ಉಡುಪಿ : ಕೊರೊನಾ ಕಾರಣದಿಂದ ಸುಮಾರು 1.5 ವರ್ಷದಿಂದ ಮುಚ್ಚಲ್ಪಟ್ಟಿದ್ದ ಜಿಲ್ಲೆಯ ಎಲ್ಲಾ ಅಂಗನವಾಡಿಗಳು ಇಂದು ಆರಂಭಗೊಂಡಿದ್ದು, ಸುಮಾರು 1.5 ವರ್ಷದ ದೀರ್ಘ ರಜೆಯ ಬಳಿಕ ಚಿಣ್ಣರು ಅಂಗನವಾಡಿಗೆ ಮರಳಿದ್ದಾರೆ.
ಉಡುಪಿಯಲ್ಲಿ ಇಂದಿನಿಂದ ಅಂಗನವಾಡಿ ಪ್ರಾರಂಭೋತ್ಸವದ ಹಿನ್ನೆಲೆ ಅಂಗನವಾಡಿ ಸಿಬ್ಬಂದಿಗಳು ಸಿಹಿತಿಂಡಿ, ಗುಲಾಬಿ ಹೂ ನೀಡಿ ಮಕ್ಕಳನ್ನು ಸ್ವಾಗತಿಸಿದರು.
ಈ ಸಂದರ್ಭ ಉಡುಪಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಸಿಇಒ ಅಂಗನವಾಡಿಗೆ ಭೇಟಿ ನೀಡಿದ್ದು, ಮಕ್ಕಳನ್ನು ಪ್ರೀತಿಯಿಂದ ಬರಮಾಡಿಕೊಂಡರು.
ಈ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಸಿಇಒ ಡಾ ನವೀನ್ ಭಟ್, “ಪರಿಸ್ಥಿತಿ ಆಧರಿಸಿ 15 ದಿನಗಳ ಬಳಿಕ ಮಕ್ಕಳಿಗೆ ಪೌಷ್ಟಿಕ ಆಹಾರದ ವ್ಯವಸ್ಥೆ ಪ್ರಾರಂಭಿಸಲಾಗುವುದು” ಎಂದು ತಿಳಿಸಿದರು.
ಅಂಗನವಾಡಿ ಆರಂಭಕ್ಕೂ ಮುನ್ನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಎಲ್ಲಾ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮೊದಲ ಹಂತದಲ್ಲಿ ಬೆಳಗ್ಗೆ 10 ರಿಂದ 12 ರವರೆಗೆ ಮಾತ್ರ ಅಂಗನವಾಡಿಯನ್ನು ತೆರೆಯಲು ನಿರ್ಧರಿಸಿದ್ದು, ಮುಂದಿನ ಸೂಚನೆವರೆಗೆ ಪೂರಕ ಪೌಷ್ಠಿಕ ಆಹಾರವನ್ನು/ಆಹಾರ ಪದಾರ್ಥಗಳನ್ನು ಮನೆಗೆ ನೀಡಲಾಗುವುದು. ಕೇಂದ್ರದಲ್ಲಿ ಆಹಾರ ತಯಾರಿಸುವವರು ಮಾಸ್ಕ್, ಹೆಡ್ ಕ್ಯಾಪ್ ಮತ್ತು ಏಪ್ರನ್ ಧರಿಸುವಂತೆ ಸೂಚನೆ ನೀಡಲಾಗಿದೆ
2028ಕ್ಕೆ ರಾಜ್ಯದಲ್ಲಿ ಇದೇ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್ ವಿಶ್ವಾಸ ಬೆಂಗಳೂರು: '2028ಕ್ಕೆ ರಾಜ್ಯದಲ್ಲಿ…
ಬೆಳ್ತಂಗಡಿ : ಡೋರ್ ಲಾಕ್ ಆಗಿ ಕಾರಿನೊಳಗೆ ಸಿಲುಕಿಕೊಂಡ ಮಗು; ಗ್ಲಾಸ್ ಒಡೆದು ರಕ್ಷಣೆ ಬೆಳ್ತಂಗಡಿ: ಕುವೆಟ್ಟು ಗ್ರಾಮದ ಮದ್ದಡ್ಕದಲ್ಲಿ…
ತೈಲ ದರ ಹೆಚ್ಚಳದಿಂದ ಲಾಭ ಇರೋದು ರಾಜ್ಯಕ್ಕೆ ,ಕೇಂದ್ರಕ್ಕಲ್ಲ: ಆರ್. ಅಶೋಕ್ ಸಮರ್ಥನೆ ಬೆಂಗಳೂರು: ತೈಲ ದರ ಹೆಚ್ಚಳದಿಂದ ಕೇಂದ್ರಕ್ಕೆ…
ಬಕ್ರೀದ್ ಹಬ್ಬದ ವೇಳೆ ಸಾರ್ವಜನಿಕ ಸ್ಥಳಗಳಲ್ಲಿ ಪ್ರಾಣಿ ಬಲಿ, ರಸ್ತೆ ತಡೆದು ನಮಾಝ್‌ಗೆ ಅವಕಾಶವಿಲ್ಲ: ಯೋಗಿ ಆದಿತ್ಯನಾಥ್ ಲಕ್ನೋ: ಬಕ್ರೀದ್…
ಉಡುಪಿ : ಕೇಂದ್ರ ಮೋದಿ ಸರ್ಕಾರದಿಂದ ಪೆಟ್ರೋಲ್ ದರ ಹೆಚ್ಚಳಕ್ಕೆ ನವೀನ್ ಸಾಲಿಯಾನ್ ಖಂಡನೆ ಉಡುಪಿ: ದೇಶದಲ್ಲಿ ಮತ್ತೆ ಇಂಧನ…
ಕೊಲ್ಲೂರು : ಅಪಘಾತದಿಂದ ಮೃತಪಟ್ಟ ಮಹಿಳೆಯ ಚಿನ್ನಾಭರಣ ಕಳವು ಪ್ರಕರಣ : ಆರೋಪಿ ಬಂಧನ ಉಡುಪಿ: ಬೈಂದೂರು ತಾಲೂಕು ಕೊಲ್ಲೂರು…