ನವದೆಹಲಿ: ಉತ್ತರ ಪ್ರದೇಶದ ಕುಶಿನಗರದಲ್ಲಿ ನಿರ್ಮಾಣವಾಗಿರುವ ವಿಮಾನ ನಿಲ್ದಾಣವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬುಧವಾರ ಉದ್ಘಾಟನೆ ಮಾಡಿದ್ದಾರೆ.
ವಿಮಾನ ನಿಲ್ದಾಣ ಉದ್ಘಾಟಿಸಿದ ಬಳಿಕ ಮಾತನಾಡಿರುವ ಪ್ರಧಾನಿ ಮೋದಿಯವರು, ಕುಶಿನಗರ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ ವಾಯು ಸಂಪರ್ಕವಷ್ಟೇ ಅಲ್ಲ, ರೈತರು, ಪಶು ಪಾಲಕರು, ಅಂಗಡಿಯವರು, ಕಾರ್ಮಿಕರು, ಸ್ಥಳೀಯ ಕೈಗಾರಿಕೋದ್ಯಮಿಗಳು ಸೇರಿದಂತೆ ಎಲ್ಲರಿಗೂ ಪ್ರಯೋಜನವನ್ನು ನೀಡುತ್ತದೆ. ವ್ಯಾಪಾರದ ಪರಿಸರ ವ್ಯವಸ್ಥೆಯನ್ನು ಸೃಷ್ಟಿಸುತ್ತದೆ. ಪ್ರವಾಸೋದ್ಯಮವು ಗರಿಷ್ಠ ಲಾಭವನ್ನು ಪಡೆಯುತ್ತದೆ, ಅಲ್ಲದೆ, ಇಲ್ಲಿನ ಯುವಕರಿಗೆ ಉದ್ಯೋಗವನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.
ಇಂದು ನನ್ನ ಸಂತೋಷ ಎರಡು ಪಟ್ಟು ಹೆಚ್ಚಾಗಿದೆ. ನನ್ನಲ್ಲಿನ ಆಧ್ಯಾತ್ಮಿಕ ಪ್ರಯಾಣದ ಬಗೆಗಿನ ಕುತೂಹಲ ಹೆಚ್ಚಾಗಿದ್ದು, ವಿಮಾನ ನಿಲ್ದಾಣದ ಉದ್ಘಾಟನೆ ಸಂತೃಪ್ತಿಯ ಭಾವನೆಯನ್ನು ತಂದಿದೆ. ಪೂರ್ವಾಂಚಲದ ಪ್ರತಿನಿಧಿಯಾಗಿ, ಬದ್ಧತೆಯ ನೆರವೇರಿಕೆಗೆ ಇದು ಸಕಾಲವಾಗಿದೆ ಎಂದು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಕುಶಿನಗರ ವಿಮಾನ ನಿಲ್ದಾಣವನ್ನು ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನಾಗಿ ಘೋಷಿಸಲು ಪ್ರಧಾನಿ ಮೋದಿ ಅಧ್ಯಕ್ಷತೆಯ ಕೇಂದ್ರ ಸಂಪುಟ ಜೂನ್ 2020 ರಲ್ಲಿ ಅನುಮೋದನೆ ನೀಡಿತ್ತು.
ಕುಶಿನಗರ ವಿಮಾನ ನಿಲ್ದಾಣವು ಶ್ರಾವಸ್ತಿ, ಕಪಿಲ್ವಾಸ್ತು, ಲುಂಬಿನಿ (ಕುಶಿನಗರವು ಬೌದ್ಧ ಸಾಂಸ್ಕೃತಿಕ ತಾಣ) ನಂತಹ ಹಲವಾರು ಬೌದ್ಧ ಸಾಂಸ್ಕೃತಿಕ ತಾಣಗಳ ಹತ್ತಿದಲ್ಲಿದೆ. ಕುಶಿನಗರ ವಿಮಾನ ನಿಲ್ದಾಣವನ್ನು “ಅಂತರಾಷ್ಟ್ರೀಯ ವಿಮಾನ ನಿಲ್ದಾಣ” ವಾಗಿ ಘೋಷಣೆ ಮಾಡಿರುವುದು ಇತರೆ ರಾಷ್ಟ್ರಗಳೊಂದಿನ ಸಂಪರ್ಕವನ್ನು ಹೆಚ್ಚಿಸುತ್ತದೆ. ಸುಧಾರಿತ ಸಂಪರ್ಕವನ್ನು ನೀಡುತ್ತದೆ. ಅಲ್ಲದೆ, ದೇಶೀಯ/ಅಂತರಾಷ್ಟ್ರೀಯ ಪ್ರವಾಸೋದ್ಯಮ ಮತ್ತು ಪ್ರದೇಶಗಳ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡುತ್ತದೆ.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…