Featured

ಉಡುಪಿ: ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ : ಯಶ್ ಪಾಲ್ ಸುವರ್ಣ ಆಕ್ರೋಶ – vishwanews24

ಮತೀಯ ಶಕ್ತಿಗಳ ಓಲೈಕೆಗಾಗಿ ಉತ್ತಮ ಶಿಕ್ಷಕ ಪ್ರಶಸ್ತಿ ಹಿಂಪಡೆದು ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದ ರಾಜ್ಯ ಸರಕಾರ : ಯಶ್ ಪಾಲ್ ಸುವರ್ಣ

ಉಡುಪಿ: ಎರಡು ವರ್ಷಗಳ ಹಿಂದೆ ಮತೀಯ ಶಕ್ತಿಗಳ ಕುಮ್ಮಕ್ಕಿನಿಂದ ಹಿಜಾಬ್ ವಿವಾದ ಸೃಷ್ಟಿಸಿ ಕಾಲೇಜಿನ ಶಿಕ್ಷಣ ವ್ಯವಸ್ಥೆಗೆ ಧಕ್ಕೆ ತರಲು ಯತ್ನಿಸಿದ ವಿದ್ಯಾರ್ಥಿಗಳ ನಡೆಯನ್ನು ಖಂಡಿಸಿದ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಬಿ. ಜಿ. ರಾಮಕೃಷ್ಣ ರವರಿಗೆ ಶಿಕ್ಷಣ ಇಲಾಖೆಯ ವತಿಯಿಂದ ಆಯ್ಕೆಯಾಗಿದ್ದ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ರಾಜ್ಯ ಸರಕಾರ ಮತೀಯ ಶಕ್ತಿಗಳ ಓಲೈಕೆಗಾಗಿ ಹಿಂಪಡೆಯುವ ಮೂಲಕ ರಾಜ್ಯದ ಸಮಸ್ತ ಶಿಕ್ಷಕ ವೃಂದಕ್ಕೆ ಅಪಮಾನ ಮಾಡಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಶಿಕ್ಷಕರ ಆಯ್ಕೆ ಸಮಿತಿ ಶಿಕ್ಷಕರ ಸಾಧನೆ, ಅರ್ಹತೆಯನ್ನು ಪರಾಮರ್ಶಿಸಿ ಶ್ರೇಷ್ಠ ಶಿಕ್ಷಕರಿಗೆ ಪ್ರಶಸ್ತಿಯನ್ನು ನೀಡುವ ಪ್ರಶಸ್ತಿಯ ಘನತೆಗೆ ರಾಜ್ಯ ಸರ್ಕಾರ ಧಕ್ಕೆ ತಂದಿದೆ. ಶಿಕ್ಷಣ ಇಲಾಖೆಯಲ್ಲಿ ಇಸ್ಲಾಮೀಕರಣ ಮಾಡಲು ಹೊರಟ ರಾಜ್ಯ ಸರಕಾರದ ನಡೆ ಖಂಡನೀಯ

ಉಡುಪಿ ಜಿಲ್ಲೆ ಶಿಕ್ಷಣ ಕ್ಷೇತ್ರದ ಸಾಧನೆಗಾಗಿ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದು, ಈ ಜಿಲ್ಲೆಯ ಓರ್ವ ದಕ್ಷ ಪ್ರಾಮಾಣಿಕ ಶಿಕ್ಷಕರಿಗೆ ಮಾಡಿರುವ ಅಪಮಾನ ಇಡೀ ಜಿಲ್ಲೆಯ ಶಿಕ್ಷಣ ವ್ಯವಸ್ಥೆಗೆ ಮಾಡಿದ ಅವಮಾನ.

ವಿದ್ಯಾರ್ಥಿಗಳ ಭವಿಷ್ಯದ ನಿಟ್ಟಿನಲ್ಲಿ ಶಾಲೆಯ ಶಿಕ್ಷಣ ವ್ಯವಸ್ಥೆಯನ್ನು ಕಾಪಾಡಲು ಮುಂದಾದ ಪ್ರಾಂಶುಪಾಲರನ್ನು ಗುರಿಯಾಗಿಸಿ ಮಾನಸಿಕ ಸ್ಥೆರ್ಯ ಕುಗ್ಗಿಸಲು ರಾಜ್ಯ ಸರ್ಕಾರ ಮುಂದಾಗಿದೆ. ಹಿಜಾಬ್ ವಿವಾದದ ಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಧಕ್ಕೆ ತಂದ ಮತೀಯ ಶಕ್ತಿಗಳಿಗೆ ರಾಜ್ಯ ಸರ್ಕಾರ ಪರೋಕ್ಷ ಬೆಂಬಲ ನೀಡುತ್ತಿರುವುದು ದುರದೃಷ್ಟಕರ.

ರಾಜ್ಯ ಸರ್ಕಾರ ತಕ್ಷಣ ತನ್ನ ನಿರ್ಧಾರವನ್ನು ಪುನರ್ ಪರಿಶೀಲಿಸಿ ಪ್ರಶಸ್ತಿಗೆ ಅತ್ಯಂತ ಅರ್ಹರಾದ ಬಿ.ಜಿ. ರಾಮಕೃಷ್ಣ ರವರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸ ಬೇಕು. ತಪ್ಪಿದಲ್ಲಿ ಜಿಲ್ಲೆಯ ಶಿಕ್ಷಕರಿಗೆ ನೈತಿಕ ಸ್ಥೆರ್ಯ ತುಂಬುವ ನಿಟ್ಟಿನಲ್ಲಿ ಉಗ್ರ ಹೋರಾಟದ ಎಚ್ಚರಿಕೆ ನೀಡಿದ್ದಾರೆ.

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

2 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

3 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

3 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

3 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

7 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

8 hours ago