ಉಡುಪಿ: ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ (ಉದ್ಯೋಗದ ಕ್ರಮೀಕರಣ ಮತ್ತು ಸೇವಾ ಷರತ್ತುಗಳು) ಕಾಯ್ದೆ 1996 ಮತ್ತು ಕರ್ನಾಟಕ ನಿಯಮಗಳು 2006 ರಡಿ 10 ಕ್ಕಿಂತ ಹೆಚ್ಚಿನ ಕಾರ್ಮಿಕರನ್ನು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಲ್ಲಿ ಕಡ್ಡಾಯವಾಗಿ ಕಟ್ಟಡ ಮಾಲೀಕರು, ನಿಯೋಜಕರು ಹಾಗೂ ಗುತ್ತಿಗೆದಾರರು ಕಟ್ಟಡ ನಿರ್ಮಾಣ ಕಾಮಗಾರಿ ಸಂಸ್ಥೆಯನ್ನಾಗಿ ನೋಂದಾಯಿಸಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ ನಿಗದಿತ ಶುಲ್ಕವನ್ನು ಭರಿಸಿ, ನೋಂದಣಿ ಪ್ರಮಾಣ ಪತ್ರವನ್ನು ಕಾರ್ಮಿಕ ಇಲಾಖೆಯಿಂದ ಪಡೆಯುವುದು ಕಡ್ಡಾಯವಾಗಿರುತ್ತದೆ.
ವ್ಯಾಸ್ತವ್ಯದ ಕಟ್ಟಡ ನಿರ್ಮಾಣ ಕಾಮಗಾರಿಗೆ ಸಂಬಂಧಿಸಿದಂತೆ ರೂ.10 ಲಕ್ಷ ನಿರ್ಮಾಣ ವೆಚ್ಚ ಮೀರಿದ ಕಟ್ಟಡ ಮತ್ತು ಯಾವುದೇ ವಾಣಿಜ್ಯ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಕೈಗೊಳ್ಳುವ ಕಟ್ಟಡದ ಮಾಲೀಕರು ಕಟ್ಟಡ ನಿರ್ಮಾಣ ಕಾರ್ಯ ಪೂರ್ಣಗೊಂಡ ಬಳಿಕ ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ occupancy certificate ಅನ್ನು ಕಟ್ಟಡದ ನಿರ್ಮಾಣ ಮಾಲೀಕರು ಪಡೆಯುವ ಪೂರ್ವದಲ್ಲಿ ಕಾರ್ಮಿಕ ಅಧಿಕಾರಿ ಹಾಗೂ ಸುಂಕ ಮೌಲ್ಯಮಾಪನಾಧಿಕಾರಿಗಳಿಗೆ ಕಟ್ಟಡದ ಮಾಲೀಕರು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಸುಂಕ ಕಾಯ್ದೆಯನ್ವಯ ನಮೂನೆ-1 ಹಾಗೂ ನಮೂನೆ-4 ರಲ್ಲಿ ಭರ್ತಿ ಮಾಡಿದ ಮಾಹಿತಿ ಹಾಗೂ ಅಗತ್ಯ ದಾಖಲಾತಿಯನ್ನು ಸಲ್ಲಿಸಿ, ಸುಂಕ ಮೌಲ್ಯಮಾಪನ ಆದೇಶ ಮಾಡಿಸಿಕೊಂಡು ಸುಂಕದ ಪೂರ್ಣ ಮೊತ್ತ ಪಾವತಿ ಮಾಡಿರುವ ಬಗ್ಗೆ ದೃಢಪತ್ರವನ್ನು ಪಡೆದು ಸ್ಥಳೀಯ ಸಂಸ್ಥೆಯ ಪರವಾನಗಿ ಪ್ರಾಧಿಕಾರ ಕಛೇರಿಗಳಿಂದ occupancy certificate ಅನ್ನು ಪಡೆದುಕೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳ ಕಛೇರಿ ಪ್ರಕಟಣೆ ತಿಳಿಸಿದೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…