Featured

ಉಡುಪಿ :40 ಪರ್ಸೆಂಟ್ ಕಮಿಷನ್ ಗೂ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇಲ್ಲ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ – Vishwanews24

ಉಡುಪಿ :40 ಪರ್ಸೆಂಟ್ ಕಮಿಷನ್ ಗೂ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇರುವುದಿಲ್ಲ : ಮುನಿಯಾಲು ಉದಯ್ ಕುಮಾರ್ ಶೆಟ್ಟಿ

ಉಡುಪಿ : ರಾಜ್ಯದಲ್ಲಿ ಇತ್ತೀಚಿಗೆ ಸುದ್ದಿ ಆಗುತ್ತಿರುವ 40 ಪರ್ಸೆಂಟ್ ಕಮಿಷನ್ ಗೂ ಉಡುಪಿ ಜಿಲ್ಲೆಯ ಗುತ್ತಿಗೆದಾರರಿಗೂ ಯಾವುದೇ ಸಂಬಂಧ ಇರುವುದಿಲ್ಲ ಎಂದು ಗುತ್ತಿಗೆದಾರರಾದ ಮುನಿಯಾಲು ಉದಯ್ ಕುಮಾರ್ ಶೆಟ್ಟಿ ಅವರು ತಿಳಿಸಿದ್ದಾರೆ.

ಈ ಬಗ್ಗೆ ಇಂದು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಇತ್ತೀಚಿಗೆ ರಾಜ್ಯದಲ್ಲಿ ಸರಕಾರಿ ಕಾಮಗಾರಿಗಳಿಗೆ ಗುತ್ತಿಗೆದಾರರು ಸರಕಾರಕ್ಕೆ, ಜನಪ್ರತಿನಿಧಿಗಳಿಗೆ ಮತ್ತು ಅಧಿಕಾರಿಗಳಿಗೆ 40 ಶೇ. ಕಮಿಷನ್ ಹಣ ನೀಡುತ್ತಿದ್ದಾರೆ ಎಂದು ಸಾರ್ವಜನಿಕ ವಲಯದಲ್ಲಿ ಹಾಗೂ ವಿವಿಧ ಮಾಧ್ಯಮಗಳಲ್ಲಿ ಸುದ್ದಿಯಾಗುತ್ತಿದೆ. ಆದರೆ ಕಾಮಗಾರಿಗಾಗಿ ಈ ಹಿಂದಿನ ಸರಕಾರದ ಅವಧಿಯಲ್ಲಿ ಅಥವಾ ಈಗಿನ ಹಾಲಿ ಸರಕಾರದ ಅವಧಿಯಲ್ಲಿ ಕಮಿಷನ್ ನೀಡಿರುವ ಉದಾಹರಣೆ ಇರುವುದಿಲ್ಲ. ರಾಜ್ಯದಲ್ಲಿ ಇತ್ತೀಚಿಗೆ ಸುದ್ದಿ ಆಗುತ್ತಿರುವ 40% ಕಮಿಷನ್ ಗೂ ಉಡುಪಿ ಜಿಲ್ಲೆಯ ಗುತ್ತಿಗೆದಾರರಿಗೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿ : ಆಂತರಿಕ ಶತ್ರುಗಳ ಕಿರಿಕಿರಿ.. ನೋಡಿ ಇಂದಿನ ದಿನ ಭವಿಷ್ಯ.. ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564

ಉಡುಪಿ ಜಿಲ್ಲೆಯಲ್ಲಿ ಹಲವು ವರ್ಷಗಳಿಂದ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿರುವ ನಮಗೆ ಈ ರೀತಿಯಾದಂತಹ ವಾತಾವರಣ ಕಂಡು ಬಂದಿರುವುದಿಲ್ಲ. ನಾವು ಪಿಡಬ್ಲ್ಯೂಡಿ ಜಿಲ್ಲಾ ಪಂಚಾಯತ್, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ, ಬಂದರು ಇತ್ಯಾದಿ ಸರಕಾರಿ ಕಾಮಗಾರಿಗಳನ್ನು ಮಾಡುತ್ತಿದ್ದೇವೆ. ಈ ಕಾಮಗಾರಿಗಳನ್ನು ಟೆಂಡರ್ ಮುಖಾಂತರ ಪಡೆದು ಪಾರದರ್ಶಕವಾಗಿ ಗುಣಮಟ್ಟದ ಕಾಮಗಾರಿಗಳನ್ನು ನಡೆಸಿರುತ್ತೇವೆ. ಆದರೆ ನಾವು ಜಿಲ್ಲೆಯ ಯಾವುದೇ ಜನಪ್ರತಿನಿಧಿಗಳಿಗೆ ಕಮಿಷನ್ ಹಣವನ್ನು ನೀಡಿರುವುದಿಲ್ಲ ಎಂದು ಹೇಳಿದ್ದಾರೆ.

ಬೇರೆ ಕಡೆ ಆಗುತ್ತಿರುವ ಸಮಸ್ಯೆ ಬಗ್ಗೆ ನಾವು ಮಾತನಾಡುವುದಿಲ್ಲ ಆದರೆ ನಮ್ಮ ಜಿಲ್ಲೆಯಲ್ಲಿ 40 ಶೇ. ಕಮಿಷನ್ ನ ಸಮಸ್ಯೆ ಇಲ್ಲ. ಜನಪ್ರತಿನಿಧಿಗಳು ಹಾಗೂ ಗುತ್ತಿಗೆದಾರರು ಒಂದೇ ನಾಣ್ಯದ ಎರಡು ಮುಖಗಳಂತೆ ಒಟ್ಟಿಗೆ ಕೆಲಸ ಮಾಡಿದರೆ ಜಿಲ್ಲೆ ಅಭಿವೃದ್ಧಿಯಾಗುತ್ತದೆ. ಆದರೆ ಉಡುಪಿ ಜಿಲ್ಲೆಯಲ್ಲಿ ಉತ್ತಮ ಗುಣಮಟ್ಟದ ಕಾಮಗಾರಿ ಹೊರತಾಗಿಯೂ ಕೆಲವು ಸಣ್ಣ ಗುತ್ತಿಗೆದಾರರಿಗೆ ಹಣ ಪಾವತಿ ಆಗದೆ ಸಮಸ್ಯೆಗಳಾಗುತ್ತಿದೆ. ಆದ್ದರಿಂದ ಗುತ್ತಿಗೆದಾರರಿಗೆ ಬಾಕಿ ಇರುವ ಹಣವನ್ನು ಶೀಘ್ರವಾಗಿ ಪಾವತಿ ಮಾಡಬೇಕು ಎಂದು ಆಗ್ರಹಿಸಿದರು.

ಉಡುಪಿ: ಕೆಪಿಸಿಸಿ ಮಾಧ್ಯಮ- ಸಂವಹನ ವಿಭಾಗದ ರಾಜ್ಯ ಸಮಿತಿಯ ಪ್ರ. ಕಾರ್ಯದರ್ಶಿಯಾಗಿ ಅಮೃತ್ ಶೆಣೈ ನೇಮಕ – Vishwanews24

ಜಿಲ್ಲೆ ಅಭಿವೃದ್ಧಿ ಆಗಬೇಕು ಅದಕ್ಕೆ ಬೇಕಾದ ವ್ಯವಸ್ಥೆ ಆಗಬೇಕು. ರಸ್ತೆ, ನೀರಾವರಿ, ಸೇತುವೆಗಳ ಅಭಿವೃದ್ಧಿ ಆಗಬೇಕಾದರೆ ಅದಕ್ಕೆ ಅನುದಾನ ಬೇಕು ಹಾಗೂ ಬಂದ ಅನುದಾನಗಳು ಸಮರ್ಪಕವಾಗಿ ಬಳಕೆ ಆಗಬೇಕು. ಅದು ಬಿಟ್ಟು ತಿಕ್ಕಾಟ ನಡೆಯುತ್ತಿದ್ದರೆ ಅಭಿವೃದ್ಧಿ ಆಗವುದಿಲ್ಲ. ಜಿಲ್ಲೆಯಲ್ಲಿ ಸದ್ಯ ಮಳೆ ನಿಂತಿದ್ದು ರಸ್ತೆಗಳಲ್ಲೇ ಹದಗೆಟ್ಟಿದೆ. ಇದನ್ನು ಸರಿಪಡಿಸಬೇಕು. ಆದರೆ ಗುತ್ತಿಗೆದಾರರ ಆರೋಪಕ್ಕೆ ಸರಕಾರ ಸ್ಪಂದಿಸುತ್ತಿಲ್ಲ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಜಿಲ್ಲೆಯಲ್ಲಿ ಇರುವ ಸಮಸ್ಯೆಗಳನ್ನು ಸರಿಪಡಿಸಿ ಸೂಕ್ತ ವ್ಯವಸ್ಥೆ ಕಲ್ಪಿಸುವುದು ಜನಪ್ರನಿಧಿಗಳ ಜವಾಬ್ದಾರಿ ಎಂದರು. ಹಾಗೂ ಪಿಡಬ್ಲ್ಯೂಡಿ ಇಲಾಖೆಯಲ್ಲಿ ಜಿಲೆಯಲ್ಲಿ ಗುತ್ತಿಗೆದಾರರಿಗೆ 100 ಕೋಟಿ ರೂ ಹಣ ಬರಲು ಬಾಕಿ ಇದೆ. ಆದರೆ ಇದು 40 ಶೇ,. ಕಮಿಷನ್ ವಿವಾದದಿಂದ ಬಾಕಿ ಇದೆ ಎಂದು ಹೇಳಲು ಆಗುವಿದಿಲ್ಲ. ಜಿಲ್ಲೆಯ ಅಭಿವೃದ್ಧಿಯ ದೃಷ್ಟಿಯಿಂದ ಸರಕಾರದ ನಿಯಮಾವಳಿಯ ಪ್ರಕಾರವೇ ಕಾಮಗಾರಿ ನಡೆಯುತ್ತಿದ್ದು, ಮುಂದಿನ ದಿನಗಳಲ್ಲಿಯೂ ಗುಣಮಟ್ಟದ ಕಾಮಗಾರಿಯನ್ನು ಮುಂದುವರೆಸುತ್ತೇವೆ ಎಂದು ಭರವಸೆ ನೀಡಿದರು.

ಪತ್ರಿಕಾಗೋಷ್ಠಿಯಲ್ಲಿ ಗುತ್ತಿಗೆದಾರರಾದ ವಾದಿರಾಜ ಶೆಟ್ಟಿ, ಜಯರಾಮ್ ಸಾಲಿಯಾನ್ ಬೋಳ, ಜೀವನ್ ಶೆಟ್ಟಿ ಬ್ರಹ್ಮಾವರ ಇದ್ದರು.

ಉಡುಪಿ: ಕರಾವಳಿ ಜಂಕ್ಷನ್ ನಿಂದ ಮಲ್ಪೆ ವರೆಗಿನ ರಸ್ತೆಯ ಹೊಂಡ ಮುಚ್ಚಲು ಕ್ರಮ ; ತಕ್ಷಣದಲ್ಲಿ ಕಾಮಗಾರಿ ಆರಂಭ : ಶಾಸಕ ರಘುಪತಿ ಭಟ್ – Vishwanews24

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago