Featured

ಉತ್ತರಪ್ರದೇಶ :ಎರಡು ವರ್ಷಗಳಲ್ಲಿ ಒಂದೇ ಒಂದು ಕೋಮುಗಲಭೆ ಇಲ್ಲದೆ ರಾಜ್ಯ ಶಾಂತವಾಗಿದೆ : ಯೋಗಿ ಆದಿತ್ಯನಾಥ್ – Vishwanews24

ಲಕ್ನೋ: ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷಗಳು ಪೂರ್ಣಗೊಳಿಸಿದ್ದು, ಇದುವರೆಗೂ ರಾಜ್ಯದಲ್ಲಿ ಒಂದೇ ಒಂದು ಗಲಭೆಯೂ ನಡೆದಿಲ್ಲ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ.

ಉತ್ತರಪ್ರದೇಶದಲ್ಲಿ ಬಿಜೆಪಿ ಸರ್ಕಾರ ಎರಡು ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್,  ರಾಜ್ಯದಲ್ಲಿ ಬಿಜೆಪಿ ಸರ್ಕಾರ ಉತ್ತಮ ಆಡಳಿತ ನೀಡಲು ರಾಜ್ಯದ 23 ಕೋಟಿ ಜನತೆ ಸಕಾರಾತ್ಮಕವಾಗಿ ಸಹಕರಿಸಿದ್ದರಿಂದಲೇ ರಾಜ್ಯದ ಅಭಿವೃದ್ಧಿ ಸಾಧ್ಯವಾಗಿದೆ. ಹಾಗಾಗಿ ಜನತೆಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಯೋಗಿ ಆದಿತ್ಯನಾಥ್ ಹೇಳಿದರು.

ಕೋಮುಗಲಭೆ ಇಲ್ಲದೆ ರಾಜ್ಯ ಶಾಂತವಾಗಿದೆ

ಮಾರ್ಚ್ 19, 2017ರಲ್ಲಿ ಉತ್ತರಪ್ರದೇಶದ ಜನತೆ ಸೇವೆ ಮಾಡಲು ನಮಗೆ ಅವಕಾಶ ದೊರೆಯಿತು. ಅಲ್ಲಿಂದ ಇಲ್ಲಿಯವರೆಗೆ ಹದಗೆಟ್ಟಿದ್ದ ಉತ್ತರಪ್ರದೇಶದ ಪರಿಸ್ಥಿತಿಯನ್ನು ಬದಲಿಸುವಲ್ಲಿ ನಾವು ಯಶಸ್ವಿಯಾಗಿದ್ದೇವೆ. ಈ ಹಿಂದೆ ರಾಜ್ಯದಲ್ಲಿದ್ದ ಕೋಮುಗಲಭೆ ಈಗ ಹೆಸರಿಲ್ಲದಂತಾಗಿದೆ. ಈಗ ರಾಜ್ಯ ಶನತ್ವಾಗಿದೆ. ಕಳೆದ ಎರಡು ವರ್ಷಗಳಲ್ಲಿ ರಾಜ್ಯದಲ್ಲಿ ಒಂದೇ ಒಂದು ಗಲಭೆ ನಡೆದಿಲ್ಲ. ಇದು ನಮ್ಮ ಸರ್ಕಾರದ ಯಶಸ್ವಿ ಆಡಳಿತಕ್ಕೆ ಸಾಕ್ಷಿಯಾಗಿದೆ ಎಂದು ಯೋಗಿ ಹೇಳಿದರು.

ಕಳೆದ 10 ವರ್ಷಗಳಿಂದ ರಾಜ್ಯದಲ್ಲಿ ಆಗದ ಬಂಡವಾಳ ಹೂಡಿಕೆಯನ್ನು ನಾವು ಎರಡು ವರ್ಷಗಳಲ್ಲಿ ದ್ವಿಗುಣ ಮಾಡಿದ್ದೇವೆ. 15 ಲಕ್ಷಕ್ಕೂ ಅಧಿಕ ಯುವಕರಿಗೆ ಉದ್ಯೋಗ ಒದಗಿಸಲಾಗಿದೆ. 68 ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ಜನವರಿ 24ರಂದು ಉತ್ತರಪ್ರದೇಶ ಸಂಸ್ಥಾಪನಾ ದಿನವನ್ನು ರಾಜ್ಯದಲ್ಲಿ ಆಚರಿಸಲಾಯಿತು ಎಂದು ಯೋಗಿ ಆದಿತ್ಯನಾಥ್ ಹೇಳಿದರು.

ಎಸ್ಪಿ-ಬಿಎಸ್ಪಿ ಸರ್ಕಾರ ಟಾರ್ಗೆಟ್ ಮಾಡಿದ ಯೋಗಿ ಆದಿತ್ಯನಾಥ್ 
ಈ ಹಿಂದಿನ ಎಸ್ಪಿ-ಬಿಎಸ್ಪಿ ಸರ್ಕಾರಗಳ ಅಧಿಕಾರವಧಿಯನ್ನು ಟಾರ್ಗೆಟ್ ಮಾಡಿದ ಯೋಗಿ, 1990ರಿಂದಲೂ ಎಸ್ಪಿ-ಬಿಎಸ್ಪಿ ಅಧಿಕಾರವಧಿಯಲ್ಲಿ ರಾಜ್ಯದಲ್ಲಿ ಗಲಭೆ, ದಂಧೆ, ಹಗರಣಗಳು ಎಗ್ಗಿಲ್ಲದಂತೆ ನಡೆದಿದ್ದವು. ರಾಜ್ಯದ ಅಭಿವೃದ್ಧಿಯೂ ಕುಂಠಿತವಾಗಿತ್ತು.  ಅಪರಾಧಗಳ ಸಂಖ್ಯೆ ಹೆಚ್ಚಿ ಕಾನೂನು ಸುವ್ಯವಸ್ಥೆ ಹದಗೆಟ್ಟಿತ್ತು. ಸರ್ಕಾರದ ನೀತಿಗಳಿಂದಾಗಿ ರೈತರು ಆತ್ಮಹತ್ಯೆ ಮಾಡಿಕೊಳ್ಳುವಂತಹ ಪರಿಸ್ಥಿತಿ ಎದುರಾಗಿತ್ತು ಎಂದು ಹೇಳಿದರು.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

2 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

2 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

2 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

2 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

2 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

2 days ago