Featured

ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ – Vishwanews24

ಉತ್ತಮ ಜಿಲ್ಲಾ ಚುನಾವಣಾಧಿಕಾರಿ ಪ್ರಶಸ್ತಿ ಪಡೆದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ

ಉಡುಪಿ:  ಭಾರತ ಚುನಾವಣಾ ಆಯೋಗವು 13ನೇ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು, “Nothing like voting, I vote for sure” “ ಮತದಾನಕ್ಕಿಂತ ಇನ್ನೊಂದಿಲ್ಲ, ನಾನು ಖಚಿತವಾಗಿ ಮತದಾನ ಮಾಡುವೆ” ಎಂಬ ಧ್ಯೇಯವಾಕ್ಯದೊಂದಿಗೆ ಆಚರಿಸುವಂತೆ ನಿರ್ದೇಶನ ನೀಡಿದ್ದು, ಅದರಂತೆ ರಾಜ್ಯ ಮಟ್ಟದಲ್ಲಿ ಇಂದು ಸರ್‌ ಪುಟ್ಟಣ್ಣಚೆಟ್ಟಿ ಪುರಭವನ ಬೆಂಗಳೂರು ಇಲ್ಲಿ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಗಿದೆ.

ಈ ಸಂದರ್ಭದಲ್ಲಿ ರಾಜ್ಯ ಮಟ್ಟದಲ್ಲಿ ವಿವಿಧ ವಿಭಾಗಗಲ್ಲಿ ಉತ್ತಮ ಸಾಧನೆ ಮಾಡಿದ ಅಧಿಕಾರಿ ಸಿಬ್ಬಂದಿಗಳನ್ನು ಆಯ್ಕೆ ಮಾಡಲಾಗಿದ್ದು, ಅದರಂತೆ “ಜಿಲ್ಲಾ ಚುನಾವಣಾಧಿಕಾರಿ” ವಿಭಾಗದಲ್ಲಿ ಆಯ್ಕೆಯಾದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅವರಿಗೆ ಕರ್ನಾಟಕ ರಾಜ್ಯದ ಘನತೆವೆತ್ತ ರಾಜ್ಯಪಾಲರು ಪ್ರಶಸ್ತಿ ನೀಡಿದರು.

.ಈ ಪ್ರಶಸ್ತಿ ಪಡೆಯುವಲ್ಲಿ ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳ (ಬಿಎಲ್ಒ), ಮತಗಟ್ಟೆಮಟ್ಟದ ಅಧಿಕಾರಿಗಳ ಮೇಲ್ವಿಚಾರಕರ, ಸಹಾಯಕ ಮತದಾರರ ನೋಂದಣಾಧಿಕಾರಿಗಳ, ಮತದಾರರ ನೋಂದಣಿ ಅಧಿಕಾರಿಯವರ, ಸ್ವೀಪ್‌ ತಂಡ, ಕಾಲೇಜು ಪ್ರಾಂಶುಪಾಲರುಗಳು, ಜಿಲ್ಲೆಯ ಚುನಾವನಾ ಶಾಖೆಯ ಅಧಿಕಾರಿ, ಸಿಬ್ಬಂದಿಗಳು ಮತ್ತು ಜಿಲ್ಲೆಯಲ್ಲಿ ಹೊಸದಾಗಿ ಮತದಾರರ ಪಟ್ಟಿಗೆ ನೋಂದಣಿ ಮಾಡಿಕೊಂಡ ಯುವ ಮತದಾರರು ಮತ್ತು ಎಲ್ಲಾ ಜಿಲ್ಲೆಯ ಮತದಾರರ ಶ್ರಮವಿದ್ದು ಇವರೆಲ್ಲರನ್ನು ಅಭಿನಂದಿಸುತ್ತಾ, ಮುಂಬರುವ ಚುನಾವಣಾ ಪ್ರಕ್ರೀಯೆಗಳಲ್ಲಿ ಸಹ ಎಲ್ಲಾ ಸಹಕಾರವನ್ನು ನೀಡುವಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

16 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

17 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

18 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

18 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

18 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

18 hours ago