Featured

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ : ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ – vishwanews24

ಉತ್ತರಕಾಶಿಯಲ್ಲಿ ಭೀಕರ ಮೇಘಸ್ಫೋಟ : ದಿಢೀರ್ ಪ್ರವಾಹಕ್ಕೆ ಕೊಚ್ಚಿ ಹೋದ ಗ್ರಾಮ

ಡೆಹ್ರಾಡೂನ್: ಉತ್ತರಾಖಂಡದ ಉತ್ತರಕಾಶಿಯಲ್ಲಿ ಮಂಗಳವಾರ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ದಿಢೀರ್ ಪ್ರವಾಹ ಮತ್ತು ಖೀರ್ ಗಂಗಾ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಣ್ಣು ಕುಸಿತವಾಗಿ ಧರಾಲಿ ಗ್ರಾಮ ಕೊಚ್ಚಿ ಹೋಗಿದೆ.

ಹಲವಾರು ಮನೆಗಳು, ಹೋಟೆಲ್‌ಗಳು ಮತ್ತು ಹೋಂಸ್ಟೇಗಳು ಉಕ್ಕಿ ಹರಿಯುವ ನೀರಿನಲ್ಲಿ ಕೊಚ್ಚಿ ಹೋಗಿವೆ. ಖೀರ್ ಗಂಗಾ ರೌದ್ರಾವತಾರಕ್ಕೆ ಇಡೀ ಊರೇ ಸರ್ವನಾಶವಾಗಿದ್ದು, 60ಕ್ಕೂ ಹೆಚ್ಚು ಮಂದಿ ಜಲಪ್ರಳಯದಲ್ಲಿ ಕೊಚ್ಚಿ ಹೋಗಿರುವ ಶಂಕೆ ವ್ಯಕ್ತವಾಗಿದೆ.

ಸ್ಥಳಕ್ಕೆ ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ದೌಡಾಯಿಸಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಬೆಟ್ಟದ ಮೇಲಿನಿಂದ ಏಕಾಏಕಿ ನದಿಯಂತೆ ನೀರು ಹರಿದು ಬಂದು ಇಡೀ ಗ್ರಾಮವನ್ನೇ ಕೊಚ್ಚಿಕೊಂಡು ಹೋಗಿದೆ. ಈ ಭೀಕರ ಪ್ರವಾಹದ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಏಕಾಏಕಿ ಜಲಪ್ರಳಯ ಉಂಟಾದ ಪರಿಣಾಮ ಜನರು ಕಿರುಚಾಡುತ್ತಿರುವುದು ವೀಡಿಯೋದಲ್ಲಿ ಸೆರೆಯಾಗಿದೆ.

ಸದ್ಯ ಉತ್ತರಾಖಂಡ ಸಿಎಂ ಪುಷ್ಕರ್ ಸಿಂಗ್ ಧಾಮಿ ದುರಂತದ ಬಗ್ಗೆ ಮಾಹಿತಿ ಪಡೆದಿದ್ದಾರೆ. ಮೇಘಸ್ಫೋಟದಲ್ಲಿ ದೊಡ್ಡಮಟ್ಟದ ಹಾನಿಯಾಗಿರುವ ಮಾಹಿತಿ ಇದೆ. ಸ್ಥಳದಲ್ಲಿ ರಕ್ಷಣಾ ಕಾರ್ಯ ನಡೆಯುತ್ತಿದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

5 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago