ಉಡುಪಿ : ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದರೆಂಬ ಖಚಿತ ಮಾಹಿತಿ ಪಡೆದ ಉಡುಪಿ ಜಿಲ್ಲಾ ಪೊಲೀಸರು ಕಾರ್ಯಾಚರಣೆ ನಡೆಸಿ 2.66 ಲಕ್ಷ ಮೌಲ್ಯದ 8 ಕೆ.ಜಿ ಗಾಂಜಾ, ಕೃತ್ಯಕ್ಕೆ ಬಳಸಿದ ಆಟೋರಿಕ್ಷಾವನ್ನು ವಶಪಡಿಸಿಕೊಂಡ ಘಟನೆ ಮಣಿಪಾಲದ ಶೀಂಬ್ರಾ ಸೇತುವೆ ಬಳಿ ನಡೆದಿದೆ.
ಬಂಧಿತರನ್ನು ಮಹಾರಾಷ್ಟ್ರ ಮೂಲದ ಗೌತಮ್ ರಾಜು ಶಿಮುಂಗೆ, ಪಂಜಾಬ್ ಮೂಲದ ಜೆಸ್ವಿಂದರ್ ಸಿಂಗ್ ಹಾಗೂ ಬ್ರಹ್ಮಾವರ ಕೊಳಲಗಿರಿಯ ಕೃಷ್ಣ ಜಲಗಾರ್ ಎನ್ನಲಾಗಿದೆ.
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ವಿಷ್ಣುವರ್ಧನ್ ಅವರ ಮಾರ್ಗದರ್ಶನದಲ್ಲಿ ಹಾಗೂ ಅಡಿಷನಲ್ ಎಸ್.ಪಿ ಕುಮಾರ ಚಂದ್ರ ಹಾಗೂ ಸುಧಾಕರ ನಾಯಕ್ ಡಿ.ವೈ.ಎಸ್.ಪಿ ಉಡುಪಿ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದೆ.
ಬ್ರಹ್ಮಾವರ : ಭಿಕ್ಷಾಟನೆಯಿಂದ ಬಂದ ಹಣವನ್ನು ಸಾಲಿಗ್ರಾಮ ಗುರುನರಸಿಂಹ ದೇವಸ್ಥಾನಕ್ಕೆ ನೀಡಿದ ವೃದ್ಧೆ -Vishwanews24
ಮಣಿಪಾಲ ಪೊಲೀಸ್ ನಿರೀಕ್ಷಕ ಮಂಜುನಾಥ್.ಎಂ ಗೌಡ , ಬೈಂದೂರು ವೃತ್ತ ನಿರೀಕ್ಷಕ ಸಂತೋಷ್ ಕಾಯ್ಕಣಿ ಹಾಗೂ ಮಣಿಪಾಲ ಪೊಲೀಸ್ ಠಾಣೆಯ ಸಿಬ್ಬಂಧಿಗಳಾದ ಪ್ರೊಬೇಶನರಿ ಪಿ.ಎಸ್.ಐ ದೇವರಾಜ್ ಸಿದ್ದಣ್ಣ ಬಿರಾದಾರ್ ಮತ್ತು ಅಮೀನ್ಸಾಬ್ ಮೌಲಾಸಾಬ್ ಅತ್ತಾರ್, ಎ.ಎಸ್.ಐ ಶೈಲೇಶ್, ಹೆಚ್.ಸಿಗಳಾದ ದಯಾಕರ್ ಪ್ರಸಾದ್, ವಿಶ್ವಜಿತ್ , ನವೀನ್, ಅಬ್ದುಲ್ ರಜಾಕ್ ಪಿ.ಸಿ ಸಂತೋಷ್ ಹೆಚ್.ಟಿ, ರೇವಣಸಿದ್ದಪ್ಪ, ಲೊಕೇಶ್ ಮತ್ತು ಆದರ್ಶ , ಬೈಂದೂರು ವೃತ್ತದ ಸಿಬ್ಬಂಧಿಗಳಾದ ಚಂದ್ರ, ಅಶೋಕ, ನವೀನ್ ಮತ್ತು ಗುರು ಪ್ರಸಾದ್ ರವರು ಈ ಕಾರ್ಯಚರಣೆಯಲ್ಲಿ ಭಾಗವಹಿಸಿದ್ದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…