Featured

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ – vishwanews24

ಉಡುಪಿ : 6 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ

ಉಡುಪಿ: ನ್ಯಾಯಾಲಯಕ್ಕೆ ಹಾಜರಾಗದೆ ಕಳೆದ ಆರು ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಮಲ್ಪೆ ಪೊಲೀಸರು ಬಂಧಿಸಿದ್ದಾರೆ. ಸೆಪ್ಟೆಂಬರ್ 5ರಂದು ಹೊನ್ನಾವರ ತಾಲೂಕಿನ ಹಳದಿಪುರದಲ್ಲಿ ಆರೋಪಿಯನ್ನು ಬಂಧಿಸಲಾಗಿದೆ.

ಬಂಧಿತನನ್ನು ಶಿರಸಿ ತಾಲೂಕಿನ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ಎಂದು ಗುರುತಿಸಲಾಗಿದೆ. ಮಲ್ಪೆ ಪೊಲೀಸ್ ಠಾಣಾಧಿಕಾರಿ ಅನಿಲ್ ಕುಮಾರ್ ಡಿ. ಅವರ ಮಾರ್ಗದರ್ಶನದಲ್ಲಿ ವಾರಂಟ್ ಸಿಬ್ಬಂದಿಗಳಾದ ವಿಶ್ವನಾಥ್ ಎಚ್. ಹಾಗೂ ಮೊಹಮ್ಮದ್ ರಫಿ ಅವರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಆರೋಪಿಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಬಳಿಕ ಆರೋಪಿಯನ್ನು ಹಿರಿಯಡ್ಕ ಜೈಲಿಗೆ ಕಳುಹಿಸಲಾಗಿದೆ.

2021ರಲ್ಲಿ ಮಲ್ಪೆಯ ಉದ್ಯಮಿಯೊಬ್ಬರಿಗೆ ಜೀವ ಬೆದರಿಕೆ ಹಾಕಿದ ಆರೋಪದ ಹಿನ್ನೆಲೆಯಲ್ಲಿ ಶ್ರೀನಿವಾಸ್ ಶ್ರೀಧರ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಪ್ರಕರಣದ ವಿಚಾರಣೆ ವೇಳೆ ನ್ಯಾಯಾಲಯಕ್ಕೆ ಹಾಜರಾಗದೆ ಅವರು ತಲೆಮರೆಸಿಕೊಂಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಆರೋಪಿಯ ವಿರುದ್ಧ ಶಿರಸಿ ಹಾಗೂ ಹೊನ್ನಾವರ ಪೊಲೀಸ್ ಠಾಣೆಗಳಲ್ಲಿ ಹಲ್ಲೆ, ಕೊಲೆಯತ್ನ, ಗಾಂಜಾ ಹಾಗೂ ಮನೆ ಕಳ್ಳತನ ಸೇರಿದಂತೆ ವಿವಿಧ ಪ್ರಕರಣಗಳು ದಾಖಲಾಗಿವೆ. ಈ ಪ್ರಕರಣಗಳು ಸದ್ಯ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿವೆ.

Vishwa News 24

Recent Posts

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ – vishwanews24

ಮಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರ ಬಿಜೆಪಿಯನ್ನು ನೋಡಿ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕಿಲ್ಲ : ಯು. ಟಿ. ಖಾದರ್ ಮಂಗಳೂರು: ರಾಜ್ಯದ ಕಾಂಗ್ರೆಸ್…

13 minutes ago

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ – vishwanews24

ಮಲ್ಪೆ:  ರಸ್ತೆ ಬದಿಯಲ್ಲಿ ಎಸೆದ ಸ್ಥಿತಿಯಲ್ಲಿ ನವಜಾತ ಶಿಶು ಪತ್ತೆ ಮಲ್ಪೆ: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಹೂಡೆ ಎಂಬಲ್ಲಿ ಇಂದು…

20 minutes ago

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ – vishwanews24

ಮಂತ್ರಾಲಯದ ಹೆಸರಿನಲ್ಲಿ ಆನ್‌ಲೈನ್ ವಂಚನೆ ಆರೋಪ : ಭಕ್ತರಿಗೆ ಎಚ್ಚರಿಕೆ ಸಂದೇಶ ರಾಯಚೂರು: ಮಂತ್ರಾಲಯ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ಹೆಸರಿನಲ್ಲಿ…

25 minutes ago

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ ; ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ – vishwanews24

ಬೆಳ್ತಂಗಡಿ: ಸೆ. 7ರಿಂದ ದಿಡುಪೆ ಜಲಪಾತ ವೀಕ್ಷಣೆಗೆ ಮುಕ್ತ: ಗಡಾಯಿಕಲ್ಲು ಚಾರಣಕ್ಕೆ ನಿಷೇಧ ಮುಂದುವರಿಕೆ ಬೆಳ್ತಂಗಡಿ: ಭಾರೀ ಮಳೆ ಹಿನ್ನೆಲೆಯಲ್ಲಿ…

32 minutes ago

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ – vishwanews24

ಉಡುಪಿ:  ವಿಟ್ಲಪಿಂಡಿ ಉತ್ಸವ ವೇಳೆ ಶ್ರೀಗಳ ಕೈಯಿಂದ ಕೆಳಗೆ ಬಿದ್ದ ಕೃಷ್ಣನ ಮಣ್ಣಿನ ಮೂರ್ತಿ ಉಡುಪಿ: ಶ್ರೀಕೃಷ್ಣ ಮಠದಲ್ಲಿ ನಡೆದ…

47 minutes ago

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  -vishwanews24

ಮಂಗಳೂರು ನಗರದಲ್ಲಿ ನಾಳೆ ಮೊಸರುಕುಡಿಕೆ: ರಸ್ತೆ ಸಂಚಾರದಲ್ಲಿ ಬದಲಾವಣೆ  ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಸೆ.5ರಂದು ಮಂಗಳೂರು ನಗರದ…

3 days ago