Featured

ಉಡುಪಿ : ಹೋಟೆಲ್ ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ – vishwanews24

ಉಡುಪಿ :  ಹೋಟೆಲ್  ಉದ್ಯಮಗಳಲ್ಲಿ ಅನಿಲಕ್ಕೆ ಪರ್ಯಾಯವಾಗಿ ಇತರೆ ಉರುವಲುಗಳ ಬಳಕೆ ಮಾಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ :  ಪಶ್ಚಿಮ ಎಷ್ಯಾ ರಾಷ್ಟ್ರಗಳಲ್ಲಿ ಯುದ್ಧ ನಡೆಯುತ್ತಿರುವುದರಿಂದಾಗಿ ದೇಶದಲ್ಲಿ ವಾಣಿಜ್ಯ ಬಳಕೆ ಮಾಡುವ ಅನಿಲ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಾಯ ಉಂಟಾಗಿದೆ. ಇದರಿಂದ ಹೋಟೆಲ್ ಉದ್ಯಮ ನಡೆಸುವವರಿಗೆ ತೊಂದರೆಯಾಗಿದ್ದು ಹೊಟಲ್ ಉದ್ಯಮ ಮುಂದುವರೆಸಲು ಪರ್ಯಾಯ ಉರುವಲುಗಳಾದ ಕಟ್ಟಿಗೆ ಹಾಗೂ ವಿದ್ಯುತ್ ಉರುವಲುಗಳ ಬಳಕೆಗೆ ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಕರೆ ನೀಡಿದರು. 

ಅವರು ಇಂದು ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ವಾಣಿಜ್ಯ ಬಳಕೆ ಅನಿಲ ಸಿಲಿಂಡರ್ ಸರಬರಾಜು ಸಮಸ್ಯೆ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.

ಗೃಹ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯ ಉಂಟಾಗಿರುವುದಿಲ್ಲ. ವಾಣಿಜ್ಯ ಬಳಕೆಯ ಅನಿಲ ಹೊರ ದೇಶಗಳಿಂದ ಪೂರ್ಣ ಪ್ರಮಾಣದಲ್ಲಿ ಆಮದು ಆಗುತ್ತಿದ್ದು, ಯುದ್ಧ ಭೀತಿಯಿಂದಾಗಿ ಅನಿಲ ಆಮದು ನಿಗಧೀತ ಪ್ರಮಾಣದಲ್ಲಿ ಆಗದೆ ವಾಣಿಜ್ಯ ಬಳಕೆ ಸಿಲಿಂಡರ್‌ಗಳ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದು ತಾತ್ಕಾಲಿಕ ಸಮಸ್ಯೆ ಆಗಿದೆ. ಇದಕ್ಕೆ ಪರ್ಯಾಯ ಉರುವಲುಗಳ ಬಳಕೆಯೊಂದೇ ಮಾರ್ಗ ಎಂದರು. 

ಇದನ್ನೂ ಓದಿ:

  ಈಗಾಗಲೇ ಜಿಲ್ಲೆಯಲ್ಲಿ ಕೆಲವು ಹೋಟೆಲ್ ಉದ್ಯಮಗಳು ಕಟ್ಟಿಗೆ ಸೇರಿದಂತೆ ಮತ್ತಿತರ ಉರುವಲುಗಳನ್ನು ಬಳಸಿ ಆಹಾರ ಪದಾರ್ಥಗಳನ್ನು ತಯಾರಿಸುತ್ತಿದ್ದಾರೆ. ಜಿಲ್ಲೆಯ ಎಲ್ಲ ಹೋಟೆಲ್ ಉದ್ಯಮಗಳು ಇದಕ್ಕೆ ಒತ್ತು ನೀಡುವುದರೊಂದಿಗೆ ಹೋಟೆಲ್ ಉದ್ಯಮದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕಾರ್ಮಿಕರಿಗೆ ಉದ್ಯೋಗವಕಾಶವನ್ನು ಮುಂದುವರೆಸುವುದು ಉತ್ತಮ. ಈಗಾಗಿರುವ ವ್ಯತ್ಯಯವು ತಾತ್ಕಾಲಿಕವಾಗಿದ್ದು, ಮುಂದೆ ಸಮಸ್ಯೆ ಸರಿಹೋಗಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ 25000 ದಿಂದ 30000 ಕ್ಕೂ ಹೆಚ್ಚು ಜನರು ಹೋಟೆಲ್ ಉದ್ಯಮದ ಕಾರ್ಮಿಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇವರಲ್ಲಿ ಹೆಚ್ಚು ಜನರು ಹೊರ ಜಿಲ್ಲೆ, ಹೊರ ರಾಜ್ಯಗಳಿಂದ ಆಗಮಿಸಿದ್ದಾರೆ. ಉದ್ಯಮದಲ್ಲಿ ವ್ಯತ್ಯಯ ಉಂಟಾಗಿ ಕಾರ್ಮಿಕರು ನಿರುದ್ಯೋಗಿಗಳಾಗಿ ಬೇರೆ ಉದ್ಯೋಗ ಅರಸಿ ಹೋದರೆ ಮುಂಬರುವ ದಿನಗಳಲ್ಲಿ ಹೋಟೆಲ್ ಗಳಲ್ಲಿ ಕಾರ್ಮಿಕರ ಸಮಸ್ಯೆ ಉಂಟಾಗುತ್ತದೆ. ಹೀಗಾಗದಂತೆ ನೋಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲೆಯಲ್ಲಿ 80 ಕ್ಕೂ ಹೆಚ್ಚು ಸಾಮಿಲ್‌ಗಳು ಕಾರ್ಯ ನಿರ್ವಹಿಸುತ್ತಿದ್ದು, ಹೋಟೆಲ್ ಉದ್ಯಮಗಳಿಗೆ ಸಹಾಯವಾಗುವ ನಿಟ್ಟಿನಲ್ಲಿ ಕಟ್ಟಿಗೆ ಲಭ್ಯವಾಗುವಂತೆ ಸಹಕರಿಸಬೇಕು ಎಂದ ಅವರು ಹೋಟೆಲ್ ಉದ್ಯಮಿಗಳು ತಮ್ಮ ದೈನಂದಿನ ಚಟುವಟಿಕೆಗೆ ವಿದ್ಯುತ್ ಸ್ಟವ್‌ಗಳ ಬಳಕೆಗೆ ಮುಂದಾದಲ್ಲಿ ಅವರುಗಳಿಗೆ ವಿದ್ಯುತ್ ಶಕ್ತಿ ಸರಬರಾಜು ಮಾಡುವ ಕಾರ್ಯವನ್ನು ಶೀಘ್ರದಲ್ಲಿಯೇ ಮಾಡಿಕೊಡಬೇಕು ಎಂದು ಮೆಸ್ಕಾಂ ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿ, ವಿದ್ಯುತ್ ಶಕ್ತಿ ಆಧಾರಿತ ಉಪಕಾರಣಗಳ ಬಳಕೆಗೆ ಅನುಕೂಲವಾಗುವಂತೆ ಅದರ ಉತ್ಪಾದಕರು ಸಹ ಸಹಕರಿಸಬೇಕು ಎಂದರು.

ಇದನ್ನೂ ಓದಿ:

ಹೊಟೆಲ್ ಮಾಲಿಕರ ಸಂಘದವರು ಪ್ರಸ್ತುತ ಈ ಹಿಂದೆ ಸರಬರಾಜಾಗುತ್ತಿದ್ದ ವಾಣಿಜ್ಯ ಸಿಲಿಂಡರ್ ಗಳ ಶೇ.25 ರಷ್ಟು ನೀಡಿದಲ್ಲಿ ನಮಗೆ ಅನುಕೂಲವಾಗುತ್ತಿದೆ ಎಂಬ ಮನವಿ ಕೇಳಿ ಬರುತ್ತಿದೆ ಈ ಬಗ್ಗೆ ಸರಕಾರಕ್ಕೆ ಪತ್ರ ಬರೆದು ತಮ್ಮ ಬೇಡಿಕೆಯನ್ನು ಪೂರೈಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದರು.

 ಸಾಮಿಲ್ ಮಾಲಕರ ಸಂಘದ ಪದಾಧಿಕಾರಿಗಳು ಮಾತನಾಡಿ, ಹೋಟೆಲ್ ಉದ್ಯಮಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಾಮಿಲ್‌ಗಳಲ್ಲಿ ಕಟ್ಟಿಗೆಗಳನ್ನು ಪ್ರಸ್ತುತ ಇರುವ ಬೆಲೆಗೆ ಯಾವುದೇ ಬೆಲೆ ಏರಿಸದೆ ಮಾರಾಟ ಮಾಡುತ್ತೇವೆ ಎಂದರು.

ಸಭೆಯಲ್ಲಿ ಜಿಲ್ಲಾ ಗ್ರಾಹಕರ ವ್ಯವಹಾರಗಳ ಇಲಾಖೆ ಉಪನಿರ್ದೇಶಕ ರವೀಂದ್ರ, ಸಾಮಿಲ್ ಮಲಕರು ಮತ್ತಿತರರು ಉಪಸ್ಥಿತರಿದ್ದರು. 

ಇದನ್ನೂ ಓದಿ:

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

19 hours ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

20 hours ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

20 hours ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

23 hours ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

23 hours ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

23 hours ago