Featured

ಉತ್ತರಾಖಂಡದಲ್ಲಿ ಭೀಕರ ಅಪಘಾತ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಬಸ್ – vishwanews24

ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಬಸ್ : 20 ಮಂದಿ ದುರ್ಮರಣ , ಹಲವು ಮಂದಿಗೆ ಗಂಭೀರ ಗಾಯ

ಉತ್ತರಕನ್ನಡ: ಚಾಲಕನ ನಿಯಂತ್ರಣ ತಪ್ಪಿದ ಬಸ್ಸೊಂದು ಕಮರಿಗೆ ಉರುಳಿ ಬಿದ್ದ ಪರಿಣಾಮ ಕನಿಷ್ಠ 20 ಪ್ರಯಾಣಿಕರು ಮೃತಪಟ್ಟು ಹಲವು ಮಂದಿ ಗಂಭೀರ ಗಾಯಗೊಂಡಿರುವ ಘಟನೆ ಉತ್ತರಾಖಂಡದ ಅಲ್ಮೋರಾದಲ್ಲಿ ಸೋಮವಾರ (ನ.4) ಸಂಭವಿಸಿದೆ.

ಸೋಮವಾರ ಬೆಳಿಗ್ಗೆ ಸುಮಾರು 9 ಗಂಟೆಯ ವೇಳೆಗೆ ಅಪಘಾತ ಸಂಭವಿಸಿದ್ದು ಈ ವೇಳೆ ಬಸ್ಸಿನಲ್ಲಿ ಕನಿಷ್ಠ 35 ಜನರು ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ. ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ಮತ್ತು ರಾಜ್ಯ ವಿಪತ್ತು ನಿರ್ವಹಣಾ ಪಡೆ (ಎಸ್‌ಡಿಆರ್‌ಎಫ್) ಪೊಲೀಸರು ಮತ್ತು ಸ್ಥಳೀಯರ ತಂಡಗಳು ಮಾರ್ಚುಲಾ ಸಾಲ್ಟ್ ಪ್ರದೇಶದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದೆ.

ಬಸ್ಸಿನಲ್ಲಿ ಮೃತದೇಹಗಳನ್ನು ಹೊರತೆಗೆಯುವ ಕಾರ್ಯ ನಡೆಯುತ್ತಿದ್ದು ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಅಲ್ಮೋರಾ ಪೊಲೀಸ್ ವರಿಷ್ಠಾಧಿಕಾರಿ ದೇವೇಂದ್ರ ಪಿಂಚಾ ತಿಳಿಸಿದ್ದಾರೆ. ಅಲ್ಲದೆ ಗಂಭೀರ ಗಾಯಗೊಂಡವರನ್ನು ರಕ್ಷಣೆ ಮಾಡಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದಿದ್ದಾರೆ.

ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ವಿಪತ್ತು ನಿರ್ವಹಣಾ ಕಾರ್ಯದರ್ಶಿ, ಕುಮಾವೂನ್ ವಿಭಾಗದ ಕಮಿಷನರ್ ಮತ್ತು ಅಲ್ಮೋರಾದ ಜಿಲ್ಲಾ ಮ್ಯಾಜಿಸ್ಟ್ರೇಟ್ ಅವರೊಂದಿಗೆ ಮಾತನಾಡಿ ಅಪಘಾತದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರೆ ಅಲ್ಲದೆ ಅಪಘಾತದಲ್ಲಿ ಮೃತಪಟ್ಟವರಿಗೆ ಸಂತಾಪ ಸೂಚಿಸಿದ್ದು ಗಾಯಗೊಂಡವರಿಗೆ ಉತ್ತಮ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದ್ದಾರೆ.

Vishwa News 24

Recent Posts

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

3 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

3 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

4 hours ago

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  -vishwanews24

ಮೂಡುಬಿದಿರೆ: ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ;  ಪ್ರಯಾಣಿಕರು ಪ್ರಾಣಾಪಾಯದಿಂದ ಪಾರು  ಮೂಡುಬಿದಿರೆ : ಚಲಿಸುತ್ತಿದ್ದ ಕಾರಿನ ಫಾಗ್ ಲೈಟ್‌ನಿಂದ ಅಕಸ್ಮಾತ್ತಾಗಿ ಬೆಂಕಿ…

6 hours ago

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ -vishwanews24

ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ ಕೊಡುತ್ತಾರೆ, ಕೊಡದೆ ಎಲ್ಲಿ ಹೋಗುತ್ತಾರೆ : ಪ್ರಿಯಾಂಕ ಖರ್ಗೆ ಬೆಂಗಳೂರು: ಆರೆಸ್ಸೆಸ್‌ನವರು ಇಂದಲ್ಲ ನಾಳೆ ದಾಖಲೆ…

7 hours ago

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

20 hours ago