ಉಡುಪಿ : ಹೋಮ್ ಗಾರ್ಡ್ ಸಿಬ್ಬಂದಿಗಳಿಗೆ ಮೂರು ತಿಂಗಳಿಂದ ಬಾಕಿ ಇರುವ ವೇತನವನ್ನು ತಕ್ಷಣ ಪಾವತಿಸುವಂತೆ ಮಾಜಿ ಶಾಸಕ ಪ್ರಮೋದ್ ಮಧ್ವರಾಜ್ ಒತ್ತಾಯಿಸಿದ್ದಾರೆ.
ಉಡುಪಿಯ ಹೋಮ್ ಗಾರ್ಡ್ ಸಿಬ್ಬಂದಿಯೋರ್ವರು ಪ್ರಮೋದ್ ಮಧ್ವರಾಜ್ ಅವರನ್ನು ಸಂಪರ್ಕಿಸಿ ಕಳೆದ ಮೂರು ತಿಂಗಳಿನಿಂದ ತಮಗೆ ವೇತನ ಸಿಗದಿರುವ ಬಗ್ಗೆ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಈ ವಿಚಾರವನ್ನು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿರುವ ಮಾಜಿ ಶಾಸಕರು ವೇತನ ಬಿಡುಗಡೆಗೆ ಒತ್ತಾಯಿಸಿದ್ದಾರೆ.
“ಕರ್ನಾಟಕ ಪೋಲಿಸ್ ನ ಶಕ್ತಿಗಳಲ್ಲೊಂದಾಗಿರುವ ಹೋಂ ಗಾರ್ಡ್ಸ್ ಸಿಬ್ಬಂದಿಗಳು ಹಗಲಿರುಳು ಪೋಲಿಸ್ ರವರ ಜೊತೆಗೆ ಶ್ರಮಿಸುತ್ತಿದ್ದು , ಕಳೆದ ಮೂರು ತಿಂಗಳಿನಿಂದ ತಮಗೆ ವೇತನ ಸಿಗದಿರುವ ಬಗ್ಗೆ ಹೋಂ ಗಾರ್ಡ್ ಒಬ್ಬರು ನನಗೆ ಕರೆ ಮಾಡಿ ತಿಳಿಸಿದ್ದು ಜಿಲ್ಲಾಡಳಿತದ ಜಿಲ್ಲಾಧಿಕಾರಿಯವರಿಗೆ ಕರೆ ಮಾಡಿ ಸೂಕ್ತ ಕ್ರಮವಹಿಸುವಂತೆ ತಿಳಿಸಿದ್ದೇನೆ ಮತ್ತು ಈ ವಿಚಾರವನ್ನು ಐಎಎಸ್ ಅಧಿಕಾರಿ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯಾಗಿರುವ ಮೇಜರ್ ಮಣಿವಣ್ಣನ್ ರವರ ಗಮನಕ್ಕೂ ತರಲಾಗಿದ್ದು ಈ ಬಗ್ಗೆ ಮೇಜರ್ ಮಣಿವಣ್ಣನ್ ರವರು ತಕ್ಷಣ ಪ್ರತಿಕ್ರಿಯಿಸಿ ಉಡುಪಿ ಜಿಲ್ಲಾಧಿಕಾರಿಯವರ ಜೊತೆಗೆ ಚರ್ಚಿಸಿ ಶೀಘ್ರದಲ್ಲಿ ವೇತನ ಪಾವತಿಗೆ ಕ್ರಮವಹಿಸುವುದಾಗಿ ತಿಳಿಸಿದ್ದಾರೆ ಎಂದು ಮಾಜಿ ಶಾಸಕರು ಬರೆದುಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…