ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌ – vishwanews24

Featured, ಉಡುಪಿ

ಉಡುಪಿ: 80ನೇ ಸ್ವಾತಂತ್ರ್ಯೋತ್ಸವ; ಧ್ವಜಾರೋಹಣ ನೆರವೇರಿಸಿದ ಉಸ್ತುವಾರಿ ಸಚಿವ ರಿಝ್ವಾನ್ ಅರ್ಷದ್‌

ಉಡುಪಿ: ಉಡುಪಿ ಜಿಲ್ಲಾಡಳಿತದ ವತಿಯಿಂದ ಅಜ್ಜರಕಾಡು ಮಹಾತ್ಮಾಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ 80ನೇ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ನಿಯುಕ್ತಿ ಗೊಂಡಿರುವ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ರಿಝ್ವಾನ್ ಅರ್ಷದ್‌ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಜಿಲ್ಲಾಡಳಿತ ಜಿಲ್ಲೆಯ ಎಲ್ಲಾ ದೇವಾಲಯಗಳಲ್ಲಿ ಪ್ರತಿನಿತ್ಯ ಬಳಕೆಯಾಗುವ ಹೂವುಗಳನ್ನು ಎಲ್ಲೆಂದರಲ್ಲಿ ಎಸೆಯುವುದನ್ನು ತಪ್ಪಿಸಲು ವಿ-ಕೇರ್ ಸೊಸೈಟಿ ಸಹಯೋಗದಲ್ಲಿ ವೈಜ್ಞಾನಿಕವಾಗಿ ಸಂಗ್ರಹಿಸಿ ಪರಿಸರ ಸ್ನೇಹಿ ಅಗರಬತ್ತಿ, ಬಿದುರು ರಹಿತ ದೂಪದಕಡ್ಡಿ ಸೇರಿದಂತೆ ಮೌಲ್ಯವರ್ಧಿತ ಉತ್ಪನ್ನಗಳಾಗಿ ಪರಿವರ್ತಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದರು.

ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ( ರಿ) ಮೂಳೂರು ವತಿಯಿಂದ  80ನೇ ಸ್ವಾತಂತ್ರ್ಯ ದಿನಾಚರಣೆ  – vishwanews24

Leave a Reply