Featured

ಉಡುಪಿ : 13 ವರ್ಷಗಳ ನಂತರ ಜಿಲ್ಲೆಯಲ್ಲಿ ಮೊದಲ ಎನ್‌ಕೌಂಟರ್ ; ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ – vishwanews24

ಉಡುಪಿ : 13 ವರ್ಷಗಳ ನಂತರ ಜಿಲ್ಲೆಯಲ್ಲಿ ಮೊದಲ ಎನ್‌ಕೌಂಟರ್ ; ನಕ್ಸಲ್ ಮುಖಂಡ ವಿಕ್ರಂಗೌಡ ಹತ್ಯೆ

ಹೆಬ್ರಿ : ಮಹತ್ವದ ಬೆಳವಣಿಗೆಯಲ್ಲಿ ಹೆಬ್ರಿ ತಾಲೂಕಿನ ಕಬ್ಬಿನಾಲೆಯಲ್ಲಿ ನಡೆದ ಎನ್‌ಕೌಂಟರ್ ನಲ್ಲಿ ನಕ್ಸಲ್ ನಿಗ್ರಹ ಪಡೆ(ಎಎನ್‌ಎಫ್) ನಕ್ಸಲ್ ಮುಖಂಡ ವಿಕ್ರಂಗೌಡನನ್ನು ಹತ್ಯೆ ಮಾಡಿದೆ. ಈ ಘಟನೆಯು ಉಡುಪಿ ಜಿಲ್ಲೆಯಲ್ಲಿ 13 ವರ್ಷಗಳ ನಂತರ ವರದಿಯಾದ ಮೊದಲ ಎನ್‌ಕೌಂಟರ್ ಆಗಿದೆ.

ಕಳೆದ ಕೆಲದಿನಗಳಿಂದ ಹೆಬ್ರಿ, ಶೃಂಗೇರಿ ಭಾಗದಲ್ಲಿ ನಕ್ಸಲ ಚಲನವಲನದ ಬಗ್ಗೆ ಎಎನ್‌ಎಫ್‌ಗೆ ಮಾಹಿತಿ ಲಭ್ಯವಾಗಿತ್ತು. ಈ ನಡುವೆ ಎಎನ್‌ಎಫ್ ತಂಡ ನಿನ್ನೆ ತಂಡ ಕೂಬಿಂಗ್ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಮೂವರು ನಕಕ್ಸಲರ ತಂಡ ಇರುವುದನ್ನು ಪತ್ತೆ ಮಾಡಿದೆ. ಈ ವೇಳೆ ನಡೆದ ಶೂಟೌಟ್‌ನಲ್ಲಿ ಓರ್ವ ಹತನಾಗಿದ್ದು, ಇನ್ನೂ ಇಬ್ಬರು ನಕ್ಸಲರು ಕಾಡಿನಲ್ಲಿ ಪರಾರಿಯಾಗಿದ್ದಾರೆ. ಈ ಶೂಟೌಟ್‌ನಲ್ಲಿ ವಿಕ್ರಂಗೌಡ ಎನ್‌ಕೌಂಟರ್‌ ಆಗಿದ್ದಾನೆ. ಹೆಬ್ರಿ ವ್ಯಾಪ್ತಿಯ ಪೀತೆ ಬೈಲ್ ಎಂಬಲ್ಲಿ ಘಟನೆ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಎನ್‌ಕೌಂಟರ್ ನಡೆದಾಗ ಅಗತ್ಯ ಸಾಮಗ್ರಿಗಳನ್ನು ಪಡೆಯಲು ಸೋಮವಾರ ತಡರಾತ್ರಿ ನಕ್ಸಲ್ ತಂಡ ಕಬ್ಬಿನಾಲೆ ಗ್ರಾಮಕ್ಕೆ ಭೇಟಿ ನೀಡಿತ್ತು ಎನ್ನಲಾಗಿದೆ. ನಕ್ಸಲ್ ಚಲನವಲನಗಳ ಬಗ್ಗೆ ಖಚಿತ ಮಾಹಿತಿ ಲಭ್ಯವಾದ ಬಳಿಕ ಎಎನ್‌ಎಫ್ ಈ ಪ್ರದೇಶದಲ್ಲಿ ಕೂಂಬಿಂಗ್ ಕಾರ್ಯಾಚರಣೆಯನ್ನು ತೀವ್ರಗೊಳಿಸಿದೆ.

Vishwa News 24

Recent Posts

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ -vishwanews24

ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…

14 hours ago

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ -vishwanews24

ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…

16 hours ago

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ -vishwanews24

ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…

16 hours ago

ಸೌಜನ್ಯಾ ಪ್ರಕರಣ: ಎಸ್‌ಐಟಿಯಲ್ಲಿರುವ ಎಲ್ಲ ಅಧಿಕಾರಿಗಳು ಪರಿಪೂರ್ಣರಾಗಿಲ್ಲ ಎಂಬ ಸಂಶಯವಿದೆ : ಕಲ್ಲಡ್ಕ ಪ್ರಭಾಕರ ಭಟ್‌ -vishwanews24

ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್‌ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…

16 hours ago

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ

ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…

17 hours ago

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು -vishwanews24

ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…

17 hours ago