಕೊಳ್ಳದೆ ಪೊಲೀಸರಿಗೆ ಮಾಹಿತಿ ನೀಡಬೇಕು. ಡ್ರಗ್ಸ್, ರೇವ್‌ಪಾರ್ಟಿ, ಅಪಾರ್ಟ್‌ಮೆಂಟ್, ಹೋಂಸ್ಟೇಗಳಲ್ಲಿ ಅನೈತಿಕ ಚಟುವಟಿಕೆಗಳು ನಡೆ ಯದಂತೆ ವಿಶೇಷ ತಂಡ ಕಾರ್ಯನಿರ್ವಹಿಸಲಿದೆ ಎಂದು ಎಸ್‌ಪಿ ತಿಳಿಸಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್‌ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್‌ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್‌ಟೇಬಲ್…