Featured

ಉಡುಪಿ: IAS, KAS ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರ ಉದ್ಘಾಟನೆ -Vishwanews24

IAS, KAS ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರ ಉದ್ಘಾಟನೆ -Vishwanews24

ಉಡುಪಿ: ಪರೀಕ್ಷೆಗೆ ತಯಾರಾಗಲು ಯೋಜನೆ ಬೇಕಾಗಿದ್ದು, ಆಸಕ್ತಿ ಇರುವ ವಿಷಯ ಆಯ್ಕೆ ಮಾಡಿಕೊಂಡು ವ್ಯಾಸಂಗ ಮಾಡಬೇಕು. ಇಂಟರ್‌ನೆಟ್‌ನಲ್ಲಿ ಮಾಹಿತಿ ಸಿಗುತ್ತದೆ ಎಂದು ನಂಬುವ ಬದಲು ವಿಷಯಕ್ಕೆ ಸಂಬಂಧಿಸಿದ ವಿಶ್ವಾಸಾರ್ಹ ಪುಸ್ತಕಗಳ ಪರಾಮರ್ಶೆಯನ್ನು ವಿಸ್ತೃತವಾಗಿ ಮಾಡಬೇಕು ಎಂದು ಕಾರ್ಮಿಕ ಇಲಾಖೆ ಆಯುಕ್ತ ಅಕ್ರಂಪಾಷ ಹೇಳಿದರು.

ಅವರು  ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರವು ಏರ್ಪಡಿಸಿದ್ದ ಪ್ರಸಕ್ತ ಸಾಲಿನ ಐಎಎಸ್ ಮತ್ತು ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗಳ ಆನ್‌ಲೈನ್ ಶಿಬಿರವನ್ನು ಆನ್‌ಲೈನ್ ಮೂಲಕ ಉದ್ಘಾಟಿಸಿ ಮಾತನಾಡಿದರು. ಇಂದಿನ ಕೋವಿಡ್ ಸಮಯದಲ್ಲೂ ಕರಾಮುವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದಲ್ಲಿ ಹಲವಾರು ಪರೀಕ್ಷೆಗಳ ಆನ್‌ಲೈನ್ ತರಬೇತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.

ಪರೀಕ್ಷಾ ಅಧ್ಯಯನ ಕ್ರಮದ ಬಗ್ಗೆ ಮಾತನಾಡಿದ ಡಾ. ಎ.ಎನ್. ಪ್ರಕಾಶ್‌ಗೌಡ, ವೈದ್ಯಕೀಯ ಇಲ್ಲವೇ ಎಂಜಿನಿಯರಿಂಗ್ ಮುಗಿಸಿದವರು ಐಎಎಸ್ ಪಾಸಾಗಬಹುದು. ಬೇರೆ ವಿಷಯಗಳನ್ನು ವ್ಯಾಸಂಗ ಮಾಡಿದವರೆಲ್ಲ ದಡ್ಡರು ಎಂದು ಭಾವಿಸುವ ಅಗತ್ಯವಿಲ್ಲ. ನಮ್ಮಲ್ಲಿರುವ ಆಸಕ್ತಿ ಆಧರಿಸಿ, ಪದವಿ ಪಡೆದ ವಿಷಯಗಳನ್ನೆ ಅಲ್ಲದೆ ಇತರ ಮೂಲಗಳಿಂದ ವಿಷಯ ಸಂಗ್ರಹಣೆ ಮಾಡಿಕೊಂಡಾಗ ತಯಾರಿ ಸುಲಭವಾಗುತ್ತದೆ ಎಂದು ಸಲಹೆ ನೀಡಿದರು. ಕಾರ್ಮಿಕ ಇಲಾಖೆ ಜಂಟಿ ಆಯುಕ್ತ ಎಸ್.ಬಿ. ರವಿಕುಮಾರ್ ಶಿಬಿರಾರ್ಥಿಗಳಿಗೆ ಶುಭಹಾರೈಸಿದರು.
ಈ ಸಂದರ್ಭದಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಅಸಿಸ್ಟೆಂಟ್ ಕಮಿಷನರ್ ಎಂ.ಬಿ ಚೆನ್ನಕೇಶವ, ನಗರ ಸಭೆ ಗ್ರೇಡ್-1 ಚೀಪ್ ಆಫೀಸರ್ ಎಂ. ಮಾನಸ ಪರೀಕ್ಷೆ ಕುರಿತು ಮಾಹಿತಿ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಕರಾಮುವಿ ಕುಲಪತಿ ಪ್ರೊ.ಎಸ್.ವಿದ್ಯಾಶಂಕರ್ ಮಾತನಾಡಿ, ಲಾಕ್‌ಡೌನ್‌ನಿಂದ ಸ್ಪರ್ಧಾತ್ಮಕ ಪರೀಕ್ಷೆ ತಯಾರಿಯಲ್ಲಿರುವ ಆಭ್ಯರ್ಥಿಗಳ ಸಿದ್ಧತೆ ತೊಡಕಾಗಬಾರದೆಂಬ ಉದ್ದೇಶದಿಂದ ಕೇವಲ ಒಂದೇ ವಾರದಲ್ಲಿ ಜೂಮ್‌ಗೆ ಪರ್ಯಾಯವಾಗಿ ಆ್ಯಪ್ ರೂಪಿಸಿದ್ದು, ಕೆಎಸ್‌ಓಯು ಸ್ಟೂಡೆಂಟ್ ಆ್ಯಪ್ ಎಂಬ ವಿಡಿಯೋ ಪ್ಲಾಟ್‌ಫಾರಂ ಸೃಷ್ಟಿಸಿದ್ದೇವೆ. ಈಗ ಆನ್‌ಲೈನ್ ಕಲಿಕೆಯಲ್ಲಿ ಅತ್ಯುತ್ತಮ ವೇದಿಕೆಯಾಗಿ ಕೆಎಸ್‌ಓಯು ಹೊರಹೊಮ್ಮಿದೆ ಎಂದು ತಿಳಿಸಿದರು.

ಸಮಾರಂಭದಲ್ಲಿ ಕರಾಮುವಿ ಕುಲಸಚಿವ ಪ್ರೊ. ಲಿಂಗರಾಜಗಾಂಧಿ, ಹಣಕಾಸು ಅಧಿಕಾರಿ ಡಾ. ಎ. ಖಾದರ್‌ಪಾಷ, ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಉಪಸ್ಥಿತರಿದ್ದರು.

Vishwa News 24

Recent Posts

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ – vishwanews24

ಬೇಕರಿ ತಿನಿಸು, ಚಿಪ್ಸ್‌ಗಳಲ್ಲಿ ಕ್ಯಾನ್ಸರ್ ಕಾರಕ ರಾಸಾಯನಿಕ ಬಣ್ಣಗಳ ಬಳಕೆ: ಆಹಾರ ಸುರಕ್ಷತಾ ಇಲಾಖೆ ವರದಿ ಪ್ರಕಟ ಬೆಂಗಳೂರು: ಬೇಕರಿಯ…

6 minutes ago

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ – vishwanews24

ಮಂಗಳೂರು: ಬಕ್ರೀದ್ ಹಿನ್ನೆಲೆ ಅಕ್ರಮ ದನಕರುಗಳ ಹತ್ಯೆ  ಸಾಗಾಟಕ್ಕೆ ಅವಕಾಶವಿಲ್ಲ : ದ.ಕ. ಡಿಸಿ ಸೂಚನೆ ಮಂಗಳೂರು: ಮುಂಬರುವ ಬಕ್ರೀದ್…

19 minutes ago

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! vishwanews24

ನಾಳೆ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ ..! ಬೆಂಗಳೂರು : ಮೂರು ವರ್ಷಗಳಿಂದ ರಾಜ್ಯವನ್ನು ಆಳಿದ ಸಿದ್ದರಾಮಯ್ಯ ಆಳ್ವಿಕೆ…

26 minutes ago

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ – vishwanews24

ಉಡುಪಿ: ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ವಂಚನೆ ಪ್ರಕರಣ: ಪೋಕ್ಸೋ ಕಾಯಿದೆಯಡಿ ಇಬ್ಬರ ಬಂಧನ ಉಡುಪಿ: ಅಪ್ರಾಪ್ತ ಬಾಲಕಿಯೊಬ್ಬಳನ್ನು ಪ್ರೀತಿಯ…

18 hours ago

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ – vishwanews24

ಹೆಜಮಾಡಿ ಕಾಂಗ್ರೆಸ್ ಗೆ ಭರವಸೆ ನಾಯಕ : ಪ್ರಭೋದ್ ಚಂದ್ರ ಹೆಜಮಾಡಿ ಕಾಪು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ…

22 hours ago

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  – vishwanews24

ಉಡುಪಿ: ಟಯರ್ ಸ್ಫೋಟಗೊಂಡು ಮೀನು ಸಾಗಾಟದ ಲಾರಿ ಪಲ್ಟಿ  ಉಡುಪಿ: ಉಡುಪಿಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಮೀನು ಸಾಗಾಟದ ಲಾರಿಯೊಂದು…

23 hours ago