ಉಡುಪಿ : ಭಾರತದ ಏಕತೆ, ವೈವಿಧ್ಯತೆ ಹಾಗೂ ಭಾಷಾ ಸಾಮರಸ್ಯವನ್ನು ಸಾರುವ ಉದ್ದೇಶದಿಂದ ಖ್ಯಾತ ಗಾಯಕ ವಿದ್ವಾನ್ ಯಶವಂತ್ ಎಂ.ಜಿ. ಅವರು ವಿಶಿಷ್ಟ ವಿಶ್ವ ದಾಖಲೆ ಪ್ರಯತ್ನಕ್ಕೆ ಮುಂದಾಗಿದ್ದಾರೆ.
‘ಏಕ್ ಭಾರತ್, ಶ್ರೇಷ್ಠ ಭಾರತ್’ ಪರಿಕಲ್ಪನೆಯ ಆಧಾರದ ಮೇಲೆ ನಡೆಯಲಿರುವ ಈ ವಿಶ್ವ ದಾಖಲೆ ಕಾರ್ಯಕ್ರಮದ ಪೋಸ್ಟರ್‌ನ್ನು ಕೆಪಿಸಿಸಿ ಕರ್ನಾಟಕ ಕಾರ್ಯದರ್ಶಿ ಮಿಥುನ್ ರೈ ಬಿಡುಗಡೆ ಮಾಡಿ, ಯಶವಂತ್ ಎಂ.ಜಿ. ಅವರ ವಿಶಿಷ್ಟ ಪ್ರಯತ್ನಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಮಿಥುನ್ ರೈ, ಭಾರತದ ವೈವಿಧ್ಯಮಯ ಭಾಷಾ ಹಾಗೂ ಸಾಂಸ್ಕೃತಿಕ ಪರಂಪರೆಗಳನ್ನು ಒಂದೇ ವೇದಿಕೆಯಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಇದು ವಿಶಿಷ್ಟ ಪ್ರಯತ್ನವಾಗಿದೆ. ಸಂಗೀತದ ಮೂಲಕ ದೇಶದ ಏಕತೆ ಹಾಗೂ ಭಾಷಾ ವೈವಿಧ್ಯತೆಯನ್ನು ಅನಾವರಣಗೊಳಿಸುವ ಯಶವಂತ್ ಎಂ.ಜಿ. ಅವರ ಪ್ರಯತ್ನ ಯಶಸ್ವಿಯಾಗಲಿ ಎಂದು ಅವರು ಹಾರೈಸಿದರು.
ಅಕ್ಟೋಬರ್ 28 ಮತ್ತು 29ರಂದು ಬೆಂಗಳೂರಿನ ಜೆ.ಸಿ. ರಸ್ತೆಯಲ್ಲಿರುವ ರವೀಂದ್ರ ಕಲಾಕ್ಷೇತ್ರದಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ವಿದ್ವಾನ್ ಯಶವಂತ್ ಎಂ.ಜಿ. ಅವರು ಸತತ 28 ಗಂಟೆಗಳ ಕಾಲ ಸಂಗೀತ ಕಾರ್ಯಕ್ರಮ ನಡೆಸಲಿದ್ದು, ಭಾರತದ 28 ರಾಜ್ಯಗಳು ಹಾಗೂ 28 ಭಾಷೆಗಳನ್ನು ಆಧರಿಸಿದ ಹಾಡುಗಳನ್ನು ಪ್ರಸ್ತುತಪಡಿಸಲಿದ್ದಾರೆ.
ಸಂಗೀತದ ಮೂಲಕ ಭಾರತದ ಏಕತೆ, ಸಮಗ್ರತೆ ಹಾಗೂ ಶ್ರೀಮಂತ ಭಾಷಾ ವೈವಿಧ್ಯತೆಯನ್ನು ಸಾರುವ ಈ ಐತಿಹಾಸಿಕ ಪ್ರಯತ್ನ ದೇಶದ ಸಾಂಸ್ಕೃತಿಕ ಕ್ಷೇತ್ರದಲ್ಲಿ ವಿಶಿಷ್ಟ ಕಾರ್ಯಕ್ರಮವಾಗಿ ಮೂಡಿಬರುವ ನಿರೀಕ್ಷೆಯಿದೆ.
ಈ ಸಂದರ್ಭದಲ್ಲಿ ಮಾಜಿ ಮೂಡುಬಿದಿರೆ ಪುರಸಭಾ ಸದಸ್ಯ ಪುರಂದರ ದೇವಾಡಿಗ, ಮೂಡುಬಿದಿರೆ ಯೋಜನಾ ಪ್ರಾಧಿಕಾರದ ಸದಸ್ಯ ಹರ್ಷವರ್ಧನ್ ಪಡಿವಾಳ್, ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ್ ಸುನಿಲ್, ಮೂಡುಬಿದಿರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್, ಮಾಜಿ ಪುರಸಭಾ ಸದಸ್ಯ ಸುರೇಶ್ ಪ್ರಭು, ನವೀನ್ ಕೋಟ್ಯಾನ್, ಮಲ್ಲಿಕಾ ಸುಕೇಶ್, ರಾಜೇಶ್ ಶೆಟ್ಟಿ ಹಾಗೂ ಸಂತೋಷ್ ಶೆಟ್ಟಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಉಡುಪಿ: ಖರ್ಗೆ ಭಾಷಣ ಸ್ಥಳ ಸ್ವಚ್ಛಗೊಳಿಸಿದ ಬಿಜೆಪಿ ವಿರುದ್ಧ ಸೆ. 12ರಂದು ಕಾಂಗ್ರೆಸ್ ಸತ್ಯಾಗ್ರಹ ಅಜ್ಜರಕಾಡಿನ ಗಾಂಧಿ ಪ್ರತಿಮೆ ಎದುರು ಮೌನ…
ಉಡುಪಿ :ವ್ಯಕ್ತಿ ನಾಪತ್ತೆ ಉಡುಪಿ : ಕೊಡಂಕೂರು ಮೂಡುತೋಟದ ನಿವಾಸಿ ಶರತ್ (35) ಎಂಬ ವ್ಯಕ್ತಿಯು ಸೆ. 7 ರಂದು…
ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್ : ಎರಡೇ ಚರಣ ಹಾಡಲು ರಾಜ್ಯ ಸರ್ಕಾರ ಆದೇಶ ಬೆಂಗಳೂರು: ವಂದೇ ಮಾತರಂ…
ಯುದ್ಧ ಆರಂಭವಾಗಿದೆ, ರಣರಂಗದಲ್ಲಿ ಗೆಲುವು ನಮ್ಮದೇ .. ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮುಂದಿನ ಒಂದೂವರೆ ವರ್ಷಗಳ ಕಾಲ ಮುಂದುವರಿಯಲಿದೆ…
ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸರಿಯಾದ ಹಾದಿಯಲ್ಲಿ ಸಾಗುತ್ತಿದೆ : ಸಿದ್ದರಾಮಯ್ಯ ಬೆಂಗಳೂರು:ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಅವರ…
ಕರ್ನಾಟಕದ ಗ್ಯಾರಂಟಿ ಮಾಡೆಲ್ ದೇಶದ ಎಲ್ಲೆಲ್ಲೂ ಇದೆ : ಸಿಎಂ ಡಿಕೆ ಶಿ ಬೆಂಗಳೂರು: ಕರ್ನಾಟಕದ ಗ್ಯಾರಂಟಿ ಯೋಜನೆಗಳನ್ನು ಪ್ರಧಾನ…