ಉಡುಪಿ : ಬಹುನಿರೀಕ್ಷಿತ ಉಡುಪಿ ಮಂಗಳೂರು ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪಡಿತರ ಮೂಲಕ ಕುಚಲಕ್ಕಿ ವಿತರಣೆ ಕಾರ್ಯಕ್ರಮವನ್ನು ಆರಂಭಿಸುವುದಾಗಿ ಮುಖ್ಯಮಂತ್ರಿ ಬೊಮ್ಮಾಯಿ ಕಾಪುವಿನಲ್ಲಿ ಜನ ಸಂಕಲ್ಪ ಸಭೆಯಲ್ಲಿ ಘೋಷಿಸಿದ್ದಾರೆ.
ಈಗ ನೀಡುತ್ತಿರುವ ಪಡಿತರ ಅಕ್ಕಿ ಸಾರ್ವಜನಿಕರಿಗೆ ಉಪಯೋಗಕ್ಕೆ ಬರುತ್ತಿಲ್ಲವೆಂಬ ಹಿನ್ನೆಲೆಯಲ್ಲಿ ಪಡಿತರ ವ್ಯವಸ್ಥೆಗೆ ಕುಚಲಕ್ಕಿ ನೀಡುವ ವ್ಯವಸ್ಥೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳು ಹೇಳುತ್ತಲೇ ವೇದಿಕೆಯಲ್ಲಿ ಎದ್ದು ನಿಂತು ಮುಖ್ಯಮಂತ್ರಿಗಳಿಗೆ ಕೈಮುಗಿದ ಸಮಾಜ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮುಖ್ಯಮಂತ್ರಿಗಳಿಗೆ ಧನ್ಯವಾದ ಹೇಳಿದರು.
ಇನ್ನು ಸುಮಾರು ಪ್ರತಿ ಪಡಿತರ ಚೀಟಿದಾರರಿಗೆ ಕುಚ್ಚಲಕ್ಕಿ ವಿತರಣೆ ಮಾಡುವಾಗ ಸುಮಾರು 152 ಕೋಟಿ ರೂಪಾಯಿ ಸರ್ಕಾರಕ್ಕೆ ವಿಶೇಷ ಖರ್ಚು ಬರಲಿದ್ದು ಸಚಿವ ಕೋಟರವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಅನೇಕ ಸಭೆಗಳು ನಡೆದಿದ್ದವು. ಇದೀಗ ಮುಖ್ಯಮಂತ್ರಿಗಳ ಘೋಷಣೆಯೊಂದಿಗೆ ಪಡಿತರದಲ್ಲಿ ಕುಚಲಕ್ಕಿ ವಿತರಣೆ ಜಾರಿಗೆ ಬಂದಂತಾಗಿದೆ.
ತಪ್ಪಿದ ಭಾರಿ ದುರಂತ: 4 ಗಂಟೆಗಳ ಕಾಲ ಆಗಸದಲ್ಲೇ ಸುತ್ತಾಟ ; ಹುಬ್ಬಳ್ಳಿ ತಲುಪಬೇಕಿದ್ದ ವಿಮಾನ ಬೆಂಗಳೂರಲ್ಲಿ ಲ್ಯಾಂಡ್ ಹುಬ್ಬಳ್ಳಿ:…
ಮುಂದಿನ ತಿಂಗಳು ಒಳ್ಳೆಯ ಮುಹೂರ್ತ ನೋಡಿ ಹೊಸ ರಾಜಕೀಯ ಪ್ರಾರಂಭ ಮಾಡ್ತೇನೆ: ಯತ್ನಾಳ್ ವಿಜಯಪುರ: ಮುಂದಿನ ತಿಂಗಳು ಒಳ್ಳೆಯ ಮುಹೂರ್ತ…
ನಾವು ಮಹಿಳಾ ಮೀಸಲಾತಿ ಪರ ಇದ್ದೇವೆ; ಆದರೆ ಮೋದಿ ಅವರ ಹೇಳಿಕೆಯನ್ನ ವಿರೋಧಿಸುತ್ತೇವೆ : ಖರ್ಗೆ ಬೆಂಗಳೂರು: ನಾವು ಮಹಿಳಾ…
ಉಡುಪಿ: ಪೆರ್ಡೂರು ಅನಂತಪದ್ಮನಾಭ ದೇವಸ್ಥಾನದ ಜೀರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಕೆ. ಶಾಂತಾರಾಮ ಸೂಡ ಆಯ್ಕೆ ಉಡುಪಿ: ಮಹತೋಭಾರ ಪೆರ್ಡೂರು ಅನಂತಪದ್ಮನಾಭ…
ಎರ್ಮಾಳು: ಗೂಡ್ಸ್ ವಾಹನಕ್ಕೆ ರಾಂಗ್ ಸೈಡ್‌ನಿಂದ ಬಂದ ಸ್ಕೂಟಿ ಢಿಕ್ಕಿ ; ಸವಾರ ಸಾವು ಪಡುಬಿದ್ರಿ : ರಾಂಗ್ ಸೈಡ್‌ನಿಂದ…
ಪುತ್ತೂರು: ಡಿವೈಡರ್ ಗೆ ಬೈಕ್ ಡಿಕ್ಕಿ ; ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ನಗರದ ಪಡೀಲ್ ಬಳಿ ಎರಡು ಬೈಕ್‌ಗಳ…