Featured

ಉಡುಪಿ : Zee Kannada ರಿಯಾಲಿಟಿ ಶೋ ನಲ್ಲಿ ಯಕ್ಷಗಾನಕ್ಕೆ ಅವಮಾನ: ಯಕ್ಷಾಭಿಮಾನಿಗಳಿಂದ ಸಚಿವ ಸುನೀಲ್‌ ಹಾಗೂ ಕೋಟಾ ಠಾಣೆಗೆ ದೂರು – Vishwanews24

Zee Kannada ರಿಯಾಲಿಟಿ ಶೋ ನಲ್ಲಿ ನಡೆದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ..

ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ..

ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು..

ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹ..

ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರ ಭರವಸೆ..

ಉಡುಪಿ: ಕನ್ನಡದ ಖಾಸಗಿ ವಾಹಿನಿಯ ರಿಯಾಲಿಟಿ ಷೋನಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನಕ್ಕೆ ಅವಮಾನ ಮಾಡಿದ್ದಾರೆ. ಆದ್ದರಿಂದ ವಾಹಿನಿಯನ್ನು ಬಹಿಷ್ಕರಿಸುವ ಬಗ್ಗೆ ಯಕ್ಷಾಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಅಭಿಯಾನ ನಡೆಸುತ್ತಿದ್ದು, ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್‌ಗೆ ದೂರು ನೀಡಿದ್ದಾರೆ.

ಕನ್ನಡ ಮನೋರಂಜನ ವಾಹಿನಿಯೊಂದರ ರಿಯಾಲಿಟಿ ಷೋನಲ್ಲಿ ನಡೆದ ಡ್ಯಾನ್ಸ್‌ ಸ್ಪರ್ಧೆಯಲ್ಲಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ.

ಅದರಲ್ಲಿ ಗಂಡುಕಲೆಯನ್ನು ಅಶ್ಲೀಲವಾಗಿ ಬಿಂಬಿಸಿದ್ದಾರೆ ಎಂಬ ಆರೋಪವನ್ನು ಸಾಮಾಜಿಕ ಜಾಲತಾಣದಲ್ಲಿ ಯಕ್ಷಾಭಿಮಾನಿಗಳು ನಡೆಸುತ್ತಿದ್ದಾರೆ. ಇದೇ ಖಾಸಗಿ ವಾಹಿನಿಯಿಂದ ಸತತ ಮೂರನೇ ಬಾರಿ ಯಕ್ಷಗಾನಕ್ಕೆ ಅವಮಾನ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ : ಮಂಗಳೂರು: ಏಕ ಬಳಕೆಯ ಪ್ಲಾಸ್ಟಿಕ್ ನಿಷೇಧ ಕಟ್ಟುನಿಟ್ಟಾಗಿ ಜಾರಿಗೆ : ಜಿಲ್ಲಾಧಿಕಾರಿ ಸೂಚನೆ – Vishwanews24 

ಯಾವುದೇ ಖಾಸಗಿ ವಾಹಿನಿಯಲ್ಲೂ ಯಕ್ಷಗಾನಕ್ಕೆ ಅವಮಾನವಾಗಬಾರದು. ಈ ಬಗ್ಗೆ ಪರೀಕ್ಷಿಸಲು ಸಮಿತಿ ರಚನೆ ಮಾಡಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಸುನಿಲ್ ಕುಮಾರ್‌ಗೆ ದೂರು ನೀಡಿದ್ದಾರೆ. ಈ ಬಗ್ಗೆ ಪರಿಶೀಲಿಸುವುದಾಗಿ ಸಚಿವರು ಭರವಸೆ ನೀಡಿದ್ದು, ಜೊತೆಗೆ ಉಡುಪಿ ಜಿಲ್ಲೆಯ ಕೋಟ ಪೊಲೀಸ್ ಠಾಣೆಗೆ ದೂರು ಕೂಡಾ ನೀಡಲಾಗಿದೆ.

ಕರಾವಳಿ ಭಾಗದಲ್ಲಿ ದೇವರ ಆರಾಧನೆಯ ಭಾಗವಾಗಿ ನಡೆಯುವ ಯಕ್ಷಗಾನಕ್ಕೆ ಹಾಗೂ ವೇಷಧಾರಿಗಳಿಗೆ ಸಿನಿಮಾ ನಟರಂತೆ ಅಭಿಮಾನಿಗಳಿದ್ದಾರೆ. ಕರಾವಳಿ ಭಾಗದಲ್ಲಿ ಹರಕೆ ಹೊತ್ತು ಯಕ್ಷಗಾನಗಳನ್ನು ನಡೆಸುತ್ತಾರೆ. ಹಲವು ದೇವಾಲಯಗಳು ಯಕ್ಷಗಾನ ಮೇಳ ನಡೆಸುತ್ತಿವೆ. ಇಂತಹ ಅಶ್ಲೀಲ ನೃತ್ಯದಿಂದ ಕರಾವಳಿಗರ ಧಾರ್ಮಿಕ ಭಾವನೆಗೆ ಧಕ್ಕೆ ಉಂಟಾಗಿದೆ. ಯಕ್ಷಾಭಿಮಾನಿಗಳಿಗೆ ನೋವುಂಟು ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು. ವಾಹಿನಿಯ ಮುಖ್ಯಸ್ಥರು ಮತ್ತು ನೃತ್ಯ ಸಂಯೋಜಕರು ಅದೇ ಕಾರ್ಯಕ್ರಮದಲ್ಲಿ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸುತ್ತಿದ್ದಾರೆ.

ಇದನ್ನೂ ಓದಿ : ಉಡುಪಿ : ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ಹುದ್ದೆಗೆ ಅರ್ಜಿ ಆಹ್ವಾನ – Vishwanews24 

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

12 hours ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

12 hours ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

12 hours ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

12 hours ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

13 hours ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

1 day ago