Featured

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ – VIshwanews24

ಉಡುಪಿ: 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯ..

ಉಡುಪಿ: ಚೀನಾ, ರಿಪಬ್ಲಿಕ್ ಆಫ್ ಕೊರಿಯಾ, ಜಪಾನ್, ಯು.ಎಸ್.ಎ ಹಾಗೂ ಬ್ರೆಝಿಲ್ ದೇಶಗಳಲ್ಲಿ ಈಗಾಗಲೇ ಕೋವಿಡ್ – 19 4ನೇ ಅಲೆ ಪ್ರಕರಣಗಳು ಹೆಚ್ಚುತ್ತಿದ್ದು, ಇದರಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18 ವರ್ಷ ಮೇಲ್ಪಟ್ಟ ಎಲ್ಲರೂ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯುವುದು ಅಗತ್ಯವಾಗಿದೆ.

ಜಿಲ್ಲೆಯಲ್ಲಿರುವ 18 ವರ್ಷ ಮೇಲ್ಪಟ್ಟವರಲ್ಲಿ 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ದಾಟಿದವರು ಸಮೀಪದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬಹುದಾಗಿದೆ.

ಜಿಲ್ಲೆಯಲ್ಲಿರುವ 15 ರಿಂದ 17 ವರ್ಷ ಪ್ರಾಯದ ಶಾಲಾ ಮಕ್ಕಳಲ್ಲಿ ಕೋವ್ಯಾಕ್ಸಿನ್ ಎರಡನೇ ಡೋಸ್ ಲಸಿಕೆ ಪಡೆಯಲು ಬಾಕಿ ಇದ್ದಲ್ಲಿ ಶಾಲೆಗೆ ಸಂಬ0ಧಪಟ್ಟ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಿ ಲಸಿಕೆ ಲಭ್ಯತೆಯ ಬಗ್ಗೆ ಖಚಿತಪಡಿಸಿಕೊಂಡು ದಿನಾಂಕ ಮತ್ತು ಸಮಯವನ್ನು ನಿಗದಿಪಡಿಸಿ ಲಸಿಕೆ ಪಡೆಯಬೇಕು.

ಪ್ರಸ್ತುತ ಜಿಲ್ಲೆಯಲ್ಲಿ ಕೋವ್ಯಾಕ್ಸಿನ್ ಲಸಿಕೆ ಮಾತ್ರ ಲಭ್ಯವಿದ್ದು, ಕೋವಿಶೀಲ್ಡ್ ಲಸಿಕೆಯು ಲಭ್ಯವಿರುವುದಿಲ್ಲ. ಕೋವಿಶೀಲ್ಡ್ ಲಸಿಕೆಯು ಜಿಲ್ಲೆಗೆ ಸರಬರಾಜಾದ ತಕ್ಷಣ ಮಾಹಿತಿ ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು
ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

29 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು – vishwanews24

ಸಪ್ತಪದಿ ಸೇರಿ ಅಗತ್ಯ ವಿಧಿ-ವಿಧಾನಗಳು ನೆರವೇರಿದಾಗ ಮಾತ್ರ ಹಿಂದೂ ವಿವಾಹ ಮಾನ್ಯ: ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ಅಹಮದಾಬಾದ್: ಕೇವಲ…

2 hours ago

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ : ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ – vishwanews24

ಪಾನ್ ಮಸಾಲಾ, ಗುಟ್ಕಾ ಮಾರಾಟ  ಬ್ಯಾನ್ ಎಚ್ಚರಿಕೆ ನೀಡಿದ್ದ ಸಿಎಂ:  ರಾಜ್ಯದಲ್ಲಿ 32 ಪಾನ್ ಮಸಾಲಾ ಮಾದರಿ ಸಂಗ್ರಹ ಬೆಂಗಳೂರು:…

2 hours ago