ಉಡುಪಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಉಡುಪಿ ಜಿಲ್ಲೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇಂಜಿನಿಯರಿAಗ್ ಘಟಕ ಬೆಂಗಳೂರು, ಜಿಲ್ಲಾಸ್ಪತ್ರೆ ಉಡುಪಿ ಇವರ ವತಿಯಿಂದ, 250 ಹಾಸಿಗೆಗಳ ಜಿಲ್ಲಾ ಆಸ್ಪತ್ರೆ ಉಡುಪಿಯ ನೂತನ ಕಟ್ಟಡದ ಶಂಕುಸ್ಥಾಪನಾ ಸಮಾರಂಭವು ಆಗಸ್ಟ್ 12 ರಂದು ಮಧ್ಯಾಹ್ನ 3.30 ಕ್ಕೆ ಅಜ್ಜರಕಾಡು ಜಿಲ್ಲಾ ಆಸ್ಪತ್ರೆ ಆವರಣದಲ್ಲಿ ನಡೆಯಲಿದೆ.
ನೂತನ ಕಟ್ಟಡದ ಶಂಕುಸ್ಥಾಪನೆಯನ್ನು ಮಾನ್ಯ ಮುಖ್ಯಮಂತ್ರಿಗಳಾದ ಬಿ.ಬಸವರಾಜ ಬೊಮ್ಮಾಯಿ ನೆರವೇರಿಸಲಿದ್ದು, ಶಾಸಕ ರಘುಪತಿ ಭಟ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಕಾರ್ಯಕ್ರಮದಲ್ಲಿ ಕೇಂದ್ರದ ಕೃಷಿ ಮತ್ತು ರೈತರ ಕಲ್ಯಾಣ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವರಾದ ಡಾ|| ಕೆ.ಸುಧಾಕರ್ , ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ವಿ.ಸುನೀಲ್ ಕುಮಾರ್, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಉಪಸ್ಥಿತರಿರಲಿದ್ದಾರೆ.
ಮುಖ್ಯ ಅತಿಥಿಗಳಾಗಿ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ.ಜಯಪ್ರಕಾಶ್ ಹೆಗ್ಡೆ, ರಾಜ್ಯಸಭಾ ಸದಸ್ಯ ಓಸ್ಕರ್ ಫೆರ್ನಾಂಡಿಸ್, ಸಂಸದ ಬಿ.ವೈ ರಾಘವೇಂದ್ರ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಹಾಲಾಡಿ ಶ್ರೀನಿವಾಸ ಶೆಟ್ಟಿ, ಲಾಲಾಜಿ ಆರ್ ಮೆಂಡನ್, ಬಿ.ಎಂ.ಸುಕುಮಾರ ಶೆಟ್ಟಿ, ವಿಧಾನ ಪರಿಷತ್ ಸದಸ್ಯರಾದ ಕೆ.ಪ್ರತಾಪಚಂದ್ರ‍್ರ ಶೆಟ್ಟಿ, ಆಯನೂರು ಮಂಜುನಾಥ್, ಎಸ್.ಎಲ್ ಬೋಜೇಗೌಡ, ಡಾ.ತೇಜಸ್ವಿನಿ ಗೌಡ, ಉಡುಪಿ ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಎ.ರಾಘವೇಂದ್ರ ಕಿಣಿ, ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್ ಭಾಗವಹಿಸಲಿದ್ದಾರೆ.
ಅಡ್ಡಮತದಾನ ಮಾಡಿಲ್ಲವೆಂದು ಧರ್ಮಸ್ಥಳದಲ್ಲಿ ಬಿಜೆಪಿ ಹೆಚ್.ಕೆ ಸುರೇಶ್ ಆಣೆ ಪ್ರಮಾಣ.. ನಾನು ಯಾವುದೇ ತಪ್ಪು ಮಾಡಿಲ್ಲ, ಅಡ್ಡಮತದಾನದಲ್ಲಿ ಭಾಗಿಯಾಗಿಲ್ಲ.. ನಾನು…
ಉಡುಪಿ ಜಿಲ್ಲೆಯ ನಗರ ಪೊಲೀಸ್ ಠಾಣೆಯ ಶಿವಕುಮಾರ್ ಹೆಚ್ ಎಂ ಅವರಿಗೆ 2026 ನೇ ಸಾಲಿನ ಡಿಜಿ ಪದಕ ಉಡುಪಿ:…
ಜುಲೈ 1 ರಿಂದ ಕಮರ್ಶಿಯಲ್, ಇಂಡಸ್ಟ್ರಿಯಲ್ ಗ್ಯಾಸ್ ಸಿಲಿಂಡರ್ ದರ ಏರಿಕೆ ನವದೆಹಲಿ: ಜುಲೈ 1 ರಿಂದ ಕಮರ್ಶಿಯಲ್ ಹಾಗೂ…
ರಾಮ ಮಂದಿರ ದೇಣಿಗೆ ಹಗರಣ ಮುಚ್ಚಿ ಹಾಕಲು ಬಿಜೆಪಿ ಪ್ರಯತ್ನ: ಪ್ರಿಯಾಂಕ್ ಖರ್ಗೆ ಆರೋಪ ಬೆಂಗಳೂರು: ರಾಮ ಮಂದಿರ ದೇಣಿಗೆ…
ನಂದಿನಿ ಮಿಲ್ಕ್ ಪಾರ್ಲರ್‌ನಲ್ಲಿ ಅಗ್ನಿ ಅವಘಡ : ಶಾಕ್‌ನಿಂದ ಮಾಲೀಕ ಹೃದಯಾಘಾತಕ್ಕೆ ಬಲಿ ಚಿಕ್ಕಬಳ್ಳಾಪುರ: ನಗರದ ಪಶುವೈದ್ಯ ಇಲಾಖೆ ಕಚೇರಿ ಸಮೀಪ…
ಮಂಗಳೂರು: ಮೀನುಗಾರಿಕಾ ಬೋಟ್ ಮುಳುಗಡೆ; ಆರು ಮಂದಿ ಮೀನುಗಾರರ ರಕ್ಷಣೆ ಮಂಗಳೂರು : ಮಂಗಳೂರಿನ ಬಳಿ ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ಧ…