ಉಡುಪಿ 350 ಪಾಸಿಟಿವ್ ಪ್ರಕರಣಗಳು ಸಾಧ್ಯತೆ: ಸಚಿವ ಡಾ.ಸುಧಾಕರ್ vishwanews24

ಬೆಂಗಳೂರು, ಜೂ.5: ಕೊರೋನ ವೈರಸ್ ಸೋಂಕು ರಾಜ್ಯದಲ್ಲಿ ವ್ಯಾಪಕವಾಗಿ ಹರಡುತ್ತಿದ್ದು, ಶುಕ್ರವಾರ(ಜೂ.5)ವೂ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಭಾರೀ ಹೆಚ್ಚಳವಾಗುವ ಸಾಧ್ಯತೆಯಿದೆ ಎಂದು ರಾಜ್ಯ ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯೊಂದರಲ್ಲೇ ಶುಕ್ರವಾರ ಒಂದೇ ದಿನ 350ರಷ್ಟು ಕೊರೋನ ಪಾಸಿಟಿವ್ ಪ್ರಕರಣಗಳು ಪತ್ತೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಜಿಲ್ಲಾದ್ಯಂತ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸೂಚಿಸಿರುವುದಾಗಿ ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ.

ಉಡುಪಿ ಜಿಲ್ಲೆಯಲ್ಲಿ ಗುರುವಾರ ಸಂಜೆಯ ವರದಿ ಪ್ರಕಾರ 1732 ಸ್ಯಾಂಪಲ್‌ಗಳ ವರದಿ ಬರಲು ಬಾಕಿ ಇದೆ ಎಂದು ಉಡುಪಿ ಡಿಎಚ್‌ಒ ಮಾಹಿತಿ ನೀಡಿದ್ದರು. ಮಹಾರಾಷ್ಟ್ರದಿಂದ ಆಗಮಿಸಿದವರ ಪೈಕಿ 92 ಮಂದಿಯಲ್ಲಿ ಗುರುವಾರ ಕೊರೋನ ಪಾಸಿಟಿವ್ ದೃಢಪಟ್ಟಿತ್ತು. ಆ ಮೂಲಕ ಜಿಲ್ಲೆಯಲ್ಲಿ ಪಾಸಿಟವ್ ಪ್ರಕರಣಗಳ ಸಂಖ್ಯೆ 563ಕ್ಕೇರಿದ್ದು, ರಾಜ್ಯದಲ್ಲೇ ಅತ್ಯಧಿಕ ಕೊರೋನ ಸೋಂಕಿತರ ಜಿಲ್ಲೆಯಾಗಿ ಉಡುಪಿ ಗುರುತಿಸಿಕೊಂಡಿದೆ.

ಅದೇರೀತಿ 510 ಪ್ರಕರಣಗಳೊಂದಿಗೆ ರಾಜ್ಯದಲ್ಲಿ 2ನೇ ಸ್ಥಾನದಲ್ಲಿರುವ ಕಲಬುರಗಿಯಲ್ಲೂ ಶುಕ್ರವಾರ ಸೋಂಕಿತರ ಸಂಖ್ಯೆಯಲ್ಲಿ ತೀವ್ರ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದ್ದಾರೆ

Vishwa News 24

Recent Posts

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ – vishwanews24

ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…

1 day ago

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ – vishwanews24

ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…

1 day ago

ಮಂಗಳೂರು: ಗಾಯಗೊಂಡ ತಾಯಿ, ಮಗುವನ್ನು ಆಸ್ಪತ್ರೆಗೆ ಸಾಗಿಸಿದ ಬಸ್ ಸಿಬ್ಬಂದಿ; ಮಾನವೀಯತೆಗೆ ಶ್ಲಾಘನೆ – vishwanews24

ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…

1 day ago

ಮಂಗಳೂರು – ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ – vishwanews24

ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…

1 day ago

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ – vishwanews24

ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…

1 day ago

ಯುವಕ ನಾಪತ್ತೆ : ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು – vishwanews24

ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…

1 day ago