Featured

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು – Vishwanews24

ಉಡುಪಿ: 40 ಅಡಿ ಆಳದ ಬಾವಿಗಿಳಿದು ಬೆಕ್ಕನ್ನು ರಕ್ಷಿಸಿದ ಪೇಜಾವರ ಶ್ರೀಗಳು

ಉಡುಪಿ: ಸುಮಾರು 40 ಅಡಿ ಆಳದ ಬಾವಿಗಿಳಿದು ಪೇಜಾವರ ಮಠದ 60ರ ಹರೆಯದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಬೆಕ್ಕೊಂದನ್ನು ರಕ್ಷಿಸಿದ ಘಟನೆ ಭಾನುವಾರ ನಡೆದಿದೆ.

ಸ್ವಾಮೀಜಿಯವರು ಚೆನ್ನೈನಿಂದ ಸುಬ್ರಮಣ್ಯ ಮುಚ್ಲುಕೋಡು ದೇವಸ್ಥಾನಕ್ಕೆ ಮಧ್ಯಾಹ್ನ ಆಗಮಿಸಿದ್ದರು. ಏತನ್ಮಧ್ಯೆ ದೇವಸ್ಥಾನದ ಬಾವಿಯೊಳಗೆ ಬೆಕ್ಕೊಂದು ಬಿದ್ದಿರುವುದಾಗಿ ದೇವಸ್ಥಾನದ ಸಿಬಂದಿ ಹೇಳಿದರು.

ಸ್ವಾಮೀಜಿ ತಕ್ಷಣ ಬಾವಿಯತ್ತ ತೆರಳಿ ಬಕೆಟ್‌ ಇಳಿಸಿ ಬೆಕ್ಕನ್ನುಬಕೆಟ್‌ ಒಳಗೆ ಬರುವಂತೆ ಪ್ರಯತ್ನಿಸಿದರು. ಅದು ಫ‌ಲಕಾರಿಯಾಗದಿದ್ದಾಗ, ಉಟ್ಟ ಖಾವಿಶಾಟಿಯನ್ನು ಸೊಂಟಕ್ಕೆ ಬಿಗಿಯಾಗಿ ಸುತ್ತಿ ಸುಮಾರು ಐದಡಿ ವ್ಯಾಸದ ಬಾವಿಗೆ ಹಗ್ಗದ ಸಹಾಯದಿಂದ ಇಳಿದರು. ಬೆಕ್ಕು ಹಿಡಿದು ಬಕೆಟ್ ನಲ್ಲಿ ಇರಿಸಿದರೂ ಹೆದರಿ ಹೊರಕ್ಕೆ ಹಾರಿ ಇನ್ನೊಂದು ಬಾವಿಯ ಇನ್ನೊಂದು ಅಂತಸ್ತಿನಲ್ಲಿ ಕುಳಿತುಕೊಂಡಿತು. ಬಳಿಕ ಬೆಕ್ಕನ್ನು ಕೈಯಲ್ಲಿ ಹಿಡಿದು ಒಂದೊಂದೆ ಅಂತಸ್ತನ್ನು ಏರಿ ಮೇಲೆ   ಬೆಕ್ಕನ್ನು ರಕ್ಷಿಸಿದರು.

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

2 days ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

2 days ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

2 days ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

2 days ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

2 days ago