ಉಡುಪಿ : ಖಾಸಗಿ ಹೊಟೇಲ್ ನಲ್ಲಿ ಮ್ಯಾನೆಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ 28 ಹರೆಯದ ಯುವಕನೋರ್ವ ಹೃದಯಾಘಾತದಿಂದ ನಿಧನರಾದ ಘಟನೆ ಸೋಮವಾರ ರಾತ್ರಿ ನಡೆದಿದೆ. ಮೃತರನ್ನು ಆತ್ರಾಡಿ ಪರೀಕ ನಿವಾಸಿ ಮಹೇಶ ಶೆಟ್ಟಿ(28) ಎಂದು ಗುರುತಿಸಲಾಗಿದೆ. ಇವರು ಮಂಗಳೂರಿನ ಹೆಸರಾಂತ ಹೋಟೇಲ್ ವೊಂದರಲ್ಲಿ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಅವರಿಗೆ ಸೋಮವಾರ ರಾತ್ರಿ ಹಠಾತ್ ಆಗಿ ಎದೆ ನೋವು ಕಾಣಿಸಿಕೊಂಡಿತ್ತು. ತಕ್ಷಣವೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.
ಮಹೇಶ್ ಅವರು ಇತ್ತೀಚೆಗೆ ಹೊಟೇಲ್ ಮ್ಯಾನೇಜೆಂಟ್ ಕೋರ್ಸ್ ಮುಗಿಸಿದ್ದರು. ಬಳಿಕ ಉಡುಪಿ, ಮಂಗಳೂರಿನಲ್ಲಿ ಹೊಟೇಲ್ ಮ್ಯಾನೇಜರ್ ಆಗಿ ಕರ್ತವ್ಯ ನಿರ್ವಹಿಸಿದ್ದರು. ಇವರು ಈ ಹಿಂದೆ ಆತ್ರಾಡಿಯಲ್ಲಿ ಡ್ಯಾನ್ಸ್ ಕ್ರಿವ್ ನೃತ್ಯ ತರಬೇತಿ ಸಂಸ್ಥೆಯನ್ನು ಮುನ್ನಡೆಸುತ್ತಿದ್ದರು. ಮ್ಯಾನೇಜರ್ ಕೆಲಸಕ್ಕೆ ಸೇರಿದ್ದರಿಂದ ಡ್ಯಾನ್ಸ್ ಕ್ಲಾಸ್ ಅನ್ನು ಮುನ್ನಡೆಸಲು ಆಗಿರಲಿಲ್ಲ.
ಆದರೆ, ನಿನ್ನೆಯಷ್ಟೇ ಡ್ಯಾನ್ಸ್ ಕ್ಲಾಸ್ ಅನ್ನು ಮತ್ತೆ ಮುನ್ನಡೆಸುತ್ತೇನೆಂದು ವಾಟ್ಸ್ಅಪ್ ಸ್ಟೇಟ್ಸ್ ಹಾಕಿದ್ದರು ಎನ್ನಲಾಗಿದೆ. ಮೃತರು ತಂದೆ, ತಾಯಿ, ಸಹೋದರ, ಸಹೋದರಿಯರನ್ನು ಅಗಲಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…