ಕೊಪ್ಪಳ: ಏತನೀರಾವರಿ, ಸಮನಾಂತರ ಜಲಾಶಯ, ಕಾಲುವೆಗಳ ನವೀಕರಣ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ನೀರಾವರಿ ಯೋಜನೆಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದರು.
ನಗರದ ತಾಲ್ಲೂಕು ಕ್ರೀಡಾಂಗಣದಲ್ಲಿ ನಡೆದ ಜನಸ್ವರಾಜ್ ಸಮಾವೇಶಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಈ ಹಿಂದೆ ನೀರಾವರಿ ಸಚಿವನಾಗಿದ್ದಾಗ ತುಂಗಭದ್ರ ನಾಲೆಗಳ ಆಧುನೀಕರಣಕ್ಕೆ 1200 ಕೋಟಿ ಅನುದಾನ ನೀಡಿದ ಪರಿಣಾಮ ಇಂದು ಕಾಮಗಾರಿ ಪೂರ್ಣಗೊಂಡಿವೆ. ಕೊಪ್ಪಳ ಏತ ನೀರಾವರಿ ಯೋಜನೆ ಅಂತಿಮ ಹಂತದಲ್ಲಿ ಇದೆ ಎಂದರು.
ಕೃಷ್ಣಾ ಕೊಳ್ಳದ ಯೋಜನೆ ಅನುಷ್ಠಾನಕ್ಕೆ ಕಾಂಗ್ರೆಸ್ ಸರ್ಕಾರ ಎ ಮತ್ತು ಬಿ ಸ್ಕೀಂ ಮಾಡಿ ಮೋಸ ಮಾಡಿದೆ. ಯಾವ ರಾಜ್ಯಗಳಲ್ಲಿ ಇರದ ಈ ಸ್ಕೀಂ ನಮಗೆ ಯಾಕೆ ಎಂದು ಅನೇಕ ಯೋಜನೆಗಳನ್ನು ಸೇರಿಸಿ ಆರಂಭಮಾಡಿದ್ದೇವೆ ಎಂದರು.
ಕಾಂಗ್ರೆಸ್ ಅಧಿಕಾರಕ್ಕಾಗಿ ಕೃಷ್ಣೆಯ ಕಡೆಗೆ ನಡಿಗೆ ಎಂಬ ಪಾದಯಾತ್ರೆ ಹಮ್ಮಿಕೊಂಡು ಸಂಗಮನಾಥನ ಮೇಲೆ ಆಣೆ ಮಾಡಿ 50 ಸಾವಿರ ಕೋಟಿ ನೀಡುವುದಾಗಿ ಹೇಳಿತ್ತು. ಆದರೆ ಅದು ಖರ್ಚು ಮಾಡಿದ್ದು 17 ಸಾವಿರ ಕೋಟಿ ಮಾತ್ರ. ಸುಳ್ಳು ಹೇಳಿದ ಕಾಂಗ್ರೆಸ್ ಗೆ ದುಃಸ್ಥಿತಿ ಬಂದಿದೆ ಎಂದರು.
ಉತ್ತರ ಕರ್ನಾಟಕಕ್ಕೆ ಸತತ ಅನ್ಯಾಯ ಮಾಡಿದೆ. ಜನಪರ ಕೆಲಸ ಮಾಡುವ ಬದ್ಧತೆ ಇರಬೇಕು. ಹೈಕ ಗುಲಾಮಗಿರಿಯ ಸಂಕೇತ ಎಂದು ನಮ್ಮ ನಾಯಕರಾದ ಯಡಿಯೂರಪ್ಪನವರು ಅದನ್ನು ಕಲ್ಯಾಣ ಕರ್ನಾಟಕ ಎಂದು ನಾಮಕರಣ ಮಾಡಿದ್ದಾರೆ. ಅವರ ಆಶಯ ಸಾರ್ಥಕಗೊಳಿಸಲು ಮಂಡಳಿಗೆ ಪ್ರತಿವರ್ಷ 3 ಸಾವಿರ ಕೋಟಿ ಅನುದಾನ ನೀಡುತ್ತೇನೆ ಎಂದು ಘೋಷಿಸಿದರು.
ತುಂಗಭದ್ರಾ ಜಲಾಶಯದಲ್ಲಿ 30 ಟಿಎಂಸಿ ಹೂಳು ತುಂಬಿದೆ. ಅದಕ್ಕಾಗಿ ಕಾರಟಗಿ ಬಳಿ ಸಮಾನಂತರ ಜಲಾಶಯ ನಿರ್ಮಾಣಕ್ಕೆ ಆಂಧ್ರಪ್ರದೇಶದ ಜೊತೆಗೆ ಮಾತನಾಡಿ ಒಪ್ಪಿಗೆ ಪಡೆದು 20 ಕೋಟಿ ವೆಚ್ಚದ ಡಿಪಿಆರ್ ತಯಾರಿಸಲು 14 ಕೋಟಿ ಈಗಾಗಲೇ ಬಿಡುಗಡೆ ಮಾಡಲಾಗಿದೆ ಎಂದರು.
ಕೇಂದ್ರ ಸಚಿವ ಭಗವಂತ ಖೂಬಾ, ಬೃಹತ್ ಕೈಗಾರಿಕೆ ಸಚಿವ ಮುರುಗೇಶ ನಿರಾನಿ, ಸಂಸದ ಸಂಗಣ್ಣ ಕರಡಿ, ಪ್ರತಾಪಸಿಂಹ ಮಾತನಾಡಿದರು. ಶಾಸಕರಾದ ಪರಣ್ಣ ಮುನವಳ್ಳಿ, ಮಹೇಶ, ಬಸವರಾಜ ದಡಢಸಗೂರ ಮುಂತಾದವರು ಇದ್ದರು.
ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…
ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…
ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್ ರಾಯ್ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…
ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…
ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್ ಲಕ್ನೋ: ರಾಮಭಕ್ತರ…
ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…