ಉಡುಪಿ: ಕಳೆದ 3 ತಿಂಗಳಿನಿಂದ ಸರ್ಕಾರ 108 ಸೇವೆಯ ಸಿಬ್ಬಂದಿಗಳಿಗೆ ವೇತನ ನೀಡದೇ ಚೆಲ್ಲಾಟವಾಡುತ್ತಿದ್ದು, ಇದೀಗ ಇಂದು ರಾತ್ರಿಯಿಂದ ಸಿಬ್ಬಂದಿಗಳು ಬಂದ್ ಕರೆ ನೀಡಿ ಪ್ರತಿಭಟನೆ ನಡೆಸಲು ಮುಂದಾಗಿದ್ದು ಸರ್ಕಾರ ಕೂಡಲೇ ಬಾಕಿ ಇರುವ ವೇತನವನ್ನು ತಕ್ಷಣ ನೀಡುವಂತೆ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಗ್ರಹ ಮಾಡಿದ್ದಾರೆ.
ತುರ್ತು ಸಂದರ್ಭದಲ್ಲಿ ರೋಗಿಗಳ ಪಾಲಿನ ಜೀವರಕ್ಷಕರಾಗಿ ಹಗಲಿರುಳು ಸೇವೆ ಸಲ್ಲಿಸುವ 108 ಸೇವೆಯ ಸಿಬ್ಬಂದಿಗಳಿಗೆ ರಾಜ್ಯ ಸರ್ಕಾರ ಸಂಬಳ ಭಾಗ್ಯವನ್ನೇ ನೀಡಿಲ್ಲ.
ಸದಾ ಗ್ಯಾರಂಟಿಗಳ ನೆಪದಲ್ಲಿ ರಾಜ್ಯ ಸರ್ಕಾರ ದೈನಂದಿನ ಅಗತ್ಯ ಸೇವೆಗಳ ಬಗ್ಗೆ ನಿರ್ಲಕ್ಷ್ಯ ತೋರಿದ ಪರಿಣಾಮವಾಗಿ ಇಂದು 108 ಸೇವಾ ಸಿಬ್ಬಂದಿಗಳ ಮುಷ್ಕರದಿಂದ ರಾಜ್ಯದ ರೋಗಿಗಳು ತುರ್ತು ಸೇವೆಯಿಂದ ವಂಚಿತರಾಗುವ ಸನ್ನಿವೇಶ ನಿರ್ಮಾಣವಾಗಿದೆ.
ಸರ್ಕಾರ ತಕ್ಷಣ ಸಿಬ್ಬಂದಿಗಳ ವೇತನವನ್ನು ತಕ್ಷಣ ಪಾವತಿಸಿ ನ್ಯಾಯ ಬದ್ಧವಾದ ಬೇಡಿಕೆಯನ್ನು ಪರಿಗಣಿಸಿ ಮುಷ್ಕರ ಹಿಂಪಡೆಯುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದ್ದಲ್ಲಿ ಈ ಬಂದ್ ನಿಂದಾಗಿ ಸಂಭವಿಸುವ ಎಲ್ಲಾ ಅನಾನುಕೂಲತೆ ಹಾಗೂ ಸಮಸ್ಯೆಗಳಿಗೆ ಸರಕಾರವೇ ಹೊಣೆಯಾಗಲಿದ್ದು ಸರ್ಕಾರ ಕೂಡಲೇ ರಾಜ್ಯದ ಜನರ ಆರೋಗ್ಯ ಸೇವೆಗೆ ಧಕ್ಕೆಯಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…