ಉತ್ತಮ ಪ್ರಜಾಕೀಯ ಪಕ್ಷಕ್ಕೆ `ಆಟೋ ರಿಕ್ಷಾ’ ಚಿಹ್ನೆ : ಸಂತಸ ಹಂಚಿಕೊಂಡ ಉಪೇಂದ್ರ – Vishwanews24
ಉತ್ತಮ ಪ್ರಜಾಕೀಯ ಪಕ್ಷಕ್ಕೆ `ಆಟೋ ರಿಕ್ಷಾ’ ಚಿಹ್ನೆ : ಸಂತಸ ಹಂಚಿಕೊಂಡ ಉಪೇಂದ್ರ
ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿದ್ದು, ಈ ನಡುವೆ ನಟ ಉಪೇಂದ್ರ ಅವರ ಉತ್ತಮ ಪ್ರಜಾಕೀಯ ಪಕ್ಷಕ್ಕೆ ಚುನಾವಣಾ ಆಯೋಗ ಚಿಹ್ನೆ ನೀಡಿ ಆದೇಶ ಹೊರಡಿಸಿದೆ.
ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ನಟ ಉಪೇಂದ್ರ, ಉತ್ತಮ ಪ್ರಜಾಕೀಯ ಪಕ್ಷಕ್ಕೆ ಈ ಬಾರಿಯ 2023 ವಿಧಾನಸಭಾ ಚುನಾವಣೆಗೆ ಕಾಮನ್ ಸಿಂಬಲ್ ಆಟೋ ರಿಕ್ಷಾ ಚಿಹ್ನೆ ಲಭಿಸಿದೆ.

ಎಲ್ಲರಿಗೂ ಶುಭಾಶಯಗಳು ಎಂದು ತಿಳಿಸಿದ್ದಾರೆ.
https://twitter.com/nimmaupendra/status/1628787472464494593?ref_src=twsrc%5Etfw%7Ctwcamp%5Etweetembed%7Ctwterm%5E1628787472464494593%7Ctwgr%5E8135f5f34779bb6e1bbd928440612165669403b0%7Ctwcon%5Es1_&ref_url=https%3A%2F%2Fm.dailyhunt.in%2Fnews%2Findia%2Fkannada%2Fforyou%3Fmode%3Dpwaaction%3Dclicklaunch%3Dtrue
ಉತ್ತಮ ಪ್ರಜಾಕೀಯ ಪಕ್ಷದಿಂದ ಕರ್ನಾಟಕ ವಿಧಾನಸಭಾ ಚುನಾವಣೆ 2023ರಲ್ಲಿ ಸ್ಪರ್ಧಿಸುವ ಎಲ್ಲ ಅಭ್ಯರ್ಥಿಗಳಿಗೆ ಆಟೋ ರಿಕ್ಷಾವನ್ನು ಸಾಮಾನ್ಯ ಚಿಹ್ನೆ ಎಂದು ಚುನಾವಣಾ ಆಯೋಗ ನಿಗದಿಪಡಿಸಿದೆ. ಉತ್ತಮ ಪ್ರಜಾಕೀಯ ಪಕ್ಷ ನೋಂದಾಯಿತ ಮಾನ್ಯತೆ ಇಲ್ಲದ ಪಕ್ಷವಾಗಿರುವುದರಿಂದ ಚುನಾವಣೆ ವೇಳೆ ಚುನಾವಣಾ ಆಯೋಗದಿಂದ ಚಿಹ್ನೆ ಪಡೆಯಬೇಕಾಗಿದೆ.

ಉತ್ತಮ ಪ್ರಜಾಕೀಯ ಪಾರ್ಟಿ ಹೆಸರಿನಲ್ಲಿ ಉಪೇಂದ್ರ ಅವರು ಈಗಾಗಲೇ ಪಕ್ಷವನ್ನು ಸ್ಥಾಪಿಸಿ ರಾಜ್ಯಾದ್ಯಂತ ಪ್ರವಾಸ ಕೂಡ ಮಾಡಿದ್ದಾರೆ. ಈಗಾಗಲೇ ಪಕ್ಷಕ್ಕೆ ಗ್ರಾಮ ಪಂಚಾಯತ್ ನಲ್ಲಿ ಬೆಂಬಲಿತ ಸದಸ್ಯ ಕೂಡ ಇದ್ದಾರೆ. ಇದೀಗ ಚುನಾವಣಾ ಆಯೋಗವು ಉತ್ತಮ ಪ್ರಜಾಕೀಯ ಪಾರ್ಟಿಗೆ ಆಟೋ ರಿಕ್ಷಾ ಚಿಹ್ನೆಯನ್ನು ನೀಡಿದೆ.
ಮಂಗಳೂರು : ನೂತನ ನಗರ ಪೊಲೀಸ್ ಕಮಿಷನರ್ ಆಗಿ ಕುಲದೀಪ್ ಆರ್ ಜೈನ್ ಅಧಿಕಾರ ಸ್ವೀಕಾರ – Vishwanews24
