Featured

ಉಡುಪಿ : ಹೋಟೆಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ – vishwanews24

ಉಡುಪಿ :  ಹೋಟೆಲ್  ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ :  ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೊಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಗೃಹ ಬಳಕೆ ಸಿಲಿಂಡರ್ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿರುವುದಿಲ್ಲ. ವಾಣಿಜ್ಯ ಬಳಕೆಯ ಅನಿಲ ಹೊರ ದೇಶಗಳಿಂದ ಪೂರ್ಣ ಪ್ರಮಾಣದಲ್ಲಿ ಆಮದು ಆಗುತ್ತಿದ್ದು, ಯುದ್ಧ ಭೀತಿಯಿಂದಾಗಿ ಅನಿಲ ಆಮದು ನಿಗಧೀತ ಪ್ರಮಾಣದಲ್ಲಿ ಆಗದೆ ವಾಣಿಜ್ಯ ಬಳಕೆ ಸಿಲಿಂಡರ್ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆ ಆಗಿದೆ. ಇದಕ್ಕೆ ಪರ್ಯಾಯ ಉರುವಲುಗಳ ಬಳಕೆಯೊಂದೇ ಮಾರ್ಗ ಎಂದರು

ಇದನ್ನೂ ಓದಿ:

  ಈಗಾಗಲೇ ಜಿಲ್ಲೆಯಲ್ಲಿ ಕೆಲವು ಹೋಟೆಲ್ ಉದ್ಯಮಗಳು ಕಟ್ಟಿಗೆ ಸೇರಿದಂತೆ ಮತ್ತಿತರ ಉರುವಲುಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಹೋಟೆಲ್ ಉದ್ಯಮಗಳು ಇದಕ್ಕೆ ಒತ್ತು ನೀಡುವುದರೊಂದಿಗೆ ಹೋಟೆಲ್ ಉದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗವಕಾಶವನ್ನು ಮುಂದುವರೆಸುವುದು ಉತ್ತಮ. ಈಗಾಗಿರುವ ವ್ಯತ್ಯಯವು ತಾತ್ಕಾಲಿಕವಾಗಿದ್ದು, ಮುಂದೆ ಸಮಸ್ಯೆ ಸರಿಹೋಗಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ 25000 ದಿಂದ 30000 ಕ್ಕೂ ಹೆಚ್ಚು ಜನರು ಹೋಟೆಲ್ ಉದ್ಯಮದ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಹೆಚ್ಚು ಜನರು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿದ್ದಾರೆ. ಉದ್ಯಮದಲ್ಲಿ ವ್ಯತ್ಯಯ ಉಂಟಾಗಿ ಕಾರ್ಮಿಕರು ನಿರುದ್ಯೋಗಿಗಳಾಗಿ ಬೇರೆ ಉದ್ಯೋಗ ಅರಸಿ ಹೋದರೆ ಮುಂಬರುವ ದಿನಗಳಲ್ಲಿ ಹೋಟೆಲ್ ಗಳಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗುತ್ತದೆ. ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ 80 ಕ್ಕೂ ಹೆಚ್ಚು ಸಾಮಿಲ್ಗಳು ಕಾರ್ಯ ನಿರ್ವಹಿಸುತ್ತಿದ್ದು, ಹೋಟೆಲ್ ಉದ್ಯಮಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಟ್ಟಿಗೆ ಲಭ್ಯವಾಗುವಂತೆ ಸಹಕರಿಸಬೇಕು ಎಂದ ಅವರು ಹೋಟೆಲ್ ಉದ್ಯಮಿಗಳು ತಮ್ಮ ದೈನಂದಿನ ಚಟುವಟಿಕೆಗೆ ವಿದ್ಯುತ್ ಸ್ಟವ್ಗಳ ಬಳಕೆಗೆ ಮುಂದಾದಲ್ಲಿ ಅವರುಗಳಿಗೆ ವಿದ್ಯುತ್ ಶಕ್ತಿ ಸರಬರಾಜು ಮಾಡುವ ಕಾರ್ಯವನ್ನು ಶೀಘ್ರದಲ್ಲಿಯೇ ಮಾಡಿಕೊಡಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಶಕ್ತಿ ಆಧಾರಿತ ಉಪಕಾರಣಗಳ ಬಳಕೆಗೆ ಅನುಕೂಲವಾಗುವಂತೆ ಅದರ ಉತ್ಪಾದಕರು ಸಹ ಸಹಕರಿಸಬೇಕು ಎಂದರು.

ಇದನ್ನೂ ಓದಿ:

ಹೊಟೆಲ್ ಮಾಲಿಕರ ಸಂಘದವರು ಪ್ರಸ್ತುತ ಹಿಂದೆ ಸರಬರಾಜಾಗುತ್ತಿದ್ದ ವಾಣಿಜ್ಯ ಸಿಲಿಂಡರ್ ಗಳ ಶೇ.25 ರಷ್ಟು ನೀಡಿದಲ್ಲಿ ನಮಗೆ ಅನುಕೂಲವಾಗುತ್ತಿದೆ ಎಂಬ ಮನವಿ ಕೇಳಿ ಬರುತ್ತಿದೆ ಬಗ್ಗೆ ಸರಕಾರಕ್ಕೆ ಪತ್ರ ಬರೆದು ತಮ್ಮ ಬೇಡಿಕೆಯನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

 ಸಾಮಿಲ್ ಮಾಲಕರ ಸಂಘದ ಪದಾಧಿಕಾರಿಗಳು ಮಾತನಾಡಿ, ಹೋಟೆಲ್ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಾಮಿಲ್ಗಳಲ್ಲಿ ಕಟ್ಟಿಗೆಗಳನ್ನು ಪ್ರಸ್ತುತ ಇರುವ ಬೆಲೆಗೆ ಯಾವುದೇ ಬೆಲೆ ಏರಿಸದೆ ಮಾರಾಟ ಮಾಡುತ್ತೇವೆ ಎಂದರು.

ಸಭೆಯಲ್ಲಿ ಜಿಲ್ಲಾ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರವೀಂದ್ರ, ಸಾಮಿಲ್ ಮಲಕರು ಮತ್ತಿತರರು ಉಪಸ್ಥಿತರಿದ್ದರು

ಇದನ್ನೂ ಓದಿ:

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago