Featured

ಉಡುಪಿ : ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ, ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ: ನೂತನ ಜಿಲ್ಲಾಧಿಕಾರಿ -Vishwanews24

ಉಡುಪಿ: ನಗರಸಭೆಯಲ್ಲಿ ಕೆಲಸ ಮಾಡುವ ಅಧಿಕಾರಿಗಳು ಬೆಳಗ್ಗೆ 6 ಗಂಟೆಯಿಂದಲೇ ಕೆಲಸ ಮಾಡುವ ಮನಸ್ಥಿತಿಯಲ್ಲಿ ಇರಬೇಕು. 10 ಗಂಟೆಗೆ ಕೆಲಸಕ್ಕೆ ಬರುವ ಅಧಿಕಾರಿಗಳು ಬೇಕಿಲ್ಲ.  ಮೈಸೂರು ಜಿಲ್ಲೆಯನ್ನು ನಂಬರ್‌ ವನ್‌ ಮಾಡಿದಂತೆ ಉಡುಪಿಯನ್ನೂ ಮಾಡಲು ಸಾಧ್ಯವಿದೆ. ಇದಕ್ಕಾಗಿ ಅಧಿಕಾರಿಗಳು ನಿಷ್ಠೆಯಿಂದ ಕಾರ್ಯನಿರ್ವಹಿಸಬೇಕಿದೆ ಎಂದು ನೂತನ ಜಿಲ್ಲಾಧಿಕಾರಿ, ನಗರಸಭೆಯ ಆಡಳಿತಾಧಿಕಾರಿ ಜಿ.ಜಗದೀಶ್‌ ಅಧಿಕಾರಿ ಗಳಿಗೆ ಖಡಕ್‌ ಸೂಚನೆ ನೀಡಿದರು.

ಗುರುವಾರ ಶಾಸಕ ರಘುಪತಿ ಕೆ.ಭಟ್‌ ನೇತೃತ್ವದಲ್ಲಿ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ನಗರಸಭಾ ಚುನಾ ಯಿತ ಸದಸ್ಯರು ಹಾಗೂ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಅವರು ಎಚ್ಚರಿಕೆ ನೀಡಿದರು.

ವಿವಿಧೆಡೆ ಅಧಿಕಾರಿಯಾಗಿ ಕೆಲಸ ಮಾಡಿದ ಅನುಭವವಿದೆ. ಉಡುಪಿ ಜಿಲ್ಲೆಯಲ್ಲಿಯೂ ಈ ಹಿಂದೆ ಕರ್ತವ್ಯ ನಿರ್ವಹಿಸಿದ್ದೇನೆ. ನಗರಾಭಿವೃದ್ಧಿ ಬಗ್ಗೆ ಹಲವು ಅನುಭವಗಳಿವೆ. ಈ ನಗರವನ್ನು ಅಭಿವೃದ್ಧಿ ಮಾಡುವುದು ದೊಡ್ಡ ಸಂಗತಿಯೇ ಅಲ್ಲ. ಅಧಿಕಾರಿಗಳು ಒತ್ತಡ ನಿಭಾಯಿಸಿಕೊಂಡು ಕೆಲಸ ನಿರ್ವಹಿಸಿದರೆ ಎಲ್ಲವೂ ಸಾಧ್ಯ ಎಂದರು.

ನಗರದ ಅಭಿವೃದ್ಧಿಗೆ ಸಂಬಂಧಪಟ್ಟಂತೆ ಸಾಮಾನ್ಯ ಕೆಲಸಕಾರ್ಯ ಗಳಿಗೆ ಜನರಿಗಿಂತಲೂ ಯಂತ್ರೋಪಕರಣಗಳನ್ನು ಬಳಸಿಕೊಳ್ಳಬೇಕು. ನಗರ
ಸಭೆಯ ಅಧಿಕಾರಿಗಳು ಚುನಾಯಿತ ಜನಪ್ರತಿನಿಧಿಗಳು ಸಹಿತ ಸಾರ್ವಜನಿಕ ರೊಂದಿಗೆ ಔಚಿತ್ಯದಿಂದ ವರ್ತಿಸಬೇಕು. ಇದಕ್ಕೆ ಆಯುಕ್ತರು ವ್ಯವಸ್ಥೆ ಕಲ್ಪಿಸಬೇಕು. ನಗರವನ್ನು ಅಭಿವೃದ್ಧಿಗೊಳಿಸಲು ಹಲವಾರು ಯೋಜನೆಗಳನ್ನು ರೂಪಿಸಲಾಗುವುದು. ಮರಳು ಸಮಸ್ಯೆ ನಿವಾರಣೆಗೆ ಶ್ರಮಿಸಲಾಗುವುದು ಎಂದರು.

 

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago